ಸಾರ್ವಜನಿಕರು ಸಹಭಾಗಿತ್ವದಿಂದ ಗುಣಮಟ್ಟದ ಶಿಕ್ಷಣ: ಶಾಸಕ ಗೋಪಾಲ ಪೂಜಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಶಿಕ್ಷಣದ ಮೂಲಕ ಬದುಕಿನ ಬೆಳಕು ಪಡೆದ ಸಂಸ್ಥೆಗಳನ್ನು ಬೆಂಬಲಿಸಬೇಕಾದ ಹೊಣೆ ಹಳೆವಿದ್ಯಾರ್ಥಿಗಳಿಗೆ ಇದೆ. ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಎಷ್ಟೇ ಪ್ರಯತ್ನ ನಡೆಸಿದರೂ ಅದರಲ್ಲಿ
[...]