Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಲ ಸೌಕರ್ಯ ಕಲ್ಪಿಸಿಕೊಡಿ: ಗುಜ್ಜಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಗ್ರಹ
    ಊರ್ಮನೆ ಸಮಾಚಾರ

    ಮೂಲ ಸೌಕರ್ಯ ಕಲ್ಪಿಸಿಕೊಡಿ: ಗುಜ್ಜಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಗ್ರಹ

    Updated:20/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಗ್ರಾಮದ ಸಮಸ್ಯೆಗಳ ನಿವಾರಣೆ, ಮೂಲ ಸೌಕರ್ಯಗಳನ್ನು ಒದಗಿಸುವಂತೆ ಒಂದಷ್ಟು ಚರ್ಚೆಗಳು, ಬೇಡಿಕೆಗಳು ಶುಕ್ರವಾರ ಗುಜ್ಜಾಡಿಯ ರಾಮಮಂದಿರದಲ್ಲಿ ನಡೆದ ಗುಜ್ಜಾಡಿ ಗ್ರಾ.ಪಂ.ನ 2ನೇ ಸುತ್ತಿನ ಗ್ರಾಮಸಭೆಯಲ್ಲಿ ಕೇಳಿಬಂದವು.

    Click Here

    Call us

    Click Here

    ಗ್ರಾ.ಪಂ. ಅಧ್ಯಕ್ಷ ಹರೀಶ್‌ ಮೇಸ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ತಮ್ಮ ಗ್ರಾಮದ ಕೆಲವು ನ್ಯೂನತೆಗಳು ಹಾಗೂ ಸಮಸ್ಯೆಗಳನ್ನು ನಿವಾರಿಸಲು ಬೇಡಿಕೆಗಳನ್ನು ಇಟ್ಟರು. ಕಳೆದ ಹಲವಾರು ಸಭೆಗಳಲ್ಲಿ ಅಧಿಕಾರಿಗಳ ಗೈರು ಹಾಜರಿಯನ್ನು ಕಂಡಿದ್ದ ಈ ಗ್ರಾಮಸಭೆಯಲ್ಲಿ ಇಂದು ಹೆಚ್ಚಿನ ಅಧಿಕಾರಿಗಳು ಭಾಗವಹಿಸಿದ್ದರು.

    ಗುಜ್ಜಾಡಿಯಲ್ಲಿ ಶ್ಮಶಾನ ನಿರ್ಮಾಣವಾಗಬೇಕು ಎಂದು ಗ್ರಾಮಸ್ಥರೊಬ್ಬರು ಬೇಡಿಕೆಯನ್ನಿಟ್ಟರು. ಜನತಾ ಕಾಲನಿಯ ನಿವಾಸಿಗಳ ಕುಡಿಯುವ ನೀರಿಗಾಗಿ ನಿರ್ಮಿಸಲಾಗಿದ್ದ ಬಾವಿಯಿಂದ ಇತರ‌ರು ವಾಣಿಜ್ಯ ಕೆಲಸಗಳಿಗೆ ಉಪಯೋಗಿಸಲು ಕೊಂಡೊಯ್ಯುವು ದರಲ್ಲಿ ಪರಿಸರವನ್ನು ಗಲೀಜು ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆಗ್ರಹಿಸಿದರು. ನಾಯಕವಾಡಿ -ಗುಜ್ಜಾಡಿ ರಾಮಂದಿರದ ರಸ್ತೆಯಲ್ಲಿ ಅಪಘಾತ ವಲಯದಲ್ಲಿ ದಾರಿದೀಪ ಅಳವಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

    ಈ ಸಂದರ್ಭ ಮಾತನಾಡಿದ ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌ ಅವರು ಶ‌¾ಶಾನಕ್ಕಾಗಿ ಈಗಾಗಲೇ ಗ್ರಾ.ಪಂ. ಪ್ರಸ್ತಾವನೆಯನ್ನು ಕಳುಹಿಸಿದೆ. ಅಲ್ಲದೇ ಜನತಾ ಕಾಲನಿಯಲ್ಲಿರುನ ಬಾವಿ ಸಾರ್ವಜನಿಕ ಬಾವಿಯಾಗಿದ್ದು ಇದನ್ನು ಎಲ್ಲ ಜನರು ಉಪಯೋಗಿಸಬಹುದಾಗಿದೆ. ಆದರೆ ಅಲ್ಲಿನ ನಿವಾಸಿಗಳಿಗೆ ತೊಂದರೆಯಾಗುವ ರೀತಿಯಲ್ಲಿ ಬಾವಿಯ ನೀರನ್ನು ಕೊಂಡೊಯ್ಯಲು ಅವಕಾಶವಿರುವುದಿಲ್ಲ. ನಮ್ಮ ಜಿ.ಪಂ. ವ್ಯಾಪ್ತಿಗೆ ಅನುದಾನದ ಕೊರತೆ ಇದೆ. ಆದರೆ ಈಗಾಗಲೇ ಬಂದ ಅನುದಾನದಲ್ಲಿ ಗುಜ್ಜಾಡಿ ಗ್ರಾ.ಪಂ.ಗೆ ಕುಡಿಯುವ ನೀರು ಹಾಗೂ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

    ಗ್ರಾಮಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಿಂದ ದೊರೆ ಯುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥ ರೊಂದಿಗೆ ಚರ್ಚೆ ನಡೆಸಿದರು. ಗ್ರಾಮಸಭೆಯ ನೊಡೆಲ್‌ ಅಧಿಕಾರಿಯಾಗಿ ತಾ.ಪಂ. ಅಧಿಕಾರಿ ಇಬ್ರಾಹಿಂ ಪುರ್‌ ಭಾಗವಹಿಸಿದ್ದರು. ತಾ.ಪಂ. ಸದಸ್ಯ ನಾರಾಯಣ ಕೆ., ಗ್ರಾ.ಪಂ. ಉಪಾಧ್ಯಕ್ಷ, ಸದಸ್ಯರು ಭಾಗವಹಿಸಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    18 + 10 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.