Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಟ ಪ್ರಕಾಶ್ ರೈ ಅವರಿಗೆ ಡಾ.ಕಾರಂತ ಹುಟ್ಟೂರ ಪ್ರಶಸ್ತಿ
    ಊರ್ಮನೆ ಸಮಾಚಾರ

    ನಟ ಪ್ರಕಾಶ್ ರೈ ಅವರಿಗೆ ಡಾ.ಕಾರಂತ ಹುಟ್ಟೂರ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಕೋಟತಟ್ಟು ಗ್ರಾಮಪಂಚಾಯತ್ ಕೋಟ, ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.)ದ ಸಹಭಾಗಿತ್ವದಲ್ಲಿ ಕಳೆದ ಹನ್ನೆರಡು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ.

    Click Here

    Call us

    Click Here

    ಈಗಾಗಲೇ ಶ್ರೀಯುತರಾದ ವೀರಪ್ಪ ಮೊಯ್ಲಿ, ವೆಂಕಟಾಚಲ , ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲುಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ.ಎಂ. ಹೆಗ್ಡೆಯವರಿಗೆ ಪ್ರದಾನ ಮಾಡಲಾಗಿರುತ್ತದೆ.

    ೨೦೧೭ನೇ ಸಾಲಿನಲ್ಲಿ ಸೃಜನಶೀಲತೆ ವ್ಯಕ್ತಿತ್ವದ ಬಹುಭಾಷಾ ನಟ, ನಿರ್ಮಾಪಕ, ನಿರ್ದೇಶಕ ಪ್ರಕಾಶ ರೈ ಅವರನ್ನು ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಅಕ್ಟೋಬರ್ ೧೦ ರಂದು ಡಾ.ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ದಿನ ಡಾ.ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ.

    ಕಾರಂತರಂತೆ ರಂಗಭೂಮಿ, ಚಲನಚಿತ್ರ, ಸಾಂಸ್ಕೃತಿಕ-ಸಾಹಿತ್ಯಿಕ ಚಿಂತಕ, ಬಹುಭಾಷಾ ನಟ, ನಿಷ್ಠುರ ಗುಣಗಳನ್ನು ಮೈಗೂಡಿಸಿಕೊಂಡ ವ್ಯಕ್ತಿತ್ವದವರು.

    ಈ ಬಾರಿ ಕಾರಂತ ಜನ್ಮ ದಿನೋತ್ಸವದ ಅಂಗವಾಗಿ ಅಕ್ಟೋಬರ್ ಒಂದರಿಂದ ಹತ್ತರವರೆಗೆ ಹತ್ತು ದಿನಗಳ ಸಾಂಸ್ಕೃತಿಕ -ಸಾಹಿತ್ಯಿಕ ಸುಗ್ಗಿ “ತಂಬೆಲರು-೨೦೧೭”ನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಸಮ್ಮೇಳನ, ನಾಟಕ, ಆರೋಗ್ಯ ಮೇಳ, ಶತಕವಿ ಸಮ್ಮೇಳನ, ಚಿಣ್ಣರ ಹಬ್ಬ, ವಿಚಾರಗೋಷ್ಠಿ, ಚಲನಚಿತ್ರ ಪ್ರದರ್ಶನ, ತೆಂಕು ಬಡಗಿನ ಯಕ್ಷ-ಗಾನ-ನೃತ್ಯ ವೈಭವ ಮೊದಲಾದ ಕಾರ್ಯಕ್ರಮಗಳನ್ನು ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನ್ಲಲಿ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಕಾರಂತ ಪ್ರತಿಷ್ಠಾನದ ಅಧ್ಯಕ್ಷ ಆನಂದ ಸಿ.ಕುಂದರ್ ಹೇಳಿದರು.

    Click here

    Click here

    Click here

    Click Here

    Call us

    Call us

    ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಚ್.ಪ್ರಮೋದ್ ಹಂದೆ, ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟತಟ್ಟು, ಅಶ್ವಥ್ ಆಚಾರ್ಯ, ಮಾಧ್ಯಮ ವಕ್ತಾರ, ಡಾ.ಕಾರಂತ ಪ್ರತಿಷ್ಠಾನ(ರಿ.) ಕೋಟ, ಯು.ಎಸ್.ಶೆಣೈ, ಆಯ್ಕೆ ಸಮಿತಿಯ ಸದಸ್ಯರು, ಸುಬ್ರಾಯ ಆಚಾರ್ಯ, ಟ್ರಸ್ಟಿಗಳು ಕಾರಂತ ಪ್ರತಿಷ್ಠಾನ(ರಿ) ಕೋಟ, ಭಾಗವಹಿಸಿ ವಿವಿಧ ಮಾಹಿತಿ ನೀಡಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    4 × three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.