Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀರಾಮ ಈಗ ಬಿಜೆಪಿ ಪಕ್ಷದಲ್ಲಿಲ್ಲ, ಅಭ್ಯರ್ಥಿಗಳಿಗೆ ಸ್ವಂತ ವರ್ಚಸ್ಸಿಲ್ಲ: ಮಧು ಬಂಗಾರಪ್ಪ
    ಊರ್ಮನೆ ಸಮಾಚಾರ

    ಶ್ರೀರಾಮ ಈಗ ಬಿಜೆಪಿ ಪಕ್ಷದಲ್ಲಿಲ್ಲ, ಅಭ್ಯರ್ಥಿಗಳಿಗೆ ಸ್ವಂತ ವರ್ಚಸ್ಸಿಲ್ಲ: ಮಧು ಬಂಗಾರಪ್ಪ

    Updated:07/04/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುತ್ತೇವೆಂದು ಹೇಳಿಕೊಂಡು ಚುನಾವಣೆ ಎದುರಿಸುತ್ತಿದ್ದ ಬಿಜೆಪಿ ಪಕ್ಷವೀಗ ರಾಮಮಂದಿರವನ್ನು ಮರೆತುಬಿಟ್ಟಿದೆ. ರಾಮ ಈಗ ಬಿಜೆಪಿ ಪಕ್ಷದಲ್ಲಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.

    Click Here

    Call us

    Click Here

    ಅವರು ಮರವಂತೆ ಸಾಧನಾ ಸಭಾಭವನದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ರಾಮಮಂದಿರ ಕಟ್ಟುತ್ತೇನೆಂದವರು ಈಗ ಮರೆತಿರುವುದ್ಯಾಕೆ ಎಂದು ಪ್ರಶ್ನಿಸಿದ ಅವರು ಇತರ ಪಕ್ಷದವರ‍್ಯಾರೂ ಹಿಂದುಗಳಲ್ಲ ಎಂದು ಬಿಂಬಿಸುತ್ತಿದ್ದ ಬಿಜೆಪಿ ಹಿಂದುತ್ವವನ್ನು ಬಿಟ್ಟುಬಿಟ್ಟಿದೆ ಎಂದರು. ನಾವೆಲ್ಲ ಹಿಂದುಗಳೇ ಆದರೂ ಎಲ್ಲಾ ಧರ್ಮದವರೊಂದಿಗೆ ಸೌಹಾರ್ದಯುತವಾಗಿ ಬದುಕುತ್ತಿದ್ದೇವೆ. ಧರ್ಮದ ಹೆಸರಿದಲ್ಲಿ ದ್ವೇಷ ಬಿತ್ತುವ ಕೆಲಸ ಮಾಡಿಲ್ಲ ಎಂದರು.

    ಬಿಜೆಪಿ 4,500 ಕೋಟಿ ಉದ್ಯಮಿಗಳ ಸಾಲವನ್ನು ಮನ್ನ ಮಾಡಿದೆ. ಆದರೆ ಕುಮಾರಸ್ವಾಮಿ ಅವರು ಕರ್ನಾಟಕದ ರೈತರ ಸಾಲ ಮನ್ನ ಮಾಡಿದರೆ ಇದು ಪಾಪದ ಕೆಲಸ ಎಂದು ಪ್ರಧಾನಿ ಲೇವಡಿ ಮಾಡುತ್ತಾರೆ. ಅವರದ್ದು ಭಾರತೀಯ ಜನತಾ ಪಾರ್ಟಿಯೂ ಅಥವಾ ಬ್ಯುಸಿನೆಸ್ ಜನತಾ ಪಾರ್ಟಿಯೋ ಎಂದು ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದರು.

    ಮೋದಿಯವರ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಆದರೆ ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಅಭವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಓಟು ಕೇಳುತ್ತಿದ್ದಾರೆ. ಕೋಮು ಗಲಭೆಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದ ಬಿಜೆಪಿ ಈಗ ಕುಮಾರಸ್ವಾಮಿ ಸರಕಾರ ಬಂದ ಮೇಲೆ ಹೆದರುತ್ತಿದೆ ಎಂದರು.

    ಯಡಿಯೂರಪ್ಪ, ರಾಘವೇಂದ್ರ ಅವರು ಸಂಸದರಾದ ಬಳಿಕ ಎಷ್ಟು ಭಾರಿ ಕ್ಷೇತ್ರಕ್ಕೆ ಬಂದಿದ್ದಾರೆಂದು ಹೇಳಲಿ. ಕರಾವಳಿ, ಮಲೆನಾಡು ಭಾಗದ ಜನರ ಸಮಸ್ಯೆಗಳನ್ನು ಅವರು ಮರೆತಿದ್ದಾರೆ. ಮರಳು, ಮೀನುಗಾರಿಕೆಗೆ ಸೀಮೆಎಣ್ಣೆ, ಕಸ್ತೂರಿ ರಂಗನ್ ವರದಿ, ಅಡಿಕೆ, ಅಕ್ರಮ ಸಕ್ರಮ ಭೂಮಿ ಮೊದಲಾದವುಗಳ ಬಗೆಗೆ ಅವರು ಈವರೆಗೂ ಸ್ಪಂದಿಸಿಲ್ಲ. ತನ್ನನ್ನು ಸಂಸತ್ತಿಗೆ ಆರಿಸಿದರೆ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಮೊದಲು ಗಮನಹರಿಸುತ್ತೇನೆ. ಬಿಜೆಪಿ ವಿರುದ್ಧ ಅಲೆ ಕರಾವಳಿಯಲ್ಲಿಯೂ ಇದ್ದು, ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದರು.

    Click here

    Click here

    Click here

    Click Here

    Call us

    Call us

    ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಕೆ. ಗೋಪಾಲ ಪೂಜಾರಿ, ಮಂಜುನಾಥ ಭಂಡಾರಿ ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಸ್. ಮದನ್ ಕುಮಾರ್ ಉಪ್ಪುಂದ, ಪ್ರದೀಪ್‌ಕುಮಾರ್ ಶೆಟ್ಟಿ, ಗೌರಿ ದೇವಾಡಿಗ, ವಾಸುದೇವ ಯಡಿಯಾಳ, ಮಾಣಿಗೋಪಾಲ್, ನಾಗರಾಜ ಗಾಣಿಗ ಬಂಕೇಶ್ವರ್, ಮೋಹನ ಪೂಜಾರಿ, ವಾಸುದೇವ ಪೂಜಾರಿ, ಶೇಖರ ಪೂಜಾರಿ, ಜೆಡಿಎಸ್ ಮುಖಂಡರಾದ ಯು. ಸಂದೇಶ್ ಭಟ್, ರವಿ ಶೆಟ್ಟಿ ಮೊದಲಾದವರು ಇದ್ದರು.

    Video

     

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    three + eight =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.