ಕುಂದಾಪುರ: ಬೆಂಗಳೂರಿನ ಅಡಿಗಾಸ್ ಯಾತ್ರಾ ಇದರ ವ್ಯವಸ್ಥಾಪಕ ನಿರ್ದೇಶಕರಾದ ನಾಗರಾಜ ಅಡಿಗ ಮತ್ತು ಅವರ ಪತ್ನಿ ಆಶಾ ನಾಗರಾಜ ಅವರು ಹೆಮ್ಮಾಡಿ ಜನತಾ ಪ.ಪೂ ಕಾಲೇಜಿಗೆ ಉಚಿತ ಕಂಪ್ಯೂಟರ್ ಕೊಡುಗೆ ನೀಡಿದ್ದಾರೆ. ಜನತಾ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಬಿ.ಮೋಹನ ದಾಸ್ ಶೆಟ್ಟಿ ಅವರು ದಾನಿಗಳಾದ ನಾಗಾರಾಜ ಅಡಿಗ ಮತ್ತು ಆಶಾ ದಂಪತಿ ಅವರನ್ನು ಗೌರವಿಸಿದರು. ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ, ಗೀತಾ ಜೋಷಿ, ಮಂಜುನಾಥ.ಕೆ.ಎಸ್, ಮಂಜುನಾಥ ಚಂದನ್, ಜೆಸ್ಸಿಡಿಸಿಲ್ವ, ಶ್ರೀಲತಾ.ಕೆ ಉಪಸ್ಥಿತರಿದ್ದರು.
Author: Editor Desk
ಕುಂದಾಪುರ: ಸಮೀಪದ ತೆಕ್ಕಟ್ಟೆ ಎಕ್ಸ್‌ಪ್ರೆಸ್ ಬಸ್ ನಿಲ್ದಾಣದ ಬಳಿ ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಹತ್ತು ಚಕ್ರದ ಲಾರಿಯೊಂದು ಮುಂದೆ ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ರಾತ್ರಿ ವೇಳೆ ನಡೆದಿದೆ. ತೆಕ್ಕಟ್ಟೆಯ ನಿಶಾಲ್ ಹೇರ್‌ಡ್ರೆಸ್‌ನ ಮಾಲಕ ರೂಪೇಶ್ ಭಂಡಾರಿ (25) ಮೃತ ದುರ್ದೈವಿ. ರೂಪೇಶ್ ಭಂಡಾರಿ ತೆಕ್ಕಟ್ಟೆಯಿಂದ ಮನೆಗೆ ತೆರಳುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಲಾರಿ, ಬೈಕ್ ಮತ್ತು ಸವಾರನನ್ನು ಸುಮಾರು ನೂರು ಮೀಟರ್ ದೂರಕೆ ಎಳೆದೊಯ್ದಿತ್ತು. ಈ ವೇಳೆ ಬೈಕ್ ಸವಾರ ಲಾರಿಯ ಅಡಿಯಲ್ಲಿ ಸಿಲುಕ್ಕಿದ್ದು, ಅವರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ತೆಕ್ಕಟ್ಟೆ ಫ್ರೆಂಡ್ಸ್ ಆ್ಯಂಬುಲೆನ್ಸ್ ಮೂಲಕ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷದಲ್ಲಿ ಉಡುಪಿ ಜಿಲ್ಲೆಯ ರಸ್ತೆ, ಸೇತುವೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗಾಗಿ ಒಂದು ಸಾವಿರ ಕೋಟಿ ರೂ. ವಿನಿಯೋಗಿಸಲಾಗಿದ್ದು, 5 ವರ್ಷದೊಳಗೆ 5 ಸಾವಿರ ಕೋಟಿ ರೂ. ವ್ಯಯಿಸಲು ಉದ್ದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ ಸೊರಕೆ ಹೇಳಿದರು. ಅವರು ಯಡ್ತರೆ ಗ್ರಾಮದ ನಾಗರಮಕ್ಕಿಂiಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಮಂಜೂರಾದ 2.52 ಕೋಟಿ ವೆಚ್ಚದ ಮದ್ದೋಡಿ ಗೋಳಿಬೇರು ರಸ್ತೆ ಕಾಂಕ್ರೀಟಿಕರಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ರಾಜ್ಯ ಸರ್ಕಾರ ಗ್ರಾಮೀಣ ಭಾಗದ ರಸ್ತೆ ದುರಸ್ತಿಗಾಗಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 17 ಕೋಟಿ ರೂ. ಅನುದಾನ ನೀಡಿದೆ. ಗ್ರಾಮ ವಿಕಾಸ ಕಾರ್ಯಕ್ರಮದ ಮೂಲಕ ಪ್ರತಿ ಶಾಸಕರಿಗೆ 5 ಗ್ರಾಮಗಳನ್ನು ದತ್ತು ಪಡೆದು ಅಭಿವೃಧ್ದಿಪಡಿಸಲು ಅವಕಾಶ ಕಲ್ಪಿಸಿದೆ ಎಂದ ಅವರು ಮುಂದಿನ ದಿನಗಳಲ್ಲಿ ಸರ್ಕಾರ ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗಾಗಿ…
ಬೈಂದೂರು: ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 16ನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ, ಈ ಬಾರಿ ಪ್ರಥಮ ಸ್ಥಾನ ಪಡೆಯುವುದಕ್ಕೆ ಇಲ್ಲಿನ ಶಿಕ್ಷಕರ ಕಠಿಣ ದುಡಿಮೆಯೇ ಕಾರಣ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ ಸೊರಕೆ ಹೇಳಿದರು. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸುಮಾರು 30 ಲಕ್ಷ ರೂ. ವೆಚ್ಚದ ಹೆಚ್ಚುವರಿ ತರಗತಿ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಸಕ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೌಚಾಲಯ ನಿರ್ಮಾಣಕ್ಕಾಗಿ ಈ ಹಿಂದೆ ಇಲ್ಲಿಗೆ ಭೇಟಿ ನೀಡಿದ ಶಿಕ್ಷಣ ಸಚಿವರು ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು, ಅದರಂತೆ ಈಗಾಗಲೇ ೫ ಲಕ್ಷ ರೂ. ಬಿಡುಗಡೆಗೊಳಿಸಿದ್ದಾರೆ, ಮುಂದಿನ ದಿನಗಳಲ್ಲಿ ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ…
ಬೈಂದೂರು: ಇಲ್ಲಿನ ಪ್ರಥಮದರ್ಜೆ ಕಾಲೇಜಿನಲ್ಲಿ ನೂತನ ಹೆಚ್ಚುವರಿ ಕಟ್ಟಡ ಉದ್ಘಾಟನೆ ಹಾಗೂ ಹೆಚ್ಚುವರಿ ಹೊಸ ಕಟ್ಟಡದ ಶಂಕುಸ್ಥಾಪನೆ ಇಂದು ನೆರವೇರಿತು. ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ ಸೊರಕೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯ ಮಾಡಿದ ಬಳಿಕ ಮಾತನಾಡಿ ಎಲ್ಲಾ ರೀತಿಯ ಮೂಲಸೌಕರ್ಯ ಹೊಂದಿರುವ ಬೈಂದೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗ್ರಾಮೀಣ ಭಾಗದ ಸುಮಾರು 700ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಇಲ್ಲಿಯೇ ಸ್ನಾತಕೋತರ ಪದವಿ ಶಿಕ್ಷಣ ಆರಂಭಿಸುವಂತೆ, ವಿಶ್ವವಿದ್ಯಾಲಯಕ್ಕೆ ಹಾಗೂ ಸಂಬಂಧಿತ ಇಲಾಖೆಗೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ಬಹಳಷ್ಟು ವರ್ಷಗಳಿಂದ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಬಹುತೇಕ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ, ಈಗ ಅದರ ಅಂತರ ಹೆಚ್ಚಾಗಿದೆ. ಪ್ರಸ್ತುತ ಉನ್ನತ ಶಿಕ್ಷಣ ಇಲಾಖೆ ಪ್ರಗತಿಪರ ಹೆಜ್ಜೆಯಿರಿಸಿದ್ದು, ಉಪನ್ಯಾಸಕರ ನೇಮಕಾತಿ ಶೀಘ್ರದಲ್ಲಿ ಆಗಲಿದೆ. ಅಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಇತ್ತೀಚೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಕಾರಿಗಳು…
ಉಡುಪಿ: ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಲು ಉತ್ಪಾದಕರ ಒಕ್ಕೂಟ ಹಾಗೂ ಇತರ ಹಲವು ಸಂಘಟನೆಗಳ ಸಹಭಾಗಿತ್ವದಲ್ಲಿ ಅ.4ರಿಂದ 7ರ ವರೆಗೆ ಬೃಹತ್ ಗೋ ಸಮ್ಮೇಳನ ನಡೆಯಲಿದೆ. ವಿನಾಶದ ಅಂಚಿನಲ್ಲಿರುವ ಗೋವುಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಉಡುಪಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಪರ್ಯಾಯ ಶ್ರೀ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು. ಸಮ್ಮೇಳನದಲ್ಲಿ “ಗೋ ಆಧಾರಿತ ಕೃಷಿ, ಗೋ ಆಧಾರಿತ ವಾಣಿಜ್ಯ, ಗೋ ಆಧಾರಿತ ಚಿಕಿತ್ಸೆ, ಗೋ ಆಧಾರಿತ ಜೀವನ’ ವಿಷಯದ ಕುರಿತು ದೇಶದ ಪ್ರಮುಖ ಕೃಷಿ ತಜ್ಞರು, ವಿಜ್ಞಾನಿಗಳು, ಸಾಧಕರು, ಚಿಂತಕರು, ಮಠಾಧೀಶರು ವಿಚಾರ ಮಂಡಿಸಲಿದ್ದಾರೆ. ಗೋ ಜಾಗೃತಿ ಯುವ ಸಮಾವೇಶ ಕೂಡ ನಡೆಯಲಿದೆ ಎಂದವರು ತಿಳಿಸಿದರು.
ಕುಂದಾಪುರ: ಬಂಟ ಸಮುದಾಯದವರು ಎಲ್ಲ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮುಂಚೂಣಿಯಲ್ಲಿದ್ದಾರೆ. ಆದರೆ ಯುವ ಜನಾಂಗ ಮಾತ್ರ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಲ್ಲಿ ಹಿಂದೆ ಉಳಿದಿದೆ. ಬಂಟ ಸಮಾಜದ ಯುವಕರಿಗೆ ಸಾಕಷ್ಟು ಉತ್ತೇಜನ ನೀಡುವ ಮೂಲಕ ಸಂಘಟನೆಗೆ ಇನ್ನಷ್ಟು ಬಲ ತಂದುಕೊಡಬೇಕು ಎಂದು ದುಬೈ ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್‌ನ ಆಡಳಿತ ನಿರ್ದೇಶಕ ವಕ್ವಾಡಿ ಪ್ರವೀಣ್ ಶೆಟ್ಟಿ ಹೇಳಿದರು. ಅವರು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಕುಂದಾಪುರದ ಆರ್.ಎನ್. ಶೆಟ್ಟಿ ಸಭಾಭವನದಲ್ಲಿ ನಡೆದ 2015-16ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದ ಪ್ರತಿಯೊಬ್ಬರೂ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಂಘಟನಾತ್ಮಕವಾಗಿ ಮುನ್ನಡೆಯಬೇಕು ಎಂದರು. ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗುರಿ, ಛಲದಿಂದ ಸಾಧನೆ ರಾಜ್ಯ ಸರಕಾರದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ನಿವೃತ್ತ ನಿರ್ದೇಶಕ ಬಿ.ಎನ್. ಶೆಟ್ಟಿ ಆಶಯ ಭಾಷಣ ಮಾಡಿ,…
ಮುಂಬಯಿ: ಇದು ಸಮಸ್ತ ಮೊಗವೀರ ಸಮಾಜದ ಗೆಲುವಾಗಿದೆ. ನಾವೆ ಲ್ಲರೂ ಒಂದೇ. ಮೊಗವೀರ ಬ್ಯಾಂಕ್ ನಮ್ಮದೇ ಆಗಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ವಿಲ್ಲ. ಚುನಾವಣೆಗೆ ಮೊದಲು ಬೇರೆ ಬೇರೆ ಪ್ಯಾನೆಲ್‌ಗಳನ್ನು ಬೆಂಬಲಿಸಿದರೂ ಚುನಾವಣೆ ಬಳಿಕ ನಾವೆಲ್ಲರೂ ಬ್ಯಾಂಕಿನ ಏಳಿಗೆಗಾಗಿ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ನಾಡೋಜ ಡಾ| ಜಿ. ಶಂಕರ್ ಹೇಳಿದರು. ಅಂಧೇರಿ ಪಶ್ಚಿಮದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಶಾಲಿನಿ ಜಿ. ಶಂಕರ್ ಸಭಾಗೃಹದಲ್ಲಿ ಜರಗಿದ ಮೊಗವೀರ ಬ್ಯಾಂಕಿನ ನೂತನ ನಿರ್ದೇಶಕ ಮಂಡಳಿಯ ವಿಜೇತ ಸದಸ್ಯರ ಅಭಿನಂದನೆ ಮತ್ತು ಶೇರುದಾರರ ಕೃತಜ್ಞತಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ಯಾಂಕ್ ಹಾಗೂ ಮೊಗವೀರ ವ್ಯವಸ್ಥಾಪಕ ಮಂಡಳಿಯು ಒಟ್ಟಿಗೆ ಸಾಗಿದರೆ, ಸಮಾಜಕ್ಕೆ ಒಳಿತಾಗುತ್ತದೆ. ಬ್ಯಾಂಕ್ ಅಭಿವೃದ್ಧಿಯತ್ತ ಸಾಗುತ್ತದೆ. ಈ ದೃಷ್ಟಿಯಿಂದ ದಕ್ಷಿಣ ಕನ್ನಡ, ಕುಂದಾಪುರದ ಮೊಗವೀರರು ಎಂಬ ಭೇದ-ಭಾವವನ್ನು ಮರೆತು ಒಟ್ಟಾಗಿ ಕಾರ್ಯನಿರ್ವಹಿಸಬೇಕಾಗಿದೆ. ಹೊಸದಾಗಿ ಆಯ್ಕೆಯಾದ ಆಡಳಿತ ಮಂಡಳಿಯಲ್ಲಿ ಸಮಾಜವು ಬಹಳಷ್ಟು ಆಕಾಂಕ್ಷೆಯನ್ನು ಇಟ್ಟುಕೊಂಡಿದೆ. ಅವರ ಆಕಾಂಕ್ಷೆಯನ್ನು ಈಡೇರಿಸಬೇಕಾಗಿರುವುದು ನಿರ್ದೇಶಕರ ಕೆಲಸವಾಗಿದೆ. ನಿಮ್ಮ ಜವಾಬ್ದಾರಿ ತುಂಬಾ…
ಕುಂದಾಪುರ: ಮೊಗವೀರ ಯುವ ಸಂಘಟನೆ ಬಡವರ ನೋವಿಗೆ ಸ್ಪಂದಿಸುವುದರೊಂದಿಗೆ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸಬೇಕು, ಸಮಾಜ ಬಾಂಧವರ ಬದುಕಿಗೆ ಆಶಾಕಿರಣವಾಗಿರಬೇಕು ಎಂದು ನಾಡೋಜ ಪ್ರಶಸ್ತಿ ಪುರಸ್ಕೃತ ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್ ಹೇಳಿದರು. ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ “ದಶಮೋತ್ಸವ – 2015′ ಹಾಗೂ 10ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕ್ಯಾನ್ಸರ್, ಹೃದಯ ರೋಗ, ಕಿಡ್ನಿ ವೈಫಲ್ಯ ಮುಂತಾದ ರೋಗಗಳಿಗೆ 50,000 ರೂ. ಧನ ಸಹಾಯ ಆರೋಗ್ಯ ಕಾರ್ಡ್‌ನಲ್ಲಿ ನೀಡುವ ಬಗ್ಗೆ ಮಾತುಕತೆ ನಡೆದಿದೆ. ಅದರೊಡನೆ ಮಣಿಪಾಲ ಆಸ್ಪತ್ರೆ ಹಾಗೂ ಜಿಲ್ಲಾಡಳಿದ ಸಹಕಾರದೊಡನೆ ಉಡುಪಿ ಜಿಲ್ಲೆಯನ್ನು ರಕ್ತ ದಾನಿಗಳ ಜಿಲ್ಲೆಯಾಗಿಸುವುದಾಗಿ ಹೇಳಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೇಶ್ವರ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಅಶೋಕ್ ತೆಕ್ಕಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ…
