Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ, ಮರವಂತೆ, ಕಿರಿಮಂಜೇಶ್ವರ ಮೀನುಗಾರಿಕಾ ಬಂದರಿಗೆ ಸಚಿವ ಕೋಟ ಭೇಟಿ
    ಊರ್ಮನೆ ಸಮಾಚಾರ

    ಗಂಗೊಳ್ಳಿ, ಮರವಂತೆ, ಕಿರಿಮಂಜೇಶ್ವರ ಮೀನುಗಾರಿಕಾ ಬಂದರಿಗೆ ಸಚಿವ ಕೋಟ ಭೇಟಿ

    Updated:06/09/2020No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಮೀನುಗಾರಿಕೆ ಇಲಾಖೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗಂಗೊಳ್ಳಿ, ಮರವಂತೆ ಹಾಗೂ ಕೊಡೇರಿ ಮೀನುಗಾರಿಕಾ ಬಂದರಿಗೆ ಶನಿವಾರ ಭೇಟಿ ನೀಡಿದರು.

    Click Here

    Call us

    Click Here

    ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕುಸಿದು ಬಿದ್ದ ಜೆಟ್ಟಿಯನ್ನು ಮತ್ತು ಬ್ರೇಕ್ ವಾಟರ್ ತಡೆಗೋಡೆಯನ್ನು ಪರಿಶೀಲಿಸಿದ ಸಚಿವರು, ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸ್ಥಳೀಯ ಮೀನುಗಾರ ಮುಖಂಡರ ಸಲಹೆ, ಸೂಚನೆ, ಅಭಿಪ್ರಾಯವನ್ನು ಆಲಿಸಿದರು. 102 ಕೋಟಿ ರೂ. ವೆಚ್ಚದ ಬ್ರೇಕ್ ವಾಟರ್‌ನ ತಡೆಗೋಡೆ ಕುಸಿಯುತ್ತಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದಷ್ಟು ಶೀಘ್ರ ತಡೆಗೋಡೆ ದುರಸ್ಥಿಗೆ ಕ್ರಮಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಬಳಿಕ ಮಾತನಾಡಿದ ಅವರು, ಕುಸಿದು ಬಿದ್ದ ಜೆಟ್ಟಿ ಪುನರ್ ನಿರ್ಮಾಣಕ್ಕಾಗಿ ರಾಜ್ಯ ಸರಕಾರ 12 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಕಾಮಗಾರಿ ಪ್ರಾರಂಭಿಸಲು 4 ಕೋಟಿ ರೂ. ಬಿಡುಗಡೆಗೆ ಕ್ರಮಕೈಗೊಳ್ಳಲಾಗಿದೆ ಅಲ್ಲದೆ ನೂತನ ಹರಾಜು ಪ್ರಾಂಗಣ ನಿರ್ಮಾಣಕ್ಕೆ 1.30 ಕೋಟಿ ರೂ. ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಜೆಟ್ಟಿ ಪುನರ್ ನಿರ್ಮಾಣ ಮತ್ತು ಹರಾಜು ಪ್ರಾಂಗಣ ನಿರ್ಮಾಣದ ನೀಲನಕಾಶೆ ಮತ್ತು ಸವಿವರವನ್ನು ಬಂದರು ವಠಾರದಲ್ಲಿ ಸಾರ್ವಜನಿಕ ಮಾಹಿತಿಗಾಗಿ ಪ್ರಕಟಿಸಬೇಕು. ಕಾಮಗಾರಿಯ ಗುಣಮಟ್ಟವನ್ನು ಕಾಲಕಾಲಕ್ಕೆ ಪರಿಶೀಲಿಸಿ ಯಾವುದೇ ಲೋಪದೋಷ ಬಾರದಂತೆ ಕಾಮಗಾರಿ ನಿರ್ವಹಿಸಬೇಕೆಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಳಿವೆ ಪ್ರದೇಶ ಮತ್ತು ಜೆಟ್ಟಿ ಪ್ರದೇಶದಲ್ಲಿ ಹೂಳೆತ್ತಲು ಅನುದಾನ ಬಿಡುಗಡೆಗೆ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.

    ಮರವಂತೆ ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮೀನುಗಾರರ ಪರವಾಗಿ ಕೃತಜ್ಞತೆಗಳು. ಎರಡನೇ ಹಂತದ ಕಾಮಗಾರಿಯ ಯೋಜನಾ ವರದಿ ಸಿದ್ಧವಾಗಿ, ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆಗಳು ಮುಗಿದು, ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.

    ಕೊಡೇರಿ ಮೀನುಗಾರಿಕಾ ಜೆಟ್ಟಿ ಮತ್ತು ಉಪ್ಪುಂದ ನಾಡದೋಣಿ ತಂಗುದಾಣದ ಕಿರು ಜಟ್ಟಿಗಳ ವಿಸ್ತರಣೆ ಮಾಡಿ ಮೂಲಭೂತ ಸೌಕರ್ಯ, ವಿದ್ಯುತ್ ದೀಪ, ಕೊಂಡಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ಪೂರಕವಾಗಿ 4.5 ಕೋಟಿ ರೂಪಾಯಿ ಪ್ರಸ್ಥಾವನೆ ಹಣಕಾಸು ಇಲಾಖೆಯಲ್ಲಿ ಇದ್ದು, ವಾರಾಂತ್ಯದಲ್ಲಿ ಮಂಜುರಾತಿ ಪಡೆದು ಮೀನುಗಾರರಿಗೆ ಸೌಕರ್ಯ ಒದಗಿಸಲಾಗುವುದು ಎಂದರು.

    Click here

    Click here

    Click here

    Click Here

    Call us

    Call us

    ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ, ಮೀನುಗಾರಿಕೆ ಇಲಾಖೆ ಜಿಲ್ಲಾ ಉಪನಿರ್ದೇಶಕ ಗಣೇಶ ಕೆ., ಬಂದರು ಮತ್ತು ಮೀನುಗಾರಿಕೆ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಮಂಚೇಗೌಡ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯಕುಮಾರ್, ಜ್ಯೂನಿಯರ್ ಇಂಜಿನಿಯರ್ ವಿಜಯ ಶೆಟ್ಟಿ, ಗಂಗೊಳ್ಳಿ ಮೀನುಗಾರಿಕಾ ಇಲಾಖೆಯ ಗೋಪಾಲಕೃಷ್ಣ, ದ.ಕ ಮತ್ತು ಉಡುಪಿ ಮೀನುಗಾರ ಫೆಡರೇಶನ್ ಅಧ್ಯಕ್ಷ ಯಶಪಾಲ ಸುವರ್ಣ, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಕರಣ್ ಪೂಜಾರಿ, ಬಿಜೆಪಿ ಉಡುಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಬಿಜೆಪಿ ಮುಖಂಡರಾದ ಬಿ.ಸದಾನಂದ ಶೆಣೈ, ಉಮಾನಾಥ ದೇವಾಡಿಗ, ರಾಮಪ್ಪ ಖಾರ್ವಿ, ಮಹೇಶ ಪೂಜಾರಿ ಕುಂದಾಪುರ, ಹರೀಶ ಮೇಸ್ತ, ಮೀನುಗಾರ ಮುಖಂಡರಾದ ಮಂಜು ಬಿಲ್ಲವ, ರಮೇಶ ಕುಂದರ್, ವಾಸುದೇವ ಶಿಪಾ, ರಾಜೇಂದ್ರ ಸುವರ್ಣ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯರು, ಬಿಜೆಪಿ ಮುಖಂಡರು, ಮೀನುಗಾರ ಮುಖಂಡರು, ಮೀನುಗಾರರು ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eleven + ten =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.