Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಘನದ್ರವ ಸಂಪನ್ಮೂಲ ನಿರ್ವಹಣಾ ಘಟಕದ ಸಾಕ್ಷ್ಯಚಿತ್ರ ಬಿಡುಗಡೆ
    ಊರ್ಮನೆ ಸಮಾಚಾರ

    ಘನದ್ರವ ಸಂಪನ್ಮೂಲ ನಿರ್ವಹಣಾ ಘಟಕದ ಸಾಕ್ಷ್ಯಚಿತ್ರ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸ್ವಚ್ಛಭಾರತದ ಕನಸು ನನಸಾಗಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಸಮರ್ಪಕ ತ್ಯಾಜ್ಯ ನಿರ್ವಹಣೆ ನಡೆಯಬೇಕು. ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿರುವ ವೆಲ್ಲೂರು ಮಾದರಿಯ ಘನ-ದ್ರವ ಸಂಪನ್ಮೂಲ ನಿರ್ವಹಣೆ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಲ್ಪಡಬೇಕು ಎಂದು ವಂಡ್ಸೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉದಯಕುಮಾರ ಶೆಟ್ಟಿ ಹೇಳಿದರು.

    Click Here

    Call us

    Click Here

    ಕುಂದಾಪುರ ಮಿಡ್‌ಟೌನ್ ಮತ್ತು ಬೈಂದೂರು ರೋಟರಿ ಕ್ಲಬ್, ಉಪ್ಪುಂದ-ಬೈಂದೂರು ಲಯನ್ಸ್ ಕ್ಲಬ್ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸಹಯೋಗದಲ್ಲಿ ವಿಚಿತ್ರ ಕ್ರಿಯೇಶನ್ಸ್ ಹೊರತಂದಿರುವ ಘನದ್ರವ ಸಂಪನ್ಮೂಲ ನಿರ್ವಹಣಾ ಘಟಕದ ಸಾಕ್ಷ್ಯಚಿತ್ರವನ್ನು ಅವರು ಶನಿವಾರ ನಾಗೂರಿನ ಕೆಎಎಸ್ ಆಡಿಟೋರಿಯಮ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

    ತಮ್ಮ ನೇತೃತ್ವದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ಆರಂಭಿಸಿರುವ ಘನದ್ರವ ಸಂಪನ್ಮೂಲ ನಿರ್ವಹಣಾ ಘಟಕದ ಯಶೋಗಾಥೆಯನ್ನು ವಿವರಿಸಿದ ಉದಯಕುಮಾರ ಶೆಟ್ಟಿ ಅದು ಮೂರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಲಾಭದಾಯಕವಾಗಿ ನಡೆಯುತ್ತಿದೆ. ರಾಜ್ಯದ ಮಾದರಿ ಘಟಕ ಎಂಬ ಹೆಗ್ಗಳಿಕೆ ಪಡೆದು, ದೇಶದ ಗಮನ ಸೆಳೆದಿದೆ. ವಂಡ್ಸೆಯ ಜನರ ಸಹಭಾಗಿತ್ವ, ಘಟಕದ ಕಾರ್ಯಕರ್ತರ ನಿಸ್ಪೃಹ ದುಡಿಮೆ ಅದರ ಯಶಸ್ಸಿಗೆ ಕಾರಣ. ಇಚ್ಛಾಶಕ್ತಿ ಇದ್ದರೆ ಆ ಮಾದರಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳು ಅನುಸರಿಸಬಹುದು ಎಂದು ಅವರು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಮರವಂತೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಜನಾರ್ದನ, ವಿಚಿತ್ರ ಕ್ರಿಯೇಶನ್ಸ್ ತಂಡ ವಂಡ್ಸೆ ಘಟಕ ಕೇಂದ್ರಿತವಾಗಿ ನಿರ್ಮಿಸಿದ ಸಾಕ್ಷ್ಯಚಿತ್ರ ಹೆಚ್ಚು ಪ್ರಸಾರ ಪಡೆದು ಗ್ರಾಮೀಣ ಜನರಲ್ಲಿ ತ್ಯಾಜ್ಯ ನಿರ್ವಹಣೆಯತ್ತ ಒಲವು ಬೆಳೆಸಲಿ ಎಂದು ಆಶಿಸಿದರು.

    ಕುಂದಾಪುರ ಮಿಡ್‌ಟೌನ್ ರೋಟರಿ ಅಧ್ಯಕ್ಷ ನಳಿನ್‌ಕುಮಾರ ಶೆಟ್ಟಿ, ಬೈಂದೂರು ರೋಟರಿ ಅಧ್ಯಕ್ಷ ಯು. ಗೋಪಾಲ ಶೆಟ್ಟಿ, ಉಪ್ಪುಂದ-ಬೈಂದೂರು ಲಯನ್ಸ್ ಕ್ಲಬ್ ಅಧ್ಯಕ್ಷ ಜಯಶೀಲ ಶೆಟ್ಟಿ, ಕಾರ್ಯಕ್ರಮದ ಪ್ರಧಾನ ಪ್ರಾಯೋಜಕ ಕನಕ ಉದ್ಯಮ ಸಮೂಹದ ಮಾಲೀಕ ಜಗದೀಶ ಶೆಟ್ಟಿ ನಾವುಂದ ಮುಖ್ಯ ಅತಿಥಿಗಳಾಗಿದ್ದರು.

    Click here

    Click here

    Click here

    Click Here

    Call us

    Call us

    ವಿಚಿತ್ರ ಕ್ರಿಯೇಶನ್ಸ್ ತಂಡದ ಪ್ರಮುಖ ಪ್ರಜ್ವಲ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಸತೀಶ ಮೊಗೇರಿ ನಿರೂಪಿಸಿದರು. ವಿಚಿತ್ರ ಕ್ರಿಯೇಶನ್ಸ್ ತಂಡದ ಸದಸ್ಯರು ಇದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    eighteen + 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.