ಕುಂದಾಪ್ರ ಡಾಟ್ ಕಾಂ. ಮರಳಿ ಬಂದಿದೆ ಯುಗಾದಿ. ಮತ್ತದೇ ಹೊಸತನದೊಂದಿದೆ. ಎಲ್ಲೆಲ್ಲೂ ಹೊಸ ಚಿಗುರು, ಹೊಸ ಹೂವು, ಹೊಸ ಫಲ, ಹೊಸ ನಿರೀಕ್ಷೆಗಳು, ಪ್ರಕೃತಿಯಲ್ಲಿ ನವ ಚೈತನ್ಯ. ಮನೆ ಮನೆಯಲ್ಲೂ ಯುಗಾದಿಯ ಸಡಗರ. ಸಂಪ್ರದಾಯದಂತೆ ಈ ದಿನದಂದು ಸೇವಿಸುವ ಬೇವು-ಬೆಲ್ಲ ಜೀವನದ ಸುಖ – ದುಃಖ ಎರಡನ್ನೂ ಸಮನಾಗಿವ ಸ್ವೀಕರಿಸುವ ಪ್ರತೀಕ. ಹಿಂದಿನ ವರುಷದ ಕಹಿ ಅನುಭವಗಳನ್ನು ಮರೆತು, ಮುಂಬರುವ ಭವಿಷ್ಯದ ಆನಂದಕ್ಕಾಗಿ ನಿರೀಕ್ಷಿಸುವ, ಹಾರೈಸುವ ದಿನವಿದು. ಯುಗಾದಿ ಎಂಬುದು ಚೈತ್ರ ಮಾಸದ ಮೊದಲನೆ ದಿನ. ಹಿಂದೂ ಪಂಚಾಂಗದ ಮೊದಲನೆ ದಿನ. ಯುಗ ಎಂದರೆ ಅದೊಂದು ಕಾಲ ಗಣನೆ. ಕಾಲದ ಒಂದು ಭಾಗ ಮತ್ತೆ ಆರಂಭವಾಗುತ್ತಿದೆ ಎಂಬುದರ ಸೂಚನೆಯಾಗಿದೆ. ಆಚರಣೆ ಮತ್ತು ಹಿನ್ನೆಲೆ: ಯುಗಾದಿಯಲ್ಲಿ ಮುಖ್ಯವಾಗಿ ಚಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ್ಯ ಶಾಸ್ತ್ರದಿಂದ ಇದು ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಂದ್ರಮಾನ ಹಾಗೂ ಸೂರ್ಯನ ಚಲನೆಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ.…
Author: Editor Desk
ಪ್ರಶಾಂತ್ ಸೂರ್ಯ ಸಾಬ್ರಕಟ್ಟೆ | ಕುಂದಾಪ್ರ ಡಾಟ್ ಕಾಂ ದ.ಕ ಮತ್ತು ಉಡುಪಿ ಜಿಲ್ಲೆಯ ಕುಡುಬಿ ಮತ್ತು ಮರಾಠಿ ಜನಾಂಗದವರ ವಿಶಿಷ್ಠ ಜನಪದ ಆಚರಣೆ ಹೋಳಿ ಹಬ್ಬ. ಅಮಾವಾಸ್ಯೆಯ ಮೊದಲು ಗೋವಾದಿಂದ ಮೂಲ ದೇವರ (ಮಲ್ಲಿಕಾರ್ಜುನ) ಉತ್ಸವ ಮೂರ್ತಿಯನ್ನು ತಂದು ಕೂಡುಕಟ್ಟಿನ ಹಿರಿಯ ಮನೆಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಹಬ್ಬಕ್ಕೆ ಚಾಲನೆ ದೊರೆಯುತ್ತದೆ. ಆಕರ್ಷಕ ವೇಷಭೂಷಣ ಹೋಳಿ ಹಬ್ಬದ ಸಮಯದಲ್ಲಿ ಕುಡುಬಿ ಜನಾಂಗದ ವೇಷಭೂಷಣ ನೋಡುವುದೇ ಒಂದು ಹಬ್ಬ. ತಲೆಗೆ ‘ಅಬ್ಬಲಿ ಹೂವಿನಿಂದ’ ಮಾಡಿದ ಮುಂಡಾಸು ಅವರ ಎದುರು ಕಡೆ ಹಟ್ಟಿಮುದ್ದ ಹಕ್ಕಿಯ ಚೆಂದದ ಗರಿ; ಹಾಗೆಯೇ ವಿಶೇಷವಾದ ಉಡುಪುಗಳು, ಮೈ ಮೇಲೆ ಬಿಳಿಯ ನಿಲುವಂಗಿ, ಅಂಗಿಯ ಮೇಲೆ ಬಣ್ಣ ಬಣ್ಣದ ಪಟ್ಟೆಯ ದಾರ ಕಾಲಿಗೆ ಗೆಜ್ಜೆ, ಕೈಯಲ್ಲಿ ಬಾರಿಸುವ ಗುಮ್ಮಟೆ ಇದರ ಧ್ವನಿ ವಿಶೇಷವಾಗಿರುತ್ತದೆ. ಅವರ ಹಾದಿಯಲ್ಲಿ ಸಾಗುತ್ತಿದ್ದರೆ ಮಕ್ಕಳಿಂದ ಹಿಡಿದು ವಯೋವೃದ್ಧರಿಗೆ ಕಣ್ಣಿಗೆ ಹಬ್ಬ. ಕುಣಿತ – ಕೋಲಾಟ ಕಣ್ಣಿಗೆ ತಂಪು ಹೋಳಿ ಹಬ್ಬವು ವರ್ಷದ 5 ದಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಇನೋವಾ ಕ್ರಿಸ್ಟಾ ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ಬಿಡದಿ ಸಮೀಪದ ಕದಂಬ ಹೋಟೆಲ್ ಮುಂಭಾಗದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬೆಂಗಳೂರಿನಲ್ಲಿ ವಿವಿಧ ಸರಕಾರಿ ಕಾರ್ಯಕ್ರಮಗಳನ್ನು ಮುಗಿಸಿ ಸಂಜೆ ವೇಳೆಗೆ ಮಂಗಳೂರಿಗೆ ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಬಿಡದಿ ಸಮೀಪ ಕಾರಿಗೆ ಇಂಧನ ಹಾಕಿಸಿಕೊಂಡು ಸಂಚರಿಸುತ್ತಿದ್ದ ಸಂದರ್ಭ ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸಚಿವರು, ಕಾರಿನ ಚಾಲಕ ಸೇರಿದಂತೆ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಫೆ.7: ಇಲ್ಲಿನ ಕಶ್ವಿ ಚೆಸ್ ಸ್ಕೂಲ್‌ನಲ್ಲಿ ಭಾನುವಾರ ರ‍್ಯಾಪಿಡ್ ಚೆಸ್ ಪಂದ್ಯಾವಳಿ ನಡೆಯಿತು. ಮುಕ್ತ ವಿಭಾಗದ ಪಂದ್ಯಾಟದಲ್ಲಿ ತೆಕ್ಕಟ್ಟೆ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ಮಾನಸ ಪ್ರಥಮ ಸ್ಥಾನಗಳಿಸಿದರು. ಗೋಲ್ಡನ್ ಮತ್ತು ಸಿಲ್ವರ್ ಗ್ರೂಪ್‌ನ ಮುಕ್ತ ವಿಭಾಗದಲ್ಲಿ ದಾವಣಗೆರೆಯ ಯುರೋ ಆಂಗ್ಲ ಮಾಧ್ಯಮ ಶಾಲೆಯ ನಿಶ್ಚಲ್ ಜಿ. ಎಸ್ ಪ್ರಥಮ ಸ್ಥಾನ, ತೆಕ್ಕಟ್ಟೆ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ಸನತ್ ಎಸ್. ಶಿರಿಯಾನ್ ದ್ವಿತೀಯ ಸ್ಥಾನ, ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಮನನ್ ಶೆಟ್ಟಿ ತೃತೀಯ ಸ್ಥಾನಗಳಿಸಿದರು. ಆನ್‌ಲೈನ್ ಚೆಸ್ ಏರಾದ ಮೂಲಕ ನಡೆಸಲಾದ ಚೆಸ್ ಪಂದ್ಯಾಟದಲ್ಲಿ ಸುಳ್ಯದ ಸಂತ ಜೋಸೆಫ್‌ರ ಆಂಗ್ಲ ಮಾಧ್ಯಮ ಶಾಲೆಯ ಅವನಿ ಎಮ್. ಎಸ್ ಸುಳ್ಯ ಪ್ರಥಮ ಸ್ಥಾನ, ದಾವಣಗೆರೆಯ ಆರೆಂಜ್ ಟೋಟ್ಸ್ ಇಂಟರನ್ಯಾಷನಲ್ ಪ್ರೀ ಸ್ಕೂಲ್‌ನ ಆಕಾಶ್ ಜಿ.ಎಸ್ ದ್ವಿತೀಯ ಸ್ಥಾನ, ನಂದಿನಿ ಲೇ-ಔಟ್‌ನ ಪ್ರೆಸಿಡೆನ್ಸಿ ಸ್ಕೂಲ್‌ನ ಗುಹಾನ್ ಜ್ಯೋತಿ ತೃತೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಮತ್ತು ಸಂರಕ್ಷಣೆ ನಿಯಮ 2020 ನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ರೈತರು ಮತ್ತು ಸಾರ್ವಜನಿಕರು ತಮ್ಮಲ್ಲಿನ ಅನುತ್ಪಾದಕ ಜಾನುವಾರುಗಳು, ಅಪಘಾತಗೊಂಡ ಜಾನುವಾರು, ಮತ್ತಿತರ ಜಾನುವಾರುಗಳನ್ನು ಸಂಬAಧಪಟ್ಟ ಅಧಿಕಾರಿಗಳಿಗೆ ನೀಡಿದಾಗ, ಅವುಗಳನ್ನು ಪೋಷಿಸಲು ಅನುಕೂಲವಾಗುವಂತೆ ಪ್ರತಿಯೊಂದು ತಾಲೂಕಿನಲ್ಲಿ ಗೋಶಾಲೆಗಳನ್ನು ಸ್ಥಾಪಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಸೂಕ್ತ ಸ್ಥಳಾವಕಾಶವನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಡಿ.ಸಿ. ಸೂಚನೆ ನೀಡಿದರು. ಗೋಶಾಲೆಗಳನ್ನು ಆರಂಭಿಸುವ ಸಂದರ್ಭದಲ್ಲಿ, ಅದೇ ಸ್ಥಳದಲ್ಲಿ ಮೇವು ಬೆಳೆಯಲು ಸಾಧ್ಯವಿರುವಂತಹ ಜಾಗವನ್ನು ಗುರುತಿಸುವಂತೆ ನೀಲಾವರ ಗೋಶಾಲೆಯ ಟ್ರಸ್ಟಿ ಡಾ.ಸರ್ವೋತ್ತಮ ಉಡುಪ ಹೇಳಿದರು. ಜಾನುವಾರುಗಳನ್ನು ಸಾಗಾಟ ಮಾಡುವಾಗ ಸಂಬಂಧಧಪಟ್ಟ ಎಲ್ಲಾ ಪ್ರಾಧಿಕಾರಗಳಿಂದ ಅನುಮತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತಿದಿನ ರಾತ್ರಿ ನಡೆಯುವ ಕಷಾಯ ಮಂಗಳಾರತಿ ಸೇವೆ ದೇವಿ ಉದ್ಭವ ಮೂರ್ತಿಗೆ ತೊಡಿಸುವ ಬೆಳ್ಳಿಯ ನಾಗಾಭರಣಕ್ಕೆ ₹ 12 ಲಕ್ಷ ವೆಚ್ಚದಲ್ಲಿ ಚಿನ್ನದ ಲೇಪನವನ್ನು ಮಾಡಿ ಅರ್ಪಿಸಲಾಯಿತು. ದೇವಿಯ ಭಕ್ತರಾಗಿರುವ ಬೆಂಗಳೂರಿನ ಉದ್ಯಮಿ ವಿಜಯಕುಮಾರ ರೆಡ್ಡಿ ಅವರು ಬೈಂದೂರಿನ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರ ಸಲಹೆಯಂತೆ ಈ ಸೇವೆಯನ್ನು ಮಾಡಿದ್ದಾರೆ. ದೇವಸ್ಥಾನದಲ್ಲಿ ನಿತ್ಯ ಪೂಜೆಗೆ ಬಳಕೆಯಾಗುತ್ತಿದ್ದ ಬೆಳ್ಳಿಯ ನಾಗಾಭರಣಕ್ಕೆ ಅಂದಾಜು 201 ಗ್ರಾಂ ತೂಕದಲ್ಲಿ ಚಿನ್ನದ ಲೇಪನ ಮಾಡಲಾಗಿದೆ. 3 ದಿನಗಳ ಅವಧಿಯಲ್ಲಿ ದೇಗುಲದ ಪ್ರಾಂಗಣದಲ್ಲಿ ಮಂಗಳೂರಿನ ಚಿನ್ನದ ಕೆಲಸಗಾರರಿಂದ ಲೇಪನ ಕಾರ್ಯ ನಡೆದಿದೆ. ಬೈಂದೂರು ಶಾಸಕರು ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಎಷ್ಟೇ ತೂಕದ ಚಿನ್ನ ನೀಡಿದರೂ, ಪ್ರತಿ ನಿತ್ಯ ದೇವರ ಸೇವೆಗೆ ಬಳಕೆಯಾಗುವುದಿಲ್ಲ. ನಾಗಾಭರಣಕ್ಕೆ ಚಿನ್ನದ ಲೇಪನ ನೀಡಿರುವುದರಿಂದ ವಿಜಯ್ಕುಮಾರ ರೆಡ್ಡಿ ಅವರಿಗೆ ದೇವಿಯ ನಿತ್ಯ ಸೇವೆಯ ಭಾಗ್ಯ ದೊರೆಕಿದೆ ಎಂದು ತಿಳಿಸಿದರು. ಕ್ಷೇತ್ರದ ಅರ್ಚಕ ಎನ್.ಗೋವಿಂದ ಅಡಿಗ…
ಕೊಡಚಾದ್ರಿ ಸಹ್ಯಾದ್ರಿಯ ಮೇರು ಶಿಖರಗಳಲ್ಲಿ ಒಂದೆನಿಸಿಕೊಂಡಿರುವ ಬೆಟ್ಟ. ಪ್ರವಾಸಿಗರ ಅಚ್ಚು ಮೆಚ್ಚಿನ ತಾಣ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕೊಡಚಾದ್ರಿ ಬೆಟ್ಟಕ್ಕೂ ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೂ ನಂಟಿದ್ದು, ಕೊಲ್ಲೂರಿನ ಭಕ್ತರಿಗೂ ಪುಣ್ಯಸ್ಥಳವೆನಿಸಿದೆ. ಇದು ಸೌಪರ್ಣಿಕಾ ನದಿಯ ಉಗಮ ಸ್ಥಾನವು ಹೌದು. ವಿವಿಧ ರೀತಿಯ ಔಷಧಿ ಗಿಡಗಳು ಅನೇಕ ಜಾತಿಯ ಪ್ರಾಣಿ ಪಕ್ಷಿಗಳ ಆವಾಸ ಸ್ಥಾನವು ಹೌದು. ಆದರೆ ಇತ್ತೀಚಿನ ದಿನಗಳಲ್ಲಿ ಕೊಡಚಾದ್ರಿ ಮಡಿಲಿಗೆ ಕೊಡಲಿ ಏಟು ನೀಡುವುದಕ್ಕೆ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಂತಿದೆ. ಕೊಲ್ಲೂರಿನಿಂದ ಕೊಡಚಾದ್ರಿಯ ಶಿಖರಕ್ಕೆ ರೋಪ್‌ವೇ ನಿರ್ಮಿಸಬೇಕೆಂಬುದು ಸರ್ಕಾರದ ನಿಲುವು. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಿದರೂ, ಮೂಕಾಂಬಿಕಾ ರಕ್ಷಿತಾರಣ್ಯದ ನಡುವೆ ರೋಪ್‌ವೇ ಹಾದುಹೋಗುವುದರಿಂದ ಮರಗಳು ಹಾಗೂ ಅಲ್ಲಿನ ಜೀವ ವೈವಿಧ್ಯತೆಗಳಿಗೆ ತೊಂದರೆಯಾಗುವ ಸಾಧ್ಯತೆ ದಟ್ಟವಾಗಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ಈ ರೋಪ್ ವೇ ಸಂಪರ್ಕದಿಂದ ಪ್ರಯಾಣ ಹತ್ತಿರವಾರೂ ಕಾಮಗಾರಿಯಿಂದಾಗಿ ಅರಣ್ಯ ನಾಶವಾಗುತ್ತದೆ, ದಿನನಿತ್ಯ ತಮ್ಮ ಹೊಟ್ಟೆ ಪಾಡಿಗೆ ಬದುಕುತ್ತಿರುವ ಜೀಪ್‌ನ ಚಾಲಕರು ಸಂಕಟ ಪಡಬೇಕಾಗುತ್ತದೆ. ಕೊಡಚಾದ್ರಿಗೆ…
ಕೋವಿಡ್ ಹಾಗೂ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಈ ಬಾರಿಯ ದೀಪಾವಳಿಗೆ ಹಸಿರು ಪಟಾಕಿಯಷ್ಟನ್ನೇ ಮಾರಾಟ ಮಾಡಬೇಕು ಎಂದು ಸರಕಾರ ಸ್ಪಷ್ಟವಾಗಿ ಸೂಚನೆ ನೀಡಿದೆ. ಆದರೆ, ಯಾವುದು ಹಸಿರು ಪಟಾಕಿ? ಅದು ಎಲ್ಲಿ ಸಿಗುತ್ತದೆ ಎಂಬ ಪ್ರಶ್ನೆಗಳು ದೀಪಾವಳಿ ಹೊಸ್ತಿಲಿನಲ್ಲಿ ಸಾರ್ವಜನಿಕರನ್ನು ಕಾಡುತ್ತಿವೆ. ಹಸಿರು ಪಟಾಕಿ ಅಂದ್ರೆ ಏನು? ಕಡಿಮೆ ಬೆಳಕು ಮತ್ತು ಶಬ್ದ ಹೊರಸೂಸುವ, ಸಿಡಿತದ ಬಳಿಕ ಕಡಿಮೆ ಪ್ರಮಾಣದ ನೈಟ್ರೋಜನ್ ಆಕ್ಸೈಡ್, ಸಲ್ಫರ್ ಡೈ ಆಕ್ಸೆಡ್ ಹೊರಚೆಲ್ಲುವ ಪಟಾಕಿಗಳನ್ನು ಹಸಿರು ಪಟಾಕಿ ಎಂದು ಸರಕಾರ ಹೇಳಿದೆ. ಸಾಮಾನ್ಯ ಪಟಾಕಿಗಿಂತ ಕಡಿಮೆ ಮಾಲಿನ್ಯ ಮಾಡುವ ಪಟಾಕಿ. ಹಸಿರು ಪಟಾಕಿಯು ಕಡಿಮೆ ಹೊಗೆಯನ್ನು ಹರಡುತ್ತದೆ. ಈ ಪಟಾಕಿ ಸಾಮಾನ್ಯ ಪಟಾಕಿಗಿಂತ ಶೇ. 30ರಷ್ಟು ಮಾತ್ರ ಮಾಲಿನ್ಯ ಮಾಡುತ್ತದೆ. ಹಸಿರು ಪಟಾಕಿಗಳು ಧೂಳೆಬ್ಬಿಸುವುದಿಲ್ಲ, ಇವನ್ನು ಗುರುತಿಸುವುದು ಸಲೀಸಾಗುವಂತೆ ಕ್ಯೂಆರ್ ಕೋಡ್ ಹಾಕಲಾಗಿರುತ್ತದೆ. ಈ ಬಾರಿ ಸಿಎಸ್ಐಆರ್-ನೀರಿ ಸಂಸ್ಥೆಗಳಿಂದ ಮಾನ್ಯತೆ ಪಡೆದಿರುವ ಕಂಪನಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಹಸಿರು ಪಟಾಕಿಯಲ್ಲಿ ಮಕ್ಕಳ ಕ್ಯಾಪ್ ಪಟಾಕಿ, ಸುರುಸುರು ಕಡ್ಡಿ,…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸರ್ವಶ್ರೇಷ್ಠ ಸಹಕಾರಿಗಳಲ್ಲಿ ಓರ್ವರೆಂದು ಪರಿಗಣಿಸಲ್ಪಟ್ಟಿರುವ ಎಸ್. ರಾಜು ಪೂಜಾರಿ ಅವರು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹುದ್ದೆಗೇರಿ ಯಶಸ್ವಿಯಾಗಿ ಇಪ್ಪತ್ತೈದನೇ ಸಂವತ್ಸರಕ್ಕೆ ಕಾಲಿರಿಸಿದ್ದಾರೆ. ಗತಿಸಿದ ವರ್ಷಗಳೊಂದಿಗೆ ಹೊಸ ಅಧ್ಯಾಯವನ್ನು ಬರೆಯುತ್ತಾ, ಸಂಘಕ್ಕೆ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಎಂಬ ಹಿರಿಮೆ ತಂದುಕೊಟ್ಟು ತಾನೊಬ್ಬ ಸಮರ್ಥ ಸಹಕಾರಿ ಎಂಬುದನ್ನೂ ಸಾಕ್ಷೀಕರಿಸಿದ ಹೆಗ್ಗಳಿಗೆ ಅವರದ್ದು. 1976ರಲ್ಲಿ ಮರವಂತೆ, ಬಡಾಕೆರೆ, ನಾವುಂದ ಮತ್ತು ಹೇರೂರು ಗ್ರಾಮಗಳ ಪ್ರತ್ಯೇಕ ಸಹಕಾರಿ ಸಂಘಗಳು ಒಗ್ಗೂಡಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಸ್ತಿತ್ವಕ್ಕೆ ಬಂದಿತು. ಇಪ್ಪತ್ತೈದು ವರ್ಷಗಳ ಹಿಂದೆ ಒಂದು ಪುಟ್ಟ ಕಟ್ಟಡದಲ್ಲಿ ಅದರ ಕಾರ್ಯಾಲಯ; ಒಬ್ಬಿಬ್ಬರು ನೌಕರರು; ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತು ಸೀಮಿತ ವ್ಯವಹಾರ. ಕನಿಷ್ಠ ಸಾಲ ನೀಡಲೂ ಹಿಂದೆಮುಂದೆ ನೋಡಬೇಕಾದ ಅನಿವಾರ್ಯತೆ. ಪ್ರತಿವರ್ಷವೂ ನಷ್ಟ. ಇಂತಹ ಸಂದಿಗ್ಧ ಪರಿಸ್ಥಿತಿಯ ನಡುವೆ 1995ರ ನವೆಂಬರ್ 10ರಂದು ಎಸ್. ರಾಜು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಆರಂಭಗೊಂಡ ವಂಡ್ಸೆ ಸ್ವಾವಲಂಬನಾ ಮಹಿಳೆಯರ ಹೊಲಿಗೆ ವೃತ್ತಿ ಮತ್ತು ತರಬೇತಿ ಕೇಂದ್ರಕ್ಕೆ ಇದೀಗ ಸಂಚಾಕಾರ ಎದುರಾಗಿದೆ. ಕಳೆದ ಎರಡು ವರ್ಷಗಳಿಂದ ಹಳೆಯ ಸರಕಾರಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಕೇಂದ್ರವನ್ನು ರಾತ್ರೋರಾತ್ರಿ ಎತ್ತಂಗಡಿ ಮಾಡಿದ್ದು, ಕಣ್ಣೊರೆಸುವ ತಂತ್ರವೆಂಬಂತೆ ಬದಲಿ ಕಟ್ಟಡ ಸೂಚಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮ ಪಂಚಾಯಿತಿ ಮೂಲಕ ಗ್ರಾಮೀಣ ಭಾಗದ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಿ ಸ್ವಾವಲಂಬಿ ಜೀವನ ನಡೆಸುವುದಕ್ಕಾಗಿ 2018ರಲ್ಲಿ ಮಹಿಳಾ ಸ್ವಾವಲಂಬನಾ ಕೇಂದ್ರ ಆರಂಭಿಸಲಾಗಿತ್ತು. ಈಗಾಗಲೇ ಮೂರು ಬ್ಯಾಚ್ ಮೂಲಕ 150 ಮಹಿಳೆಯರು ಹೊಲಿಗೆ ತರಬೇತಿ ಪಡೆದು ಸ್ವಾವಲಂಭಿ ಬದುಕು ಕಟ್ಟಿಕೊಂಡಿದ್ದರು. ಈ ಹಿಂದೆ ವಂಡ್ಸೆಯಲ್ಲಿ ಹೊಸ ಪಶು ಆಸ್ಪತ್ರೆ ನಿರ್ಮಾಣವಾದ ಬಳಿಕ ಜಿಲ್ಲಾ ಪಂಚಾಯತ್ ಹಳೆ ಪಶು ಆಸ್ಪತ್ರೆ ಕಟ್ಟಡವನ್ನು ವಂಡ್ಸೆ ಗ್ರಾಮ ಪಂಚಾಯತಿಗೆ ಹಸ್ತಾಂತರಿಸಿತ್ತು. ವಂಡ್ಸೆ ಗ್ರಾಮ ಪಂಚಾಯತ್ ಸ್ವಾವಲಂಭನಾ ಕೇಂದ್ರಕ್ಕಾಗಿ ಈ ಕಟ್ಟಡವನ್ನು ಬಿಟ್ಟುಕೊಟ್ಟಿತ್ತು. ಈ…
