Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಶಿವಲಿಂಗ ಸ್ಪರ್ಶಪೂಜೆಯ ವಿಶಿಷ್ಟ ಕ್ಷೇತ್ರ ವಣಕೊಡ್ಲು
    ಧಾರ್ಮಿಕ ಕೇಂದ್ರ

    ಬೈಂದೂರು: ಶಿವಲಿಂಗ ಸ್ಪರ್ಶಪೂಜೆಯ ವಿಶಿಷ್ಟ ಕ್ಷೇತ್ರ ವಣಕೊಡ್ಲು

    Updated:13/02/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಲೇಖನ
    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶಿವದೇವಾಲಯಗಳಲ್ಲಿ ಶಿವಲಿಂಗ ಸ್ಪರ್ಶಪೂಜೆಯ ಏಕೈಕ ಶಿವದೇಗುಲ ಎಂಬ ಪ್ರಸಿದ್ಧಿಗೆ ಪಾತ್ರವಾದ ಬೈಂದೂರಿನ ಗಂಗಾನಾಡು ಗ್ರಾಮದ ವಣಕೊಡ್ಲುವಿನ ಪುರಾತನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಜರುತ್ತಲಿದೆ.

    Click Here

    Call us

    Click Here

    ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಮಾರ್ಚ್ 7ರಂದು ಬೆಳಿಗ್ಗೆ 8 ಗಂಟೆಯಿಂದಲೇ ಭಕ್ತಾದಿಗಳಿಗೆ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಮತ್ತು ಸ್ಪರ್ಶಪೂಜೆ ಆರಂಭಗೊಂಡಿದ್ದು ರಾತ್ರಿ 10 ಗಂಟೆಗೆ ದೇವರ ಸುತ್ತು ಉತ್ಸವ, ಕಟ್ಟೆಪೂಜೆ ಹಾಗೂ ಪ್ರಸಾದ ವಿತರಣೆ, ಮಾರ್ಚ್ 8ರಂದು ಶುದ್ಧಕಳಶ, ಕಲಾವೃದ್ಧಿಹೋಮ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಯಕ್ಷಗಾನ ಬಯಲಾಟ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ. ಕುಂದಾಪ್ರ ಡಾಟ್ ಕಾಂ ಲೇಖನ

    ಹಲವು ಗಣ್ಯ ಮಹನೀಯರು ಮಹಾಶಿವರಾತ್ರಿ ಮಹೋತ್ಸವದಲ್ಲಿ ಭಾಗವಹಿಸಿದ್ದಾಗಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಅಣ್ಣಪ್ಪ ಶೆಟ್ಟಿ ಯಡ್ತರೆ, ಡಾ. ಮಿಥುನ್ ಶೆಟ್ಟಿ, ಡಾ. ತಿಲಕ್ ಶೆಟ್ಟಿ ಮೊದಲಾದವರು ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟರು. ಬೈಂದೂರು ಪೋಲಿಸರು ಶಿಸ್ತು ವ್ಯವಸ್ಥೆಯನ್ನು ಕೈಗೊಂಡಿದ್ದರು. ಸ್ಥಳೀಯ ಉತ್ಸಾಹೀ ಯುವಕರು ಸ್ವಯಂಸೇವಕರಾಗಿ ಉತ್ಸವದ ಯಶಸ್ಸಿಗೆ ಸಹಕರಿಸಿದರು.

    ವಿಶಿಷ್ಟ ಕ್ಷೇತ್ರ:ಕ್ರಿ. ಶ. 958ನೇ ಇಸವಿಯಲ್ಲಿ ರಾಜಾಶ್ರಯವನ್ನು ಪಡೆದಿದ್ದ ದೇಗುಲವೆನ್ನಲಾದ ವಣಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಶಿವಲಿಂಗ ಸ್ಪರ್ಶ ಪೂಜೆಯ ವಿಶಿಷ್ಟ ಕ್ಷೇತ್ರವೆನಿಸಿದೆ. ಮಹಾಶಿವರಾತ್ರಿ ದಿನವನ್ನು ಹೊರತುಪಡಿಸಿ ಬೇರೆ ದಿನಗಳಲ್ಲಿ ಅರ್ಚಕರಿಂದ ದೇಗುಲದಲ್ಲಿ ಪೂಜೆ ನಡೆಯುತ್ತದೆ. ಮಹಾಶಿವರಾತ್ರಿಯಂದು ಈ ದೇಗುಲಕ್ಕೆ ಹರಿದು ಬರುವ ಭಕ್ತ ಜನಸಾಗರವು ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಿ ಶಿವಲಿಂಗವನ್ನು ಮುಟ್ಟಿ ಪೂಜಿಸಿ ಪುಲಕಿತರಾಗುವ ಪುಣ್ಯಾವಕಾಶವನ್ನು ಪಡೆಯುತ್ತಾರೆ. ಆದ್ದರಿಂದ ಈ ಕ್ಷೇತ್ರ ಎರಡನೆಯ ಗೋಕರ್ಣ ಎಂದೂ ಕರೆಯಲ್ಪಟ್ಟಿದೆ. ಕುಂದಾಪ್ರ ಡಾಟ್ ಕಾಂ ಲೇಖನ. ದೇವಸ್ಥಾನದ ಮುಂಭಾಗದಲ್ಲಿರುವ ವಿಶಾಲವಾದ ಪುಷ್ಕರಿಣಿಯ ಪವಿತ್ರ ಜಲವು ಗಂಗಾ ನದಿಯಿಂದ ಹರಿದು ಬರುವ ಒರತೆ ಎಂಬ ಪ್ರತೀತಿಯಿದೆ. ಗಂಗೆಯ ನಾಳ ಹರಿದು ಬರುವುದರಿಂದ ಈ ಪ್ರದೇಶವು ಗಂಗಾನಾಡು ಎಂದು ಕರೆಯಲ್ಪಟ್ಟಿದೆ ಎನ್ನಲಾಗುತ್ತದೆ. ಕುಂದಾಪ್ರ ಡಾಟ್ ಕಾಂ ಲೇಖನ

    ಶಿವಸಾನ್ನಿಧ್ಯ: ಪುರಾತನವಾದ ಈ ದೇವಸ್ಥಾನದಲ್ಲಿ ಪಾರ್ವತಿ, ಗಣಪತಿ ಸಹಿತ ಶಿವ ಸಾನ್ನಿಧ್ಯವಿದೆ. ದೇಗುಲದ ಹೊರಭಾಗದಲ್ಲಿ ನಾಗದೇವರ ಸಾನ್ನಿಧ್ಯವಿದೆ. ಪುಷ್ಕರಿಣಿ, ಬಲಿಕಲ್ಲು, ಧ್ವಜಪೀಠ ಮೊದಲಾದುವುಗಳಿವೆ. ಶಿವರಾತ್ರಿ ಉತ್ಸವವು ಇಲ್ಲಿನ ಅತ್ಯಂತ ಸಂಭ್ರಮದ ಆಚರಣೆಯಾಗಿ ಖ್ಯಾತವಾಗಿದೆ. ನವರಾತ್ರಿ ಉತ್ಸವ, ದೀಪದ ಅಮಾವಾಸ್ಯೆಯನ್ನು ಇಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕುಂದಾಪ್ರ ಡಾಟ್ ಕಾಂ ಲೇಖನ

    Click here

    Click here

    Click here

    Call us

    Call us

    ಅಭಿವೃದ್ಧಿಯ ಹಾದಿಯಲ್ಲಿ: ರಾಜಾಶ್ರಯ ತಪ್ಪಿದ ಬಳಿಕ ಸ್ವಲ್ಪಮಟ್ಟಿಗೆ ಕಳಾಹೀನವಾದ ವಣಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಸ್ಥಳೀಯ ಯಡ್ತರೆ ಮನೆತನದವರು ಹಂತ ಹಂತವಾಗಿ ಅಭಿವೃದ್ಧಿಯ ಹಾದಿಯಲ್ಲಿ ಸಾಗಿಸಿದ್ದಾರೆ. ಈ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಯಡ್ತರೆ ಅಣ್ಣಪ್ಪ ಶೆಟ್ಟಿ ಮತ್ತು ಅವರ ಪುತ್ರರು ದೇವಸ್ಥಾನದ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, 2010ರ ಜೂನ್ ತಿಂಗಳಿನಲ್ಲಿ ಇಲ್ಲಿನ ಶ್ರೀದೇವರ ಅಷ್ಟಬಂಧ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮೊದಲಾದ ಕಾರ್ಯಗಳು ನಡೆದಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಭಕ್ತರ ಅನುಕೂಲಕ್ಕಾಗಿ ದೇವಾಲಯದಲ್ಲಿ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ತಕ್ಕಮಟ್ಟಿಗೆ ಪ್ರಯತ್ನಗಳು ನಡೆದಿವೆ. ಕುಂದಾಪ್ರ ಡಾಟ್ ಕಾಂ ಲೇಖನ

    More photos will update soon

    Shivaratri Byndoor Vanakodlu2 Shivaratri Byndoor Vanakodlu3

    Like this:

    Like Loading...

    Related

    ವಿಶೇಷ ವರದಿ ಬೈಂದೂರು
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    01/11/2024

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d