Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಭಿವೃದ್ಧಿ ಮತ್ತು ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ ಎನ್ನುವ ಭರವಸೆ ಜನರಿಗಿದೆ: ಬಿವೈಆರ್
    ಊರ್ಮನೆ ಸಮಾಚಾರ

    ಅಭಿವೃದ್ಧಿ ಮತ್ತು ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ ಎನ್ನುವ ಭರವಸೆ ಜನರಿಗಿದೆ: ಬಿವೈಆರ್

    Updated:03/04/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಈ ಬಾರಿಯ ಲೋಕಸಭಾ ಚುನಾವಣೆ ದೇಶ ಒಂದು ಕುಟುಂಬ ಎಂಬ ನೆಲೆಯಲ್ಲಿ ಕೆಲಸ ಮಾಡುವ ಬಿಜೆಪಿಯ ನರೇಂದ್ರ ಮೋದಿ ಮತ್ತು ದೇಶ ಇರುವುದು ನಮ್ಮ ಕುಟುಂಬಗಳಿಗಾಗಿ ಎಂದು ಯೋಚಿಸುವ ಕಾಂಗ್ರೆಸ್, ಜೆಡಿಎಸ್ ನಡುವಿನ ಹೋರಾಟವಾಗಲಿದೆ. ಇದನ್ನು ಅರ್ಥಮಾಡಿಕೊಂಡಿರುವ ಮತದಾರರು ಬಿಜೆಪಿಯನ್ನು ಗೆಲ್ಲಿಸಿ ಮೋದಿ ಅವರನ್ನು ಇನ್ನೊಮ್ಮೆ ಪ್ರಧಾನಿ ಮಾಡಲಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಬಿ. ವೈ. ರಾಘವೇಂದರ ಹೇಳಿದರು.

    Click Here

    Call us

    Click Here

    ಸೋಮವಾರ ನಂದನವನದ ಖಾಸಗಿ ಹೋಟೆಲ್‌ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಭರವಸೆಯ ಮಾತನಾಡಿದರು. ದೇಶದ ಜನರು ಈಗ ಅಭಿವೃದ್ಧಿ ಮತ್ತು ರಕ್ಷಣೆಗೆ ಆದ್ಯತೆ ನೀಡುತ್ತಿದ್ದಾರೆ. ಈ ಕೆಲಸ ಬಿಜೆಪಿ ಮತ್ತು ಮೋದಿ ಅವರಿಂದ ಮಾತ್ರ ಸಾಧ್ಯ ಎನ್ನುವ ಭರವಸೆ ಅವರಲ್ಲಿ ಮೂಡಿದೆ. ಅದರ ಜತೆಗೆ ಮೋದಿ ನೇತೃತ್ವದ ಸರ್ಕಾರದ ಐದು ವರ್ಷಗಳ ಸಾಧನೆ ನೋಡಿ ಮತ ಹಾಕಲಿದ್ದಾರೆ. ಕ್ಷೇತ್ರದ ಎಲ್ಲ ೮ ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂತಹ ವಾತಾವರಣ ಇದೆ ಎಂದು ಅವರು ಹೇಳಿದರು.

    ಬೈಂದೂರಿನಲ್ಲಿ ಒಂದು ವರ್ಷದ ಹಿಂದೆ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿರುವ ಬಿ. ಎಂ. ಸುಕುಮಾರ ಶೆಟ್ಟಿ ಈ ಕನಿಷ್ಠ ಅವಧಿಯಲ್ಲಿ ರೂ ೧೭೮ ಕೋಟಿ ಅನುದಾನ ತಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಲೋಕಸಭಾ ಉಪ ಚುನಾವಣೆ ಮುಗಿದು ೬ ತಿಂಗಳಿನಲ್ಲಿ ತಮ್ಮಿಂದಲೂ ಸಾಕಷ್ಟು ಕೆಲಸ ಆಗಿದೆ. ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಉತ್ತಮ ಸಂಘಟನೆ ಇದೆ. ಬೂತ್ ಮಟ್ಟದ ಕಾರ್ಯಕರ್ತರು ನರೇಂದ್ರ ಮೋದಿ ಅವರು ಕೈಗೊಂಡ ಅಭಿವೃದ್ಧಿ ಯೋಜನೆಗಳ ಮಾಹಿತಿಯನ್ನು ಪ್ರತಿ ಮನೆಗೂ ಮುಟ್ಟಿಸಲಿದ್ದಾರೆ. ಇಲ್ಲಿ ನೇರ ಹಣಾಹಣಿ ಆದರೂ ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು, ಮೋದಿ ಪ್ರಧಾನಿ ಆಗಬೇಕು ಎಂಬ ಭಾವನೆ ಮತದಾರರಲ್ಲಿ ಮನೆಮಾಡಿದೆ. ಈ ಚುನಾವಣೆಯಲ್ಲಿ ಮತದಾರರು ಬಿಜೆಪಿ ಕೈಹಿಡಿಯಲು ಇವೆಲ್ಲವೂ ಕಾರಣಗಳಾಗಲಿವೆ ಎಂದರು. ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ೨೨ಕ್ಕೆ ಕಡಿಮೆ ಇಲ್ಲದಷ್ಟು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದರು.

    ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯದ ಕೊರತೆಯಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಮರಳು, ಜಲ್ಲಿ ಕೃತಕ ಅಭಾವ ಸೃಷ್ಟಿಸಿರುವುದರಿಂದ ಖಾಸಗಿ ನಿರ್ಮಾಣ ಕಾರ್ಯಗಳೂ ಸ್ಥಗಿತವಾಗಿವೆ. ಬೈಂದೂರು ತಾಲ್ಲೂಕು ಘೋಷಣೆಯಾಗಿ ವರ್ಷ ಕಳೆದಿದೆ. ಇಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹಲವು ಕಾಮಗಾರಿಗಳು ಅರ್ಧದಲ್ಲಿ ನಿಂತಿವೆ. ಮೈತ್ರಿ ಸರ್ಕಾರದ ವಿರುದ್ಧ ಜನರ ಅಸಮಾಧಾನ ಹೆಚ್ಚಾಗಿದೆ. ಈ ಬಾರಿ ವಿರೋಧ ಪಕ್ಷಗಳ ಸವಾಲನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಎದುರಿಸಲಾಗುವುದು. ಕಳೆದ ಬಾರಿಯ ಫಲಿತಾಂಶವೇ ಮರುಕಳಿಸಲಿದೆ ಎಂದು ಬಿ. ವೈ. ರಾಘವೇಂದ್ರ ಹೇಳಿದರು.

    ಕ್ಷೇತ್ರ ಕಾರ್ಯದರ್ಶಿ ದೀಪಕ್‌ಕುಮಾರ ಶೆಟ್ಟಿ ಸ್ವಾಗತಿಸಿ ವಂದಿಸಿದರು. ರಾಜ್ಯ ರೈತ ಮೋರ್ಚಾ ಅಧ್ಯಕ್ಷ ದತ್ತಾತ್ರಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ. ಬಾಬು ಶೆಟ್ಟಿ, ಶಂಕರ ಪೂಜಾರಿ, ಸುರೇಶ ಬಟವಾಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ಪುಷ್ಪರಾಜ ಶೆಟ್ಟಿ, ಸದಾಶಿವ ಪಡುವರಿ, ಕ್ಷೇತ್ರ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರಭಾರಿ ಪ್ರವೀಣಕುಮಾರ್ ಗುರ್ಮೆ ಇದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    1 × 2 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.