Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ ಬಿಜೆಪಿ ಧುರೀಣ ಗಣೇಶ ಪೂಜಾರಿ ಮತ್ತು ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ
    ಊರ್ಮನೆ ಸಮಾಚಾರ

    ಮರವಂತೆ ಬಿಜೆಪಿ ಧುರೀಣ ಗಣೇಶ ಪೂಜಾರಿ ಮತ್ತು ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

    Updated:03/12/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕರಾವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರ ಮನಸ್ಸಿನಲ್ಲಿ ಭಾರತೀಯ ಜನತಾ ಪಕ್ಷ ಭಾವನಾತ್ಮಕ ವಿಚಾರಗಳನ್ನು ಮತ್ತು ಸುಳ್ಳುಗಳನ್ನು ತುಂಬಿ ತನ್ನತ್ತ ಸೆಳೆದಿದೆ. ಇಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲು ಇದು ಪ್ರಮುಖ ಕಾರಣ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ ಕೊಡವೂರು ಹೇಳಿದರು.

    Click Here

    Call us

    Click Here

    ಗುರುವಾರ ಮರವಂತೆಯಲ್ಲಿ ನಡೆದ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಜಿಲ್ಲೆಗಳಲ್ಲಿನ ಗೇಣಿದಾರರ ಮತ್ತು ಮೀನುಗಾರರ ಅಭಿವೃದ್ಧಿಗೆ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಕ್ರಾಂತಿಕಾರಕ ಕ್ರಮಗಳನ್ನು ಜಾರಿಗೊಳಿಸಿದ್ದುವು. ಈಚಿನ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ, ಬಡವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಅನುಷ್ಠಾನಿಸಿತು. ಆದರೆ ಅವು ಇಲ್ಲಿ ಕಾಂಗ್ರೆಸ್‌ಗೆ ಮತ ತಂದುಕೊಡುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪಕ್ಷದ ಕಾರ್ಯಕರ್ತರು ಜನರೊಂದಿಗೆ ಬೆರೆತು ಅವರಿಗೆ ವಾಸ್ತವಾಂಶಗಳನ್ನು ಮನದಟ್ಟು ಮಾಡಬೇಕು ಎಂದು ಅವರು ಹೇಳಿದರು.

    ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಈ ತಿಂಗಳಿನಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕ್ರಿಯಾಶೀಲ ಮತ್ತು ಸಮರ್ಥ ಕಾರ್ಯಕರ್ತರನ್ನು ಅಭ್ಯರ್ಥಿಗಳಾಗಿ ನಿಲ್ಲಿಸಲಾಗುವುದು. ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಅವರ ಯಶಸ್ಸಿಗೆ ಒಗ್ಗಟ್ಟಿನಿಂದ ದುಡಿಯಬೇಕು ಎಂದು ಹೇಳಿದರು.

    ಕಾಂಗ್ರೆಸ್ ಸೇರಿದ ಮರವಂತೆ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ, ಬಿಜೆಪಿ ಧುರೀಣ ಗಣೇಶ ಪೂಜಾರಿ ಮತ್ತು ಬೆಂಬಲಿಗರನ್ನು ಸ್ವಾಗತಿಸಲಾಯಿತು. ನಾಡ ಗ್ರಾಮ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ಅರವಿಂದ ಪೂಜಾರಿ ಅವರಿಗೆ ನೇಮಕಾತಿ ಪತ್ರ ನೀಡಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್‌ಕುಮಾರ್, ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಪಕ್ಷದ ಪ್ರಮುಖರಾದ ಗೌರಿ ದೇವಾಡಿಗ, ರಘುರಾಮ ಶೆಟ್ಟಿ, ರಮೇಶ ಗಾಣಿಗ, ಜಗದೀಶ ದೇವಾಡಿಗ, ಶೇಖರ ಪೂಜಾರಿ, ಎಂ. ವಿನಾಯಕ ರಾವ್, ಎಂ. ಅಣ್ಣಪ್ಪ ಬಿಲ್ಲವ ಇದ್ದರು.

    ಇದನ್ನೂ ಓದಿ:
    ► ಕುಂದಾಪುರ: ಹಿರಿಯ ಬಿಜೆಪಿ ಮುಖಂಡೆ ಜಾನಕಿ ಬಿಲ್ಲವ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ – https://kundapraa.com/?p=42985 .

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    15 − six =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.