Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಕೊರೋನಾ ಅಪ್‌ಡೇಟ್: ಶುಕ್ರವಾರ 11 ಪಾಸಿಟಿವ್. ಓರ್ವ ವ್ಯಕ್ತಿ ಸಾವು
    ಉಡುಪಿ ಜಿಲ್ಲೆ

    ಉಡುಪಿ ಕೊರೋನಾ ಅಪ್‌ಡೇಟ್: ಶುಕ್ರವಾರ 11 ಪಾಸಿಟಿವ್. ಓರ್ವ ವ್ಯಕ್ತಿ ಸಾವು

    Updated:19/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಜೂ.19ರ ಶುಕ್ರವಾರ ಒಟ್ಟು 11 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

    Click Here

    Call us

    Click Here

    ಜಿಲ್ಲೆಯಲ್ಲಿ ಎರಡನೇ ಸಾವು:
    ಮುಂಬೈನಿಂದ ತೆಕ್ಕಟ್ಟೆ ಭಾಗದ 54 ವರ್ಷ ಪ್ರಾಯದ ವ್ಯಕ್ತಿ ಮೃಪಪಟ್ಟಿದ್ದು, ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮುಂಬೈನಿಂದ ನಾಲ್ವರು ಜೂನ್ 18ರ ಮಧ್ಯಾಹ್ನ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಅವರೆಲ್ಲರಿಗೂ ಡಿಸ್ಟಿಕ್ ರಿಸಿವ್ ಸೆಂಟರಿನಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿತ್ತು. ಟೆಂಪ್ರೆಚರ್ ಹೆಚ್ಚಿಲ್ಲದೇ ಇದ್ದುದರಿಂದ ಅವರನ್ನು ಹೋಮ್ ಕ್ವಾರಂಟೈನಿಗೆ ಕಳುಹಿಸಲಾಗಿತ್ತು. ಆದರೆ ಸಂಜೆಯ ವೇಳೆಗೆ ಅವರಲ್ಲಿ ಓರ್ವರು ಮೃತಪಟ್ಟಿದ್ದರು. ಅವರ ಸ್ವ್ಯಾಬ್ ಪರೀಕ್ಷಿಸಿದಾಗ ಮೃತ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಅವರೊಂದಿಗಿದ್ದ, ಉಳಿದ ಮೂವರ ಸ್ವ್ಯಾಬ್ ತೆಗೆದು ಪರೀಕ್ಷೆಗೆ ಕಳುಹಿಸಿ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

    ಸದ್ಯ ಲಭ್ಯವಿರುವ ಮಾಹಿತಿಯಂತೆ ಮೃತ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಅರಶಿನ ಕಾಮಾಲೆ (ಜಾಂಡೀಸ್) ರೋಗದಿಂದ ಬಳಲುತ್ತಿದ್ದರು. ತನ್ನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಗಳು ಸಹಿತ ಜೂನ್ 18ರ ಮಧ್ಯಾಹ್ನದಂದು ಮುಂಬಯಿನಿಂದ ತೆಕ್ಕಟ್ಟೆಯ ತನ್ನ ನಿವಾಸಕ್ಕೆ ವಾಹನದಲ್ಲಿ ಆಗಮಿಸಿದ್ದರು ಎನ್ನಲಾಗಿದೆ.  ಮರಣೋತ್ತರ ಪರೀಕ್ಷೆಯ ಬಳಿಕ ನಿಖರ ಕಾರಣ ತಿಳಿದುಬರಲಿದೆ.

    ಮೃತದೇಹವನ್ನು ಮನೆಯಲ್ಲೇ ಇರಿಸಿದ್ದರು:
    ಮೃತ ವ್ಯಕ್ತಿಯ ಶವವನ್ನು ರಾತ್ರಿ ಪೂರ್ತಿ ಮನೆಯಲ್ಲೇ ಇರಿಸಲಾಗಿತ್ತು. ಕುಂಭಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶೋಭಾ ಇಲಾಖೆಯ ಗಮನಕ್ಕೆ ತಂದು ಬಳಿಕ ಈ ಮೃತದೇಹವನ್ನು ಇಂದು ಉಡುಪಿಗೆ ರವಾನಿಸಲಾಗಿದೆ.

    98 ಸಕ್ರಿಯ ಪ್ರಕರಣ ಬಾಕಿ:
    ಜಿಲ್ಲೆಯಲ್ಲಿ ಸದ್ಯ ಒಟ್ಟು 1050 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 950 ಮಂದಿ ಬಿಡುಗಡೆಯಾಗಿದ್ದು, 98 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

    Click here

    Click here

    Click here

    Click Here

    Call us

    Call us

    13,227 ಮಾದರಿ ಸಂಗ್ರಹ:
    ಈ ತನಕ ಒಟ್ಟು 13,227ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 11,946 ನೆಗೆಟಿವ್, 1050 ಪಾಸಿಟಿವ್ ಬಂದಿದ್ದು, 231 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 43 ನೆಗೆಟಿವ್, 11 ಪಾಸಿಟಿವ್ ಬಂದಿದೆ.

    ಇದನ್ನೂ ಓದಿ:
    ► ಕೊರೋನಾಗೆ 2ನೇ ಬಲಿ. ಮಹಾರಾಷ್ಟದಿಂದ ಬಂದಿದ್ದ ತೆಕ್ಕಟ್ಟೆ ಭಾಗದ ವ್ಯಕ್ತಿ ಸಾವು – https://kundapraa.com/?p=38790 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    twenty + seven =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.