ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.27ರ ಗುರುವಾರ 209 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 50, ಉಡುಪಿ ತಾಲೂಕಿನ 106 ಹಾಗೂ ಕಾರ್ಕಳ ತಾಲೂಕಿನ 45 ಮಂದಿಗೆ ಪಾಸಿಟಿವ್ ಬಂದಿದೆ. 8 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.
ಒಟ್ಟು ಪ್ರಕರಣಗಳಲ್ಲಿ 79 ಸಿಂಥಮೇಟಿವ್ ಹಾಗೂ 130 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 114 ಪುರುಷರು, 95 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 78, ILI 62, ಸಾರಿ 3 ಪ್ರಕರಣವಿದ್ದು, 60 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 6 ಮಂದಿ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.
ಇಂದು 35 ಮಂದಿ ಆಸ್ಪತ್ರೆಯಿಂದ ಹಾಗೂ 179 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 72 ವರ್ಷದ ವೃದ್ಧ ಇಂದು ಮೃತಪಟ್ಟಿದ್ದಾರೆ.
708 ನೆಗೆಟಿವ್:
ಈ ತನಕ ಒಟ್ಟು 68787 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 57091 ನೆಗೆಟಿವ್, 10913 ಪಾಸಿಟಿವ್ ಬಂದಿದ್ದು, 783 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 708 ನೆಗೆಟಿವ್, 209 ಪಾಸಿಟಿವ್ ಬಂದಿದೆ.
2,623 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 10913 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 8197 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2623 ಸಕ್ರಿಯ ಪ್ರಕರಣಗಳಲ್ಲಿ 1103 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1520 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 93 ಮಂದಿ ಮೃತಪಟ್ಟಿದ್ದಾರೆ.
















