ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.31ರ ಸೋಮವಟರ 83 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 35, ಉಡುಪಿ ತಾಲೂಕಿನ 28 ಹಾಗೂ ಕಾರ್ಕಳ ತಾಲೂಕಿನ 18 ಮಂದಿಗೆ ಪಾಸಿಟಿವ್ ಬಂದಿದೆ. 2 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.
ಒಟ್ಟು ಪ್ರಕರಣಗಳಲ್ಲಿ 30 ಸಿಂಥಮೇಟಿವ್ ಹಾಗೂ 53 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 21, ILI 32, ಸಾರಿ 3 ಪ್ರಕರಣವಿದ್ದು, 27 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ.
ಇಂದು 81 ಮಂದಿ ಆಸ್ಪತ್ರೆಯಿಂದ ಹಾಗೂ 222 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 43 & 40 ವರ್ಷದ ವೃದ್ಧ ಇಂದು ಮೃತಪಟ್ಟಿದ್ದಾರೆ.
2,398 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 11596 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 9101 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2398 ಸಕ್ರಿಯ ಪ್ರಕರಣಗಳಲ್ಲಿ 1125 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1273 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 97 ಮಂದಿ ಮೃತಪಟ್ಟಿದ್ದಾರೆ.










