ಹೆಮ್ಮಾಡಿಯಲ್ಲಿ ’ಮನೆ ಮನೆಗೆ ಕಾಂಗ್ರೆಸ್’ ಅಭಿಯಾನಕ್ಕೆ ಚಾಲನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೂರಾರು ಭರವಸೆಗಳನ್ನು ನೀಡಿತ್ತು. ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಅವುಗಳಲ್ಲಿ ಬಹುತೇಕ ಭರವಸೆಗಳನ್ನು ಈಡೇರಿಸಿದೆ.
[...]