Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೇ ದಿನಾಚರಣೆ. ಸಿಐಟಿಯುನಿಂದ ಬೃಹತ್ ಮೆರವಣಿಗೆ, ಬಹಿರಂಗ ಸಭೆ
    ಕುಂದಾಪ್ರದ್ ಸುದ್ಧಿ

    ಮೇ ದಿನಾಚರಣೆ. ಸಿಐಟಿಯುನಿಂದ ಬೃಹತ್ ಮೆರವಣಿಗೆ, ಬಹಿರಂಗ ಸಭೆ

    Updated:02/05/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಮೋದಿಯದ್ದು ಕಾರ್ಮಿಕ ವಿರೋಧಿ ಸರಕಾರ: ಪ್ರಕಾಶ್

    Click Here

    Call us

    Click Here

    ಕುಂದಾಪುರ: ಬಂಡವಾಳಶಾಹಿಗಳ ಪರವಾಗಿರುವ ಕೇಂದ್ರ ಸರಕಾರ ಹಿಂದಿನ ಸರಕಾರಕ್ಕಿಂತ ಹೆಚ್ಚು ಹಗರಣಗಳಲ್ಲಿ ತೊಡಗಿಕೊಂಡಿದೆ. ಇದು ಜಾರಿಗೆ ತರಲು ಉದ್ದೇಶಿಸಿರುವ ಹೊಸ ಕಾರ್ಮಿಕ ವಿರೋಧಿ ನೀತಿಯು ಕಾರ್ಮಿಕ ವಿರೋಧಿಯಾಗಿದ್ದು, ಕಾರ್ಮಿಕರ ಹಕ್ಕುಗಳನ್ನು ಹತ್ತಿಕ್ಕುವ ಹುನ್ನಾರ ನಡೆಯುತ್ತಿದೆ. ಕಾರ್ಮಿಕರಿಗಾಗಿ ಇರುವ ಐವತ್ನಾಲ್ಕು ಕಾನೂನುಗಳನ್ನು ಮೊಟಕುಗೊಳಿಸಿ ಕೇವಲ ಮೂರು ಕಾನೂನಿಗೆ ಪರಿವರ್ತಿಸುವ ಹುನ್ನಾರದ ಹಿಂದೆ ಬಂಡವಾಳಶಾಹಿಗಳ ಪರವಾದ ದೋರಣೆ ಅಡಗಿದೆ ಎಂದು ಸಿಐಟಿಯು ರಾಜ್ಯ ಮುಖಂಡ ಪ್ರಕಾಶ್‌ ಆರೋಪಿಸಿದರು.

    ಅವರು ಕಾರ್ಮಿಕ ದಿನಾಚರಣೆಯ ಅಂಗವಾಗಿ ಸಿಐಟಿಯು ನೇತೃತ್ವದಲ್ಲಿ ನಡೆದ ಬೃಹತ್ ಮೆರವಣಿಗೆ ಹಾಗೂ ನೆಹರು ಮೈದಾನದಲ್ಲಿ ನಡೆದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.

    ಕೋಟಿ ಕೋಟಿ ಹಣವನ್ನು ಕೇಲವ ಜಾಹೀರಾತಿಗಾಗಿ ಖರ್ಚುಮಾಡಿ ಜನರನ್ನು ಮರುಳುಗೊಳಿಸಿ ಅಧಿಕಾರಕ್ಕೆ ಬಂದ ಮೋದಿ ಸರಕಾರ ಕಳೆದ ಒಂದು ವರ್ಷದಿಂದ ಬಡವರು, ಕಾರ್ಮಿಕರ ಏಳಿಗೆಗೆ ಶ್ರಮಿಸಿಲ್ಲ. ಮೆಕ್ ಇನ್ ಇಂಡಿಯಾದಂತಹ ಪರಿಕಲ್ಪನೆಯನ್ನು ಸೃಷ್ಟಿಸಿದ ಮೋದಿ, ದೇಶದ ಜನರಿಗೆ ನೆರವು ಮಾಡಿಕೊಡುವ ಬದಲಿಗೆ ವಿದೇಶಿ ಬಂಡವಾಳದಾರರಿಗೆ ನೆರವು ನೀಡುತ್ತಿದ್ದಾರೆ. ಶ್ರೀಮಂತರಿಗೆ ವಿನಾಯತಿ ನೀಡಲು ಸರಕಾರದ ಬಳಿ ಹಣವಿದೆ. ಆದರೆ ಬಡವರಿಗೆ ಸವಲತ್ತುಗಳನ್ನು ಒದಗಿಸಲು ಸರಕಾರ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

    ಸಿಐಟಿಯು ಮುಖಂಡರಾದ ಎಚ್‌. ನರಸಿಂಹ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ರಾಜ್ಯ ಸಮಿತಿ ಉಪಾಧ್ಯಕ್ಷ, ಜಿಲ್ಲಾ ಅಧ್ಯಕ್ಷ ಕೆ.ಶಂಕರ್‌, ಕುಂದಾಪುರ ಪುರಸಭೆ ಅಧ್ಯಕ್ಷೆ ಕಲಾವತಿ ಯು.ಎಸ್‌., ಸಿ.ಐ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕಾರ್ಮಿಕ‌ ಮುಖಂಡ ಮಹಾಬಲ ವಡೇರಹೋಬಳಿ, ಯು.ದಾಸ ಭಂಡಾರಿ, ಹಂಚು ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ನರಸಿಂಹ, ಕೃಷಿ ಕೂಲಿಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ, ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷ ಲಕ್ಷ್ಮಣ ಬರೆಕಟ್ಟು, ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷೆ ಬಲ್ಕಿಸಾ, ಅಕ್ಷರ ದಾಸೋಹ ಕಾರ್ಮಿಕ ಸಂಘದ ತಾ.ಅಧ್ಯಕ್ಷೆ ಜಯಶ್ರೀ, ಅಂಗನವಾಡಿ ಕಾರ್ಮಿಕರ ತಾಲೂಕು ಅಧ್ಯಕ್ಷೆ ರತಿ ಶೆಟ್ಟಿ, ಆಶಾ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷೆ ವಸಂತಿ ಶೆಟ್ಟಿ, ಕೆಲಸಕಾರರ ಸಂಘದ ಅಧ್ಯಕ್ಷೆ ಜ್ಯೋತಿ, ಡಿವೈಎಫ್‌ಐ ತಾಲೂಕು ಕಾರ್ಯದರ್ಶಿ ರಾಜೇಶ ವಡೇರಹೋಬಳಿ ಫ್ರೆಂಡ್ಸ್‌ ಸರ್ಕಲ್‌ ಅಧ್ಯಕ್ಷ ಮನೋಹರ್‌ ಪುತ್ರನ್‌, ಗೌರವಾಧ್ಯಕ್ಷ ಶೀನ ಖಾರ್ವಿ, ಕಾರ್ಯದರ್ಶಿ ಶೇಖರ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕುಂದಾಪುರ ಮೀನುಮಾರುಕಟ್ಟೆಯ ಫ್ರೆಂಡ್ಸ್‌ ಸರ್ಕಲ್‌ ವತಿಯಿಂದ ನಿವೃತ್ತ ಕಾರ್ಮಿಕರಾದ ಸಿ.ನಾರಾಯಣ ಕುಂದಾಪುರ ಮತ್ತು ಅಬ್ರಾಹಂ ಕಾರ್ಕಡ ಅವರನ್ನು ಸಮ್ಮಾನಿಸಲಾಯಿತು. ಸುರೇಶ್‌ ಕಲ್ಲಾಗರ ಸ್ವಾಗತಿಸಿದರು.

    _MG_3652IMG_3765IMG_3764

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    17 − three =

    Call us

    Click Here

    Call us

    Call us

    Call us
    Highest Viewed Recently
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.