Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜಕಾರಣಿಗಳ ಹಣದ ಮೂಲ ಪ್ರಶ್ನಿಸದಿದ್ದರೆಯೇ ಉತ್ತಮ ನಾಯಕನ ಆಯ್ಕೆ ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ
    ಊರ್ಮನೆ ಸಮಾಚಾರ

    ರಾಜಕಾರಣಿಗಳ ಹಣದ ಮೂಲ ಪ್ರಶ್ನಿಸದಿದ್ದರೆಯೇ ಉತ್ತಮ ನಾಯಕನ ಆಯ್ಕೆ ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬಹ್ಮಾವರ: ರಾಜಕಾರಣದಲ್ಲಿರುವವರು ದಿನ ನಿತ್ಯ ಹಣ ನೀಡುತ್ತಾರೆ ಎಂದರೆ ಆ ಹಣದ ಮೂಲ ಯಾವುದು ಎನ್ನುವ ಪ್ರಶ್ನೆ ಮಾಡುವ ಮನೋಭಾವವನ್ನು ಜನತೆ ಮಾಡದಿದ್ದರೆ ಆಗ ಉತ್ತಮ ಜನಪ್ರತಿನಿಧಿಯ ಆಯ್ಕೆ ಸಾಧ್ಯವಿಲ್ಲ. ನೇರ ನಿಷ್ಠುರವಾಗಿ ಬರೆಯುವ ಪತ್ರಕರ್ತರು ಇದ್ದರು ಕೂಡ ಇಂದು ಜನಪರ ಸುದ್ದಿ ಕಳುಹಿಸಿದರು ಕೂಡ ಡೆಸ್ಕ್‌ನಲ್ಲಿ ಬದಲಾವಣೆಯಾಗಿ ಪ್ರಕಟಗೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಪತ್ರಕರ್ತರ ಜೊತೆಗೆ ಜನತೆಯು ಕೂಡ ಬದಲಾವಣೆ ಬಯಸಿದ್ದಲ್ಲಿ ಮಾತ್ರ ವ್ಯವಸ್ಥೆ ಸರಿಯಾಗಲಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಬ್ರಹ್ಮಾವರ ಬಂಟರ ಭವನದಲ್ಲಿ ಬ್ರಹ್ಮಾವರ ಪ್ರೆಸ್ ಕ್ಲಬ್ ವತಿಯಿಂದ ನೀಡಲಾಗುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಆಯೋಜಿಸಲಾದ ಪತ್ರಿಕೋದ್ಯಮ ರಾಜಕೀಯ ಕಾನೂನು ವಿಷಯಾಧಾರಿತ ಪತ್ರಿಕೋದ್ಯಮ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಪತ್ರಕರ್ತ, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ, ಬ್ರಹ್ಮಾವರ ಪ್ರೆಸ್ ಕ್ಲಬ್ ಸದಸ್ಯರು ರಾಜ್ಯ ಕಂಡ ಅಪ್ರತಿಮ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಅವರನ್ನು ನೆನಪಿಸುವ ನಿಟ್ಟಿನಲ್ಲಿ ಆಯೋಜಿಸಿರುವುದ ಶ್ಗಾಘನಾರ್ಹ. ಇಂದು ನಿಷ್ಟೂರವಾಗಿ ವರದಿಗಳನ್ನು ಮಾಡುತ್ತಿರುವುದು ನಗರದ ಏಸಿ ಕೋಣೆಯಲ್ಲಿ ಕುಳಿತುಕೊಂಡಿರುವ ವರದಿಗಾರರಲ್ಲ, ಬದಲಿಗೆ ಗ್ರಾಮೀಣ ಪ್ರದೇಶದಲ್ಲಿ ವರದಿಗಾರಿಕೆಯನ್ನು ಮಾಡಿಕೊಂಡಿರುವ ಗ್ರಾಮೀಣ ಪತ್ರಕರ್ತರು ಎನ್ನಬಹುದು. ರಾಜಕಾರಣಿಗಳು ಎಂದರೆ ಒಂದು ರೀತಿಯಲ್ಲಿ ನೋಡುವ ಈ ಕಾಲದಲ್ಲಿ ಕಾನೂನು ಕಾಯಿದೆಯನ್ನು ಸುವ್ಯವಸ್ಥೆಯಲ್ಲಿರಿಸಿರುವುದು ರಾಜಕಾರಣಿಗಳು ಎನ್ನುವುದನ್ನು ನಾವು ಮರೆಯಬಾರದು. ಸದ್ಯ ಪರಿಸ್ಥಿತಿಯಲ್ಲಿ ಪತ್ರಿಕೋದ್ಯಮ ರಾಜಕೀಯ ಮತ್ತು ಕಾನೂನು ಸಮತೋಲನ ಕಾಪಾಡಿಕೊಳ್ಳಬೇಕಾದ ಅಗತ್ಯತೆ ಇದೆ ಎಂದರು.

    ಮುಖ್ಯ ಅತಿಥಿಗಳಾಗಿ ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು. ಬ್ರಹ್ಮಾವರ ಪ್ರೆಸ್ ಕ್ಲಬ್ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಸ್ವಾಗತಿಸಿದರು. ಚಿಂತಕ ಜ್ಞಾನ ವಸಂತ್ ಶೆಟ್ಟಿ ಪ್ರಸ್ತಾವಿಸಿದರು. ಕ್ಲಬ್‌ನ ಶೇಷಗಿರಿ ಭಟ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    one × 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.