ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬಸ್ರೂರು ಶಾರದಾ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕುಸ್ತಿ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಬಿ. ಎನ್. ಶ್ರೇಯಸ್ 79 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗೆ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ತರಬೇತಿ ನೀಡಿದರು.










