ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನೂತನವಾಗಿ ಅಸ್ತಿತ್ವಕ್ಕೆ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವನ್ನು ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಉದ್ಘಾಟನೆಗೊಳಿಸಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶಪ್ರಸಾದ್ ಪಾಂಡೇಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅತಿಥಿಗಳಾಗಿದ್ದರು.
ತಾಲೂಕು ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಪ್ರಸ್ತಾವಿಕ ಮಾತುಗಳನ್ನಾಡಿದರು. ಕೋಶಾಧಿಕಾರಿ ನರಸಿಂಹ ಬಿ. ನಾಯಕ್ ಸ್ವಾಗತಿಸಿದರು. ಸದಸ್ಯ ಸುನಿಲ್ ಹೆಚ್. ಜಿ ಬೈಂದೂರು ವಂದಿಸಿದರು. ಪ್ರಧಾನ ಕಾರ್ಯದರ್ಶಿ ಅರುಣಕುಮಾರ್ ಶಿರೂರು ಕಾರ್ಯಕ್ರಮ ನಿರೂಪಿಸಿದರು.
















