ನಾಟಿ ಪ್ರಾತ್ಯಕ್ಷಿಕೆ: ಗದ್ದೆಯಲ್ಲಿ ಮಿಂದೆದ್ದ ಗುರುಕುಲ ವಿದ್ಯಾರ್ಥಿಗಳು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿ ಮರೆಯಾಗುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭತ್ತದ ಕೃಷಿಯ ಬಗ್ಗೆ ಅರಿವು ಮೂಡಿಸಿ ಪ್ರಾಯೋಗಿಕವಾದ ಮಾಹಿತಿ ನೀಡುವ ನಿಟ್ಟಿನಲ್ಲಿ ಬಾಂಡ್ಯ ಎಜುಕೇಶನಲ್
[...]