Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ವಾರಂಟೈನ್‌ನಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಡಳಿತ ವಿಫಲ: ಎಚ್ ಹರಿಪ್ರಸಾದ ಶೆಟ್ಟಿ ಆರೋಪ
    ಊರ್ಮನೆ ಸಮಾಚಾರ

    ಕ್ವಾರಂಟೈನ್‌ನಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಡಳಿತ ವಿಫಲ: ಎಚ್ ಹರಿಪ್ರಸಾದ ಶೆಟ್ಟಿ ಆರೋಪ

    Updated:15/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಹೊರರಾಜ್ಯಗಳಿಂದ ಬರುತ್ತಿರುವವರಿಗೆ ಸೂಕ್ತ ಮೂಲಭೂತ ಸೌಕರ್ಯ ಕಲ್ಪಿಸಿ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಹರಿಪ್ರಸಾದ ಶೆಟ್ಟಿ ಕಾನ್ಕಕ್ಕಿ ಆರೋಪಿಸಿದ್ದಾರೆ.

    Click Here

    Call us

    Click Here

    ಉಡುಪಿ ಜಿಲ್ಲೆಯಲ್ಲಿ ಹುಟ್ಟಿ ಬೆಳೆದು ಹೊರ ರಾಜ್ಯಗಳಲ್ಲಿ ದುಡಿದು ಜಿಲ್ಲೆಯ ಆರ್ಥಿಕ, ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಿಗೆ ಮಹತ್ತರ ಕೊಡುಗೆ ನೀಡುತ್ತಿದ್ದ ಜನರನ್ನು ಈಗ ತೃತೀಯ ದರ್ಜೆ ನಾಗರಿಕರಂತೆ ನಡೆಸಿಕೊಳ್ಳುತ್ತಿರುವುದು ಜಿಲ್ಲೆಗೆ ಕಪ್ಪುಚುಕ್ಕೆಯಾಗಿದೆ. ಜಿಲ್ಲೆಯ ಶಿರೂರು ಗಡಿಯಲ್ಲಿರುವ ತಪಾಸಣಾ ಕೇಂದ್ರದಿಂದ ಪ್ರಾರಂಭಿಸಿ ಕ್ಟಾರೆಂಟೈನ್ ತನಕದ ಎಲ್ಲಾ ಪ್ರಕ್ರಿಯೆಗಳು ಅವ್ಯವಸ್ಥಿತವಾಗಿದ್ದು ಬಹು ದೂರದಿಂದ ಬಂದವರನ್ನು ಚೆಕ್ ಪೊಸ್ಟ್ ನಲ್ಲಿ ಗಂಟೆಗಟ್ಟಲೆ ಕಾಯಿಸಲಾಗುತ್ತಿದೆ. ಸರಕಾರಿ ಕ್ವಾರಂಟೈನ್‌ನಲ್ಲಿ ಇರುವವರಿಗೆ ಸರಿಯಾದ ಶೌಚಾಲಯ ಸ್ನಾನಗ್ರಹಗಳಲ್ಲಿ ಸಮರ್ಪಕ ನೀರು ಮತ್ತು ವಿದ್ಯುತ್ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಕೂಡಾ ಇಲ್ಲ. ಕೆಲವೆಡೆ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ. ಬೆಳಗ್ಗಿನ ಉಪಹಾರ ಮದ್ಯಾಹ್ನದ ಊಟ ಮತ್ತು ರಾತ್ರಿಯ ಊಟ ಸರಿಯಾದ ಸಮಯಕ್ಕೆ ಸರಬರಾಜು ಆಗುತ್ತಿಲ್ಲ.

    ಜಿಲ್ಲಾಡಳಿತ ಈ ಕೂಡಲೇ ಗಮನಹರಿಸಿ ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಗುಣಮಟ್ಟದ ಊಟ ಮತ್ತು ಉಪಹಾರ ನೀಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯ ಮತ್ತು ಸ್ನಾನಗೃಹಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಹಲವು ಗಂಟೆಗಳ ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು. ಬಹು ಮುಖ್ಯವಾಗಿ ಸಾಮಾಜಿಕ ಅಂತರ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದವರು ಆಗ್ರಹಿಸಿದ್ದಾರೆ.

    ಜಿಲ್ಲೆಯ ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೇವಲ ಸಭೆ ನಡೆಸುವುದಕ್ಕೆ ಸೀಮಿತವಾಗಿದ್ದು ಕ್ಟಾರಂಟೈನ್ ಕೇಂದ್ರದ ಉಸ್ತುವಾರಿ ವಹಿಸಿಕೊಂಡಿರುವ ಕಿರಿಯ ಅಧಿಕಾರಿಗಳು ಹೈರಾಣಾಗಿದ್ದಾರೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ತಾನು ನಡೆದದ್ದೆ ದಾರಿ ಎನ್ನುವ ರೀತಿಯಲ್ಲಿ ಜಿಲ್ಲಾಡಳಿತ ಊಹಿಸಿದ್ದು ಇಷ್ಟೇಲ್ಲಾ ಅವಂತಾರಕ್ಕೆ ಕಾರಣ. ಇನ್ನಾದರೂ ವಾಸ್ತವಿಕ ಸಂಗತಿಗಳನ್ನು ಅರಿತು ಜಿಲ್ಲಾಡಳಿತ ಕೆಲಸ ಮಾಡಲಿ ಎಂದು ಎಚ್ ಹರಿಪ್ರಸಾದ ಶೆಟ್ಟಿ ಕಾನ್ಕಕ್ಕಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    3 + two =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.