ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ೨೦೧೯-೨೦ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಯುವಸ್ಪಂದನ ಮತ್ತು ರೋಟರಿ ಕ್ಲಬ್ ಕುಂದಾಪುರ ಇವರ ಸಹಯೋಗದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ ಮಾತನಾಡಿ ರಾಷ್ಟೀಯ ಸೇವಾ ಯೋಜನೆ ಧ್ಯೇಯ ಉದ್ದೇಶ ಹಾಗೂ ಸರ್ವತೋಮುಖ ಬೆಳವಣಿಗೆಯಲ್ಲಿ ಇದರ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೋಟರಿ ಕ್ಲಬ್ ಅಧ್ಯಕ್ಷರಾದ ಡಾ.ರಾಜಾರಾಮ ಶೆಟ್ಟಿ ಅವರು ಹಲ್ಲುಗಳ ಆರೋಗ್ಯದ ಕುರಿತು ಮಾಹಿತಿನೀಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಪ್ರೊ.ರಾಮಚಂದ್ರ ಯುವಸ್ಪಂದನ ಸಂಸ್ಥೆಯ ಅಧ್ಯಕ್ಷರಾದ ನರಸಿಂಹ ಗಾಣಿಗ , ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ರಾಮಚಂದ್ರ ಆಚಾರ‍್ಯ ಉಪಸ್ಥಿತರಿದ್ದರು.










