Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್‌ನಿಂದ ಹಿಂಜಾವೇ ಕಾರ್ಯದರ್ಶಿಗೆ ಸುಬ್ರಹ್ಮಣ್ಯದಲ್ಲಿ ಹಲ್ಲೆ
    ಅಪಘಾತ-ಅಪರಾಧ ಸುದ್ದಿ

    ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್‌ನಿಂದ ಹಿಂಜಾವೇ ಕಾರ್ಯದರ್ಶಿಗೆ ಸುಬ್ರಹ್ಮಣ್ಯದಲ್ಲಿ ಹಲ್ಲೆ

    Updated:25/10/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಠ ಮತ್ತು ದೇವಸ್ಥಾನ ನಡುವಿನ ಸಂಘರ್ಷ ಹಿಂಸೆಗೆ ತಿರುಗಿದೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ, ಗುಂಪು ಕಟ್ಟಿಕೊಂಡು ಬಂದು ಕುಕ್ಕೆಯ ಸ್ಥಳೀಯ ಯುವಕರ ಮೇಲೆ ಹಲ್ಲೆ ನಡೆಸಿದ್ದಾಳೆ. ಪೊಲೀಸರು ಆಪಾದಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Click Here

    Call us

    Click Here

    ಕಳೆದ ಎರಡು ತಿಂಗಳಿಂದ ವಿವಾದಕ್ಕೆ ಕಾರಣವಾಗಿದ್ದ ಮಠ ಮತ್ತು ದೇವಸ್ಥಾನದ ಸಂಘರ್ಷ ಮೊನ್ನೆ ನವರಾತ್ರಿಯ ಮಧ್ಯೆ ಮಠದ ಸ್ವಾಮೀಜಿ ಉಪವಾಸ ಕುಳಿತಿದ್ದು ದೊಡ್ಡ ರಾದ್ಧಾಂತಕ್ಕೆ ಎಡೆ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಹಾಗೆಯೇ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚೈತ್ರಾ ಕುಂದಾಪುರ ಮತ್ತು ಸುಬ್ರಹ್ಮಣ್ಯದ ಹುಡುಗರ ಮಧ್ಯೆ ಭಾರೀ ವಾಕ್ಸಮರ ನಡೆದಿತ್ತು.

    ಆ ಕಡೆಯಿಂದ ಕುಂದಾಪುರಕ್ಕೆ ಬಂದರೆ ನೋಡಿಕೊಳ್ತೀನಿ ಅಂದಿದ್ರೆ, ಈ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬಂದರೆ ನೋಡ್ತೀವಿ ಅಂತಾ ಸವಾಲು ಕೂಡ ಆಗಿತ್ತು. ಇತ್ತ ವಾಟ್ಸಪ್ ಸವಾಲು ಸ್ವೀಕರಿಸಿದ ಚೈತ್ರಾ ಕುಂದಾಪುರದ ತನ್ನ ಹುಡುಗರನ್ನು ಕಟ್ಟಿಕೊಂಡು ಸ್ವಾಮೀಜಿಯನ್ನು ಕಾಣುವ ನೆಪದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದಳು.

    ಈ ವಿಚಾರ ತಿಳಿದು ಚೈತ್ರಾಳನ್ನು ಪ್ರಶ್ನೆ ಮಾಡಲು ಬಂದಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಂಗಳದಲ್ಲಿಯೇ ಬೀದಿ ಕಾಳಗ ನಡೆದಿದೆ. ಚೈತ್ರಾ ಮತ್ತು ಹುಡುಗರು ರಾಡ್ ಹಿಡ್ಕೊಂಡು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂಬಾತನ ಮೇಲೆ ಹಲ್ಲೆ ನಡೆಸಿದ್ದು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ವಿಚಾರ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಲಾಠಿಚಾರ್ಜ್ ನಡೆಸಿ ಎರಡು ಗುಂಪನ್ನು ಚದುರಿಸಿದ್ದಾರೆ. ಸಂಜೆ ಹೊತ್ತಿಗೆ ಚೈತ್ರಾ ನಡೆಸಿದ ದರ್ಪ ಮತ್ತು ರಾಡಿನಲ್ಲಿ ಹಲ್ಲೆ ನಡೆಸಿದ್ದು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿದೆ. ತಲೆಗೆ ಗಂಭೀರ ಗಾಯಗೊಂಡ ಗುರುಪ್ರಸಾದ್ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    Click here

    Click here

    Click here

    Click Here

    Call us

    Call us

    ಘಟನೆ ವೇಳೆ ಲಾಠಿಚಾರ್ಜ್ ಮಾಡಿ ಗುಂಪು ಚದುರಿಸಿದ್ದ ಪೊಲೀಸರು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇದು ಸ್ಥಳೀಯರನ್ನು ಕೆರಳಿಸಿದ್ದು, ಚೈತ್ರಾ ಮತ್ತು ಗ್ಯಾಂಗ್ ಸದಸ್ಯರನ್ನು ಬಂಧಿಸಬೇಕೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ಗುರುವಾರ ವರ್ತಕರು ಸ್ವಯಂಪ್ರೇರಿತರಾಗಿ ಕುಕ್ಕೆ ಸುಬ್ರಹ್ಮಣ್ಯ ಬಂದ್‍ಗೆ ಮುಂದಾಗಿದ್ದಾರೆ.

    https://youtu.be/hxznv2G3HaI

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    four × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.