Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಮಹೇಂದ್ರ ಭಟ್ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಡಾ. ಮಹೇಂದ್ರ ಭಟ್ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಬೆಂಗಳೂರಿನ ಖ್ಯಾತ ಜ್ಯೋತಿಷಿ ಡಾ. ಮಹೇಂದ್ರ ಭಟ್ ಅವರಿಗೆ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಜೆಸಿಐ ಬೈಂದೂರು ಸಿಟಿ ಆಯೋಜಿಸಿದ ಜೇಸಿ ಸಂಭ್ರಮ-2019ರ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಖ್ಯಾತ ಜ್ಯೋತಿಷಿ ಡಾ. ಮಹೇಂದ್ರ ಭಟ್:
    ಡಾ. ಮಹೇಂದ್ರ ಭಟ್ ಅವರು ಮೂಲತಃ ಬೈಂದೂರು ತಾಲೂಕಿನ ಯಡ್ತರೆ ರಾಹುತನಕಟ್ಟೆಯವರಾಗಿದ್ದು, ಬಾಲ್ಯದಿಂದಲೇ ಅಜ್ಜನಾದ ದಿ. ವಾಸುದೇವ ಭಟ್ ಅವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದ್ದರು. ಪಿಯುಸಿ ತನಕದ ಶಿಕ್ಷಣವನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಯೂ, ಪದವಿ ಶಿಕ್ಷಣವನ್ನು ಭಟ್ಕಳದ ಅಂಜುಮಾನ್ ಕಾಲೇಜಿನಲ್ಲಿಯೂ, ಎಂಬಿಎ ಪದವಿಯನ್ನು ಸಿಕ್ಕಿಂ ಮಣಿಪಾಲ್ ಒಪನ್ ಯುನಿವರ್ಸಿಟಿಯಲ್ಲಿಯೂ ಹಾಗೂ ಬೆಂಗಳೂರಿನ ಇಂದಿಯಾ ಪ್ರಿಯದರ್ಶಿನಿ ಕಾಲೇಜ್ ಆಫ್ ಲಾ ಇಲ್ಲಿ ಎಲ್‌ಎಲ್‌ಬಿ ಪದವಿಯನ್ನು ಪಡೆದಿದ್ದಾರೆ.

    ಜ್ಯೋತಿಷ್ಯಶಾಸ್ತ್ರದಲ್ಲಿ ಆಸಕ್ತರಾಗಿದ್ದ ಮಹೇಂದ್ರ ಭಟ್ ಅವರು ಜ್ಯೋತಿಷ್ಯದಲ್ಲಿ ಬಿ.ಎ ಪದವಿ ಪಡೆದಿರುವುದಲ್ಲದೇ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರದ ಕುರಿತಾಗಿಯೂ ಅಧ್ಯಯನ ನಡೆಸಿದ್ದಾರೆ. ಲಾಯಲ್ ಅಕಾಡೆಮಿ ಆಫ್ ಗ್ಲೋಬಲ್ ಪೀಸ್ ಸಂಸ್ಥೆಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿರುವ ಮಹೇಂದ್ರ ಭಟ್ ಅವರು ಬೆಂಗಳೂರಿನಲ್ಲಿ ಔದುಂಬರ ಜ್ಯೋತಿಷ್ಯಾಲಯದ ಮೂಲಕ ಧಾರ್ಮಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ.

    ಜೆಸಿಐ ಸಂಭ್ರಮದ ಸಂದರ್ಭ ಸಹಕಾರಿ ಕ್ಷೇತ್ರದ ಸಾಧನೆಗಾಗಿ ಎಸ್. ರಾಜು ಪೂಜಾರಿಗೂ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಜೇಸಿ ಸಂಭ್ರಮ-2019ರ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜೆಸಿಐ ಬೈಂದೂರು ಸಿಟಿ ಅಧ್ಯಕ್ಷ ಮಣಿಕಂಠ ಎಸ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಪ್ರಗತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಲಕ್ಷ್ಮೀಕಾಂತ್ ಬೆಸ್ಕೂರು, ಬೈಂದೂರು ರೋಟರಿ ಅಧ್ಯಕ್ಷ ಪ್ರಕಾಶ್ ಭಟ್, ಜೆಸಿಐ ವಲಯಾಧ್ಯಕ್ಷ ಅಬ್ದುಲ್ ಜಬ್ಬರ್ ಸಾಹೇಬ್, ಸಭಾಪತಿ ಸತೀಶ್ ಎಂ., ಜೇಸಿರೇಟ್ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು, ಸಂಯೋಜಕರಾದ ರಾಘವೇಂದ್ರ ಹೊಳ್ಳ, ಶ್ರೀಧರ ಆಚಾರ್ಯ, ಕಾರ್ಯದರ್ಶಿ ಎಚ್. ಸುಶಾಂತ್ ಬೈಂದೂರು, ಸಲಹೆಗಾರ ನರೇಂದ್ರ ಶೇಟ್, ಜೆಜೆಸಿ ಅಧ್ಯಕ್ಷ ಅಖಿಲೇಶ್ ಮೊದಲಾದವರು ಇದ್ದರು. ರಾಘವೇಂದ್ರ ಯಡ್ತರೆ ಹಾಗೂ ಭಾನುಮತಿ ಪ್ರಶಸ್ತಿ ಪುರಸ್ಕೃತರ ಪರಿಚಯ ವಾಚಿಸಿದರು. ಸುಬ್ರಹ್ಮಣ್ಯ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    ► ಜೆಸಿಐ ಬೈಂದೂರು ಸಿಟಿ ಜೇಸಿ ಸಂಭ್ರಮ-2019 – https://kundapraa.com/?p=33699 .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    17 − 13 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.