ಬೈಂದೂರು: ಕಿರಿಮಂಜೇಶ್ವರ ಗ್ರಾಮದ ಮಸ್ಕಿಯ ಅರೆಹೊಳೆ ಕ್ರಾಸ್ ಬಳಿ ಶನಿವಾರ ರಾತ್ರಿ ಮಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ನೀಡಲು ಹೆದ್ದಾರಿಯ ಪಶ್ಚಿಮ ಅಂಚಿಗೆ ಸರಿದಾಗ ನಿಯಂತ್ರಣ ಕಳೆದುಕೊಂಡದ್ದು ಪಲ್ಟಿಯಾಗಲು ಕಾರಣ ಎಂದು ತಿಳಿದು ಬಂದಿದೆ
Author: Editor Desk
ಬೈಂದೂರು: ಇಲ್ಲಿನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಧ್ಯಾರ್ಥಿನಿ, ಹೇನಬೇರು ಹೊಸಹಕ್ಲು ನಿವಾಸಿ ಬಾಬು ದೇವಾಡಿಗ ಮತ್ತು ರಾಧಾ ದಂಪತಿಗಳ ಪುತ್ರಿ ಅಕ್ಷತಾ ಸಾವಿನ ಪ್ರಕರಣವನ್ನು ಭೇದಿಸಲು ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಅಕ್ಷತಾಳನ್ನು ಕೊಲೆ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯೋಜನಾನಗರ ನಿವಾಸಿ ಸುನಿಲ್ (19) ಹಾಗೂ ಸಾಕ್ಷ ನಾಶಪಡಿಸಿದ ಆರೋಪದಲ್ಲಿ ಅಕ್ಷಯ್ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ ಎಂದಿನಂತೆ ಅಕ್ಷತಾ ಬೆಳಿಗ್ಗೆ ಕಾಲೇಜಿಗೆ ಹೊದವಳು ಸಂಜೆ ಮನೆಗೆ ಬಾರದೇ ಇದ್ದುದರಿಂದ ಆತಂಕಗೊಂಡ ಆಕೆಯ ಮನೆಯವರು ಹಾಗೂ ಊರವರು ಹೇನ್ಬೇರು ಹಾಡಿ ಪ್ರದೇಶದಲ್ಲಿ ಆಕೆಯನ್ನು ಹುಡುಕಾಡುತ್ತಿರುವಾಗ ಸಂಜೆ 6:15 ಘಂಟೆಗೆ ಹೇನ್ ಬೇರು ಕಾಸನಮರದ ಜಡ್ಡು ಎಂಬಲ್ಲಿ ಅರಣ್ಯ ಇಲಾಖೆಯ ಅಕೇಶಿಯಾ ನೆಡುತೋಪಿನಲ್ಲಿ ಅಕ್ಷತಾಳ ಮೃತದೇಹ ಹಾಗೂ ಆಕೆಯ ಬ್ಯಾಗ್, ಕೊಡೆ, ಹಾಗೂ ನೀರಿನ ಬಾಟಲಿ ಕಂಡು ಪತ್ತೆಯಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಮೂರು ದಿನಗಳ ಒಳಗಾಗಿ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಕುಮಾರಿ ಅಕ್ಷತಾಳು…
ಬೈಂದೂರು: ಸಮೀಪದ ಹೇನ್ಬೇರು ಪರಿಸರದ ಆಶಾ ನವೋದಯ ಗುಂಪಿನ ಸದಸ್ಯೆ ರಾಧಾ ದೇವಾಡಿಗ ಅವರ ಮಗಳು ಬೈಂದೂರು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಜೂನ್ 17ರಂದು ಕಾಲೇಜಿನಿಂದ ಮನೆಗೆ ಬರುತ್ತಿರುವಾಗ ಮನೆ ಸಮೀಪದ ಆಕೇಶಿಯಾ ತೋಪಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಮಗಳನ್ನು ಕಳೆದುಕೊಂಡು ದುಃಖದಲ್ಲಿರುವ ಮನೆಗೆ ನವೋದಯ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಜೂನ್ ೧೯ರಂದು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿ, ರೂ. 1ಲಕ್ಷ ನಗದನ್ನು ಕುಟುಂಬಕ್ಕೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಈ ಭಾಗದ ವಿದ್ಯಾರ್ಥಿಗಳ ಬೇಡಿಕೆಯಂತೆ ಹೆನ್ಬೇರ್ನಿಂದ ಬೈಂದೂರು ಕಾಲೇಜು ತನಕ ಸರ್ಕಾರ ವಾಹನದ ವ್ಯವಸ್ಥೆ ಮಾಡುವ ತನಕ ವಾಹನದ ವ್ಯವಸ್ಥೆ ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಾಲೆ ಕಾಲೇಜಿಗೆ ಹೋಗುವುದನ್ನು ನಿಲ್ಲಿಸಬಾರದು. ಅಲ್ಲದೇ ಕುಟುಂಬದ ತುರ್ತು ಅಗತ್ಯತೆಗಾಗಿ ಒಂದು ಲಕ್ಷ ರೂಪಾಯಿಯನ್ನು ನೀಡುತ್ತಿದ್ದೇವೆ. ಇಂಥಹ ದುರ್ಘಟನೆಗಳು ಭವಿಷ್ಯದಲ್ಲಿ ಘಟಿಸಬಾರದು ಎಂದು ಹೇಳಿದ ಅವರು, ಈ…
ಬೈಂದೂರು: ಅನುಮಾನಾಸ್ಪದವಾಗಿ ಸಾವಿಗೀಡಾದ ಬೈಂದೂರು ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಪ್ರಕರಣವನ್ನು ಶೀಘ್ರ ಬೇಧಿಸುವಂತೆ ಆಗ್ರಹಿಸಿ ಎರಡನೇ ದಿನವೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದರು. ಬೈಂದೂರಿನ ಗಾಂಧಿ ಮೈಧಾನದಲ್ಲಿ ಕುಳಿತು ಪ್ರತಿಭಟನೆ ಆರಂಭಿಸಿದರ ವಿದ್ಯಾರ್ಥಿಗಳಿಗೆ ಮಕ್ಕಳ ಮಿತ್ರ ಮತ್ತು ಮಹಿಳಾ ಮಿತ್ರ ಸಂಘಟನೆ, ಕುಂದಾಪುರ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಎಬಿವಿಪಿ ಸಂಘಟನೆ, ಅಂಗನವಾಡಿ ಯೂನಿಯನ್, ವಿವಿಧ ಸ್ತ್ರೀಶಕ್ತಿ ಗುಂಪುಗಳು ಸಾಥ್ ನೀಡಿದವು. ಬಳಿಕ ಮೆರವಣಿಗೆಯಲ್ಲಿ ಸಾಗಿ ಬೈಂದೂರು ವಿಶೇಷ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಅಲ್ಲಿಂದ ನೇರವಾಗಿ ಬೈಂದೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು ಅಕ್ಷತಾ ಮರಣೋತ್ತರ ವರದಿ ಹಾಗೂ ಆರೋಪಿಗಳ ಹೆಸರನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದರು. ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಬರುವ ತನಕ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಾಗ ತನಿಕೆಯಲ್ಲಿದ್ದ ವರಿಷ್ಠಾಧಿಕಾರಿ ತನಿಕೆಯನ್ನು ಮೊಟಕುಗೊಳಿಸಿ ಠಾಣೆಗೆ ಆಗಮಿಸಿ, ವಿದ್ಯಾರ್ಥಿ ಮುಖಂಡರುಗಳೊಂದಿಗೆ ಸಮಾಲೋಚನೆ ನಡೆಸಿದರು. ಮರಣೋತ್ತರ ವರದಿ ಒಂದು ದಿನದ ಒಳಗಾಗಿ…
ಬೈಂದೂರು: ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಮೃತ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗರ ಮನೆಗೆ ಭೇಟಿ ನೀಡಿ ಆಕೆಯ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಅಕ್ಷತಾ ಮೃತಪಟ್ಟಿರುವುದು ಅತೀವ ನೋವು ತಂದಿದೆ. ಅಕ್ಷತಾಳ ಸಹೋದರಿಯರ ಶಿಕ್ಷಣಕ್ಕೆ ಸರಕಾರದಿಂದಾದ ನೆರವನ್ನು ನೀಡುವುದಾಗಿ ಭರವಸೆ ಇತ್ತರು. ಊರಿನ ಮೂಲಭೂತ ಸೌಕರ್ಯಗಳಲ್ಲೊಂದಾದ ರಸ್ತೆ ಜೋಡಣೆ ಅಕೇಶಿಯಾ ಪ್ಲಾಂಟೆಶನ್ ತೆರವು, ಮಕ್ಕಳು ಶಾಲೆಗೆ ತೆರಳಲು ವಾಹನದ ವ್ಯವಸ್ಥೆಯ ಮುಂತಾದವುಗಳ ಕುರಿತು ಗ್ರಾಮಸ್ಥರು ಅಹವಾಲು ತೋಡಿಕೊಂಡಾಗ ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗೋಪಾಲ ಪೂಜಾರಿ, ತಾ.ಪಂ. ಸದಸ್ಯ ರಾಜು ಪೂಜಾರಿ, ಮುಖಂಡರುಗಳಾದ ರಾಜು ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಹೆಚ್ಚಿನ ಪೋಟೋಗಳಿಗೆ ಇಲ್ಲಿ ಕ್ಲಿಕ್ ಮಾಡಿ ಬೈಂದೂರು: ಇಲ್ಲಿನ ಹೆನ್ಬೇರು ಬಳಿ ನಿಗೂಡವಾಗಿ ಸಾವನ್ನಪ್ಪಿದ ಬೈಂದೂರು ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ(17) ಸಂಶಯಾಸ್ಪದ ಸಾವಿನ ಪ್ರಕರಣದ ತನಿಕೆ ಚುರುಗೊಂಡಿದ್ದು, ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇನ್ನೊಂದೆಡೆ ಬೈಂದೂರು ಹಾಗೂ ಕುಂದಾಪುರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಅಕ್ಷತಾ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ. ಬೈಂದೂರಿನಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ, ರಸ್ತೆ ತಡೆ: ಅನುಮಾನಾಸ್ಪದವಾಗಿ ಸಾವಿಗೀಡಾದ ಅಕ್ಷತಾ ಸಾವಿನ ರಹಸ್ಯವನ್ನು ಶೀಘ್ರವೇ ಭೇದಿಸುವಂತೆ ಬೈಂದೂರು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬೈಂದೂರು ಬೈಪಾಸ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. ಇದಕ್ಕೆ ಬೈಂದೂರಿನ ನಾಗರಿಕರು ಸಾಥ್ ನೀಡಿದರು. ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಕುಳಿತು ಅಕ್ಷತಾ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಎರಡೂ ಕಡೆಗಳಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ಥವ್ಯಸ್ಥಗೊಂಡಿತು. ಬಳಿಕ ಸ್ಥಳಕ್ಕಾಗಮಿಸಿದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ…
ಬೈಂದೂರು-ಜೂ17: ಇಂದು ಸಂಜೆ ತರಗತಿ ಮುಗಿಸಿ ಕಾಲೇಜಿನಿಂದ ಮನೆಗೆ ತೆರಬೇಕಿದ್ದ ವಿದ್ಯಾರ್ಥಿನಿ ಮನೆಯ ಸಮೀಪದಲ್ಲಿದ್ದ ಅಕೇಶಿಯಾ ತೋಪಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಬೈಂದೂರಿನ ಜ್ಯೂನಿಯರ್ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ(17) ಮೃತ ದುರ್ದೈವಿ. ಘಟನೆಯ ವಿವರ: ಹೇನಬೇರು ನಿವಾಸಿ ಬಾಬು ದೇವಾಡಿಗ ಎಂಬುವರ ಪುತ್ರಿ ಅಕ್ಷತಾ ಸಂಜೆಯಾಗದೂ ಕಾಲೇಜಿನಿಂದ ಮನೆಗೆ ಬಾರದ್ದರಿಂದ ಗಾಬರಿಗೊಂಡು ಪೋಷಕರು ಕಾಲೆಜಿಗೆ ಪೋನ್ ಮಾಡಿ ವಿಚಾರಿಸಿದಾಗ ಆಕೆ ಕಾಲೇಜು ಮುಗಿದ ಕೂಡಲೇ ಮನೆಗೆ ಹೊರಟ್ಟಿದ್ದಳು ಎಂದು ತಿಳಿಸಿದ್ದರು. ಇದರಿಂದ ಮತ್ತಷ್ಟು ಗಲಿಬಿಲಿಗೊಂಡ ಮನೆಯವರು ಸ್ಥಳೀಯರೊಂದಿಗೆ ಹುಡುಕಾಟ ನಡೆಸಿದಾಗ, ಸಂಜೆ ಸುಮಾರು 6:30ರ ವೇಳೆಗೆ ಮನೆಯಿಂದ ಸ್ವಲ್ಪವೇ ದೂರವಿರುವ ಅಕೆಶಿಯಾ ತೋಪಿನಲ್ಲಿ ಕುತ್ತಿಗೆಗೆ ಶಾಲು ಸುತ್ತಿಕೊಂಡ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಶವದ ಬಳಿ ಆಕೆಯ ಬ್ಯಾಗ್, ವಾಟರ್ ಬ್ಯಾಗ್ ಪತ್ತೆಯಾಗಿದೆ. ಎಸ್ಪಿ ಭೇಟಿ: ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ಅಣ್ಣಾಮಲೈ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುಂದಾಪುರ…
ಕುಂದಾಪುರ: ತಾಲೂಕಿನ ಚುನಾವಣೆ ನಡೆದ 59 ಗ್ರಾಮ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಇಲ್ಲಿನ ಆರ್.ಎನ್. ಶೆಟ್ಟಿ ಸಂಭಾಗಣದಲ್ಲಿ ಜರುಗಿತು. ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್. ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ತಹಶೀಲ್ದಾರರಾದ ಗಾಯತ್ರಿ ನಾಯಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ ವೃತ್ತ ನಿರೀಕ್ಷಕ ದಿವಾಕರ ಅವರು ಬಿಗಿ ಬಂದೋವಸ್ತ್ ಏರ್ಪಡಿಸಲಾಗಿತ್ತು. ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್, ಉಪ ನಿರೀಕ್ಷಕರುಗಳಾದ ನಾಸಿರ್ ಹುಸೇನ್, ಸುಬ್ಬಣ್ಣ, ಸುನಿಲ್ ಕುಮಾರ್, ಜಯಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿಗಳ ಪಿಡಿಓ ಹಾಗೂ ಸದಸ್ಯರು ಗುರುತಿನ ಚೀಟಿಯನ್ನು ತೋರಿಸಿದ ಬಳಿಕವಷ್ಟೇ ಒಳಗೆ ಪ್ರವೇಶ ನೀಡಲಾಗಿತ್ತು. ಪತ್ರಕರ್ತರು ಹಾಗೂ ರಾಜಕೀಯ ಮುಖಂಡರಿಗೆ ಪ್ರವೇಶ ನಿಷೇಧಿಸಲಾಗಿತ್ತು. ಕುಂದಾಪುರ ತಾಲೂಕಿನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿಯ ವಿವರ * ಮೊಳಹಳ್ಳಿ: ಅಧ್ಯಕ್ಷ-ಹಿಂದುಳಿದ ವರ್ಗ (ಎ), ಉಪಾಧ್ಯಕ್ಷ – ಸಾಮಾನ್ಯ ಮಹಿಳೆ * ಗೋಳಿಹೊಳೆ: ಅಧ್ಯಕ್ಷ –ಹಿಂದುಳಿದ ವರ್ಗ (ಎ),…
ಗ೦ಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಅ೦ಗವಾಗಿ ಬಾಲಕಾರ್ಮಿಕ ವಿರೋಧಿ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಕಾಲೇಜಿನ ಪ್ರಾ೦ಶುಪಾಲ ಆರ್ ಎನ್ ರೇವಣ್ಕರ್ ಅವರು ಪ್ರತಿಜ್ಞಾವಿಧಿಯನ್ನು ಭೋಧಿಸಿದರು.ಈ ಸ೦ದರ್ಭದಲ್ಲಿ ಕಾಲೇಜಿನ ಆಡಳಿತ ಮ೦ಡಳಿಯ ಕಾರ್ಯದರ್ಶಿ ಕೆ ಸದಾಶಿವ ನಾಯಕ್ , ಕವಿತಾ ಎಮ್ ಸಿ,ಥಾಮಸ್ ಪಿ.ಎ, ನಾಗರಾಜ ಶೆಟ್ಟಿ , ಸದಾಶಿವ ಜಿ ಮೊದಲಾದವರು ಉಪಸ್ಥಿತರಿದ್ದರು.
ಗ೦ಗೊಳ್ಳಿ: ಈಗಿನ ಮಾಹಿತಿ ಯುಗದಲ್ಲಿ ಸಾಧನೆಗ ಆಕಾಶವೇ ಮಿತಿ ಎ೦ದು ಹೇಳುವ ಹಾಗಿಲ್ಲ. ಸಾಧನೆ ನಿರ೦ತರವಾದುದು.ಆ ನಿಟ್ಟಿನಲ್ಲಿ ನಾವು ಶ್ರಮ ಹಾಕುತ್ತಿರಬೇಕು.ಜ್ಞಾನವನ್ನು ಹೊ೦ದಿರುವುದಕ್ಕಿ೦ತ ಅದನ್ನು ಸಕರಾತ್ಮಕವಾಗಿ ಬಳಸಿಕೊಳ್ಳುವ ಕಲೆ ಮತ್ತು ಪ್ರಯತ್ನ ನಮ್ಮೆಲ್ಲರದ್ದೂ ಆಗಬೇಕು ಎ೦ದು ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಆಡಳಿತ ಮ೦ಡಳಿಯ ಕಾರ್ಯದರ್ಶಿ ಸದಾಶಿವ ನಾಯಕ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ 2014-15ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿವಿಧ ವಿಭಾಗಗಳಲ್ಲಿ ಕಾಲೇಜಿಗೆ ಮೊದಲಿಗರಾಗಿ ಅ೦ಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನ೦ದಿಸುವ ನಿಟ್ಟಿನಲ್ಲಿ ಕಾಲೇಜಿನ ವತಿಯಿ೦ದ ಕಾಲೇಜಿನ ರೋಟರಿ ಸಭಾ೦ಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಧಕ ವಿದ್ಯಾರ್ಥಿಗಳ ಅಭಿನ೦ದನಾ ಸಮಾರ೦ಭದಲ್ಲಿ ಮುಖ್ಯ ಅತಿಥಿ ಸ್ಥಾನದಿ೦ದ ಮಾತನಾಡಿದರು. ಕಾಲೇಜಿನ ಪ್ರಾ೦ಶುಪಾಲ ಆರ್ ಎನ್ ರೇವಣ್ಕರ್ ಸಮಾರ೦ಭದ ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅ೦ಕಗಳನ್ನು ಪಡೆದ ಪಿಸಿಎಮ್ಬಿ ವಿಭಾಗದ ದೀಕ್ಷಿತಾ ಕೆ, ಪಿಸಿಎಮ್ಸಿಯ ರಾಹುಲ್ ಆರ್ ಶಾನುಭಾಗ್. ಇಬಿಎಸಿಯ ಸುನೀತಾ ಪೂಜಾರಿ ಎಸ್, ಹೆಚ್ಇಬಿಎಯ ಅಭಿಷೇಕ್ ಗಾಣಿಗ…
