ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಛಲವಿದ್ದರೆ ಗುರಿ, ಶ್ರದ್ಧೆಯಿದ್ದರೆ ಮಾತ್ರವೇ ಯಶಸ್ಸು: ಡಾ. ಗೋವಿಂದ ಬಾಬು ಪೂಜಾರಿ

ತಗ್ಗರ್ಸೆ ಶಾಲೆಯ ಸ್ಮಾರ್ಟ್ ಕ್ಲಾಸ್, ಪೀಠೋಪಕರಣ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೀವನದಲ್ಲಿ ಕನಸು ಕಂಡರಷ್ಟೇ ಸಾಲದು. ಅದನ್ನು ನನಸಾಗಿಸಿಕೊಳ್ಳುವ ತನಕ ಛಲ ಹಾಗೂ ಗುರಿ ಮುಟ್ಟುವ ಭರವಸೆ ಇರಬೇಕು. [...]

ಹರ್ಷನ ಸಾವಿಗೆ ನ್ಯಾಯ ದೊರೆಯುವ ತನಕ ವಿರಮಿಸಲ್ಲ: ಕುಂದಾಪುರ – ಬೈಂದೂರಿನಲ್ಲಿ ಬಿಜೆಪಿ ಖಂಡನಾ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ, ಫೆ 24: ಹಿಂದೂ ಸಮಾಜಕ್ಕೆ ಸವಾಲು ಹಾಕುವ ಉದ್ದೇಶದಿಂದ ಹರ್ಷನನ್ನು ಬಲಿಪಶು ಮಾಡಲಾಗಿದೆ. ಒಂದು ಹರ್ಷನ ಹತ್ಯೆಯಿಂದ ಹಿಂದೂಗಳು ದೃತಿಗೆಡಲಾರರು. ಪ್ರತಿ ಗ್ರಾಮದಲ್ಲಿ ಹರ್ಷ ಹುಟ್ಟುತ್ತಾರೆ, [...]

ಕನ್ನಡ ಸಾಹಿತ್ಯ ವೇದಿಕೆ ಉದ್ಘಾಟನೆ ಮತ್ತು ವಿಶ್ವ ಮಾತೃಭಾಷಾ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಫೆ.21: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ವೇದಿಕೆ ಉದ್ಘಾಟನೆ ಮತ್ತು ವಿಶ್ವ ಮಾತೃಭಾಷಾ ದಿನಾಚರಣೆಯನ್ನು ಆಚರಿಸಲಾಯಿತು. ಕೆರಾಡಿ ವರಸಿದ್ದಿ ವಿನಾಯಕ ಕಾಲೇಜಿನ ಪ್ರಾಂಶುಪಾಲರಾದ [...]

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಂದ್ರಯಾನಕ್ಕೆ ತಯಾರಿ ನಡೆಸುತ್ತಿರುವ ನಮ್ಮ ದೇಶದಲ್ಲಿ ಬಹುದೊಡ್ಡ ವರ್ಗವೊಂದು ಇನ್ನೂ ಮೌಢ್ಯದ ಕೂಪದಲ್ಲೇ ನರಳಾಡುತ್ತಿರುವುದು ಬೇಸರದ ವಿಚಾರ. ವಿದ್ಯಾವಂತರೆಂದು ಹೇಳಿಕೊಳ್ಳುವ ಜನರು ಸಹ ವೈಚಾರಿಕವಾಗಿ, ವೈಜ್ಞಾನಿಕವಾಗಿ [...]

ಬೈಂದೂರು: ಜಲಶಕ್ತಿ ಅಭಿಯಾನ ವಿಶೇಷ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ,ಬೈಂದೂರು: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ವಿಜ್ಞಾನ ಸಂಘ, ಇಕೋಕ್ಲಬ್, ರೋವರ್ ರಂಜರ್ [...]

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವರ್ಧಂತಿ, ಅಖಂಡ ಭಜನೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವಾರ್ಷಿಕ ವರ್ಧಂತ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ಅಖಂಡ ಭಜನೋತ್ಸವ ಕಾರ್ಯಕ್ರಮ ಶನಿವಾರ ಸಂಪನ್ನಗೊಂಡಿತು. ಭಾನುವಾರ ವರ್ಧಂತಿಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, [...]

ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಸಂಸದ ಬಿ. ವೈ. ರಾಘವೇಂದ್ರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಅವರು ಮಾತನಾಡಿ, [...]

ಬೈಂದೂರು ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ, ಬೈಂದೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಯದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಮಯ್ಯಾಡಿಯಲ್ಲಿ ನೂತನವಾಗಿ ಆರಂಭಗೊಂಡ ಬೈಂದೂರು ಸಂಚಾರಿ ಸಿವಿಲ್ ಜಡ್ಜ್ [...]

ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಒಂದು ಶತಮಾನದಿಂದ ಊರಿನ ಮಕ್ಕಳಿಗೆ ವಿದ್ಯಾದಾನ ಮಾಡುತ್ತ ಬಂದಿದೆ. ಅಭಿವೃದ್ಧಿ ಸಮಿತಿ, ಹಳೆವಿದ್ಯಾರ್ಥಿ ಸಂಘ ಮತ್ತು ಶಿಕ್ಷಕರ ಸಮನ್ವಯದ [...]

ಜಾನಪದ ವಿದ್ವಾಂಸ ಶ್ರೀ ಬನ್ನಂಜೆ ಬಾಬು ಅಮೀನರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವಾರಾಧನೆ ಮತ್ತು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರನ್ನು ಗೌರವಿಸಲಾಯಿತು. ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಶಾಲೆಯ ಸ್ಥಾಪಕ ಅಧ್ಯಕ್ಷ [...]