Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂದಾಯ ಸಚಿವರಿಂದ ನೂತನ ಬೈಂದೂರು ತಾಲೂಕು ಲೋಕಾರ್ಪಣೆ
    Recent post

    ಕಂದಾಯ ಸಚಿವರಿಂದ ನೂತನ ಬೈಂದೂರು ತಾಲೂಕು ಲೋಕಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ರಾಜ್ಯದಲ್ಲಿ ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದ ಸಂದರ್ಭದಲ್ಲೇ ಸ್ವಚ್ಚ ಹಾಗೂ ಪಾರದರ್ಶಕ ಆಡಳಿತವನ್ನು ಜಾರಿಗೆ ತರುವ ಘೋಷಿಸಿದ್ದು, ಅಧಿಕಾರಿಗಳು ತೊಡಗಿಸಿಕೊಳ್ಳುವಿಕೆಯಿಂದ ಇದು ಯಶಸ್ವಿಯಾಗಲಿದೆ. ಭೂಮಿಯಲ್ಲಿ ಬದುಕುವ ಯಾರೊಬ್ಬರೂ ತಮ್ಮ ಹಕ್ಕಿನಿಂದ ವಂಚಿತರಾಗಬಾರದು. ಅಧಿಕಾರಿಗಳು ಉದಾಸಿನ ಮಾಡುವ ಪ್ರವೃತ್ತಿ ಬಿಡಿ, ಸರಕಾರದ ಆದೇಶದಂತೆ ಕೆಲಸ ಮಾಡಿ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

    Click Here

    Call us

    Click Here

    ಅವರು ನೂತನ ಬೈಂದೂರು ತಾಲೂಕು ಲೋಕಾರ್ಪಣೆ ಮಾಡಿ ಮಾತನಾಡಿ ರಾಜ್ಯದಲ್ಲಿ ಅಕ್ರಮ ಸಕ್ರಮ, ಡೀಮ್ಡ್ ಫಾರೆಸ್ಟ್, ಕುಮ್ಕಿ ಭೂಮಿ ಸಮಸ್ಯೆಯನ್ನು ಸರಳೀಕರಿಸುವ ಪ್ರಯತ್ನ ಮಾಡಲಾಗಿದ್ದು, ಭೂಮಿಯ ಹಕ್ಕಿನಿಂದ ವಂಚತರಿಗೆ ಭೂಮಿ ನೀಡಲು ಸರಕಾರ ಬದ್ಧವಾಗಿದೆ ಎಂದರು.  ರಾಜ್ಯದಲ್ಲಿ ನೂತನ ತಾಲೂಕು ರಚನೆಗೆ ಚಾಲನೆ ನೀಡಿದ ಬಳಿಕ ಉದ್ಘಾಟಿಸಲಾಗುತ್ತಿರುವ ಮೊದಲ ತಾಲೂಕು ಬೈಂದೂರು ಆಗಿದೆ ಎಂದ ಅವರು ಶಾಸಕರ ಬೇಡಿಕೆಯಂತೆ ಮಿನಿವಿಧಾನಸೌಧ ಮಂಜೂರು ಮಾಡಿಸುವ ಭರವಸೆ ನೀಡಿದರು.

    ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಬೈಂದೂರು ನಾಗಕರಿಕರ ಬಹುಕಾಲದ ಬೇಡಿಕೆಯನ್ನು ತಾಲೂಕು ರಚಿಸುವ ಮೂಲಕ ಈಡೇರಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸರಕಾರ ಇಲಾಖೆಗಳು ತಾಲೂಕು ಕೇಂದ್ರದಲ್ಲಿಯೇ ಕಾರ್ಯಾರಂಭಗೊಳ್ಳಲಿದೆ. ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದಲ್ಲಿ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದ್ದು, ಅವಕಾಶವಾದಿಗಳು ಮಾತ್ರ ಯಾರೋ ಮಾಡಿದ ಕೆಲಸವನ್ನು ಇನ್ಯಾರೋ ಮಾಡಿದ್ದಾರೆಂದು ಬಿಂಬಿಸುತ್ತಿದ್ದಾರೆ ಎಂದರು.

    ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ತಾಲೂಕು ದಂಡಾಧಿಕಾರಿ ಭೂಬಾಲನ್, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಶಂಕರ ಪೂಜಾರಿ, ಬಾಬು ಶೆಟ್ಟಿ, ಸುರೇಶ ಬಟವಾಡಿ, ಗೌರಿ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರಾದ ಮಾಲಿನಿ ಕೆ, ಸುಜಾತ ದೇವಾಡಿಗ, ಪುಪ್ಪರಾಜ ಶೆಟ್ಟಿ, ದಸ್ತಗಿರಿ ಸಾಬೇಬ್, ಗಿರಿಜಾ ಖಾರ್ವಿ, ಜಗದೀಶ ದೇವಾಡಿಗ, ಜಗದೀಶ ಪೂಜಾರಿ, ಗ್ರೀಷ್ಮಾ ಭಿಡೆ, ತಾಲೂಕು ಹೊರಟ ಹಾಗೂ ರಚನಾ ಸಮಿತಿ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ, ಮಾಜಿ ಪುರಸಭಾ ಅಧ್ಯಕ್ಷ ಸುಬ್ರಾಯ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದರು.

    ಬೈಂದೂರು ತಹಶೀಲ್ದಾರ್ ಕಿರಣ್ ಜಿ ಗೌರಯ್ಯ ಸ್ವಾಗತಿಸಿದರು. ಕುಂದಾಪುರ ತಹಶೀಲ್ದಾರ ಜಿ.ಎಂ ಬೋರ್ಕರ್ ವಂದಿಸಿದರು. ಪತ್ರಕರ್ತ ಅರುಣಕುಮಾರ್ ಶಿರೂರು ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    seventeen + 6 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.