ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಇಲ್ಲಿನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಶಾಖೆಯ ಆಶ್ರಯದಲ್ಲಿ ಜಿ.ನಾರಾಯಣ ಆಚಾರ್ಯ ಅವರ ನಿವಾಸದಲ್ಲಿ ‘ಜನರ ಬಳಿಗೆ ಎಸ್‌ಸಿಡಿಸಿಸಿ ಬ್ಯಾಂಕ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಚಾಲನೆ ನೀಡಿ ಮಾತನಾಡಿದ ಎಸ್‌ಸಿಡಿಸಿಸಿ ಬ್ಯಾಂಕಿನ ಗಂಗೊಳ್ಳಿ ಶಾಖಾ ಪ್ರಬಂಧಕ ರಾಘವೇಂದ್ರ ಉಡುಪ, ಜನರ ಬಳಿ ತೆರಳಿ ಬ್ಯಾಂಕಿನ ಅಗತ್ಯತೆಗಳನ್ನು ತಿಳಿಸಿ ಜನರಲ್ಲಿ ಆರ್ಥಿಕ ಶಕ್ತಿಯ ವಿಶ್ವಾಸವನ್ನು ಮೂಡಿಸುವ ಉದ್ದೇಶದಿಂದ, ಆರ್ಥಿಕ ಸಂಕಷ್ಟದ ಕಾಲದಲ್ಲಿ ಜನರಿಗೆ ಆರ್ಥಿಕ ಚೈತನ್ಯ ತುಂಬುವ ನಿಟ್ಟಿನಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಉಳಿತಾಯ ಖಾತೆ, ಠೇವಣಿ ಸಂಗ್ರಹ, ಸಾಲ ನೀಡಿಕೆ ಮುಂತಾದ ವಿಚಾರಗಳನ್ನು ಜನರಿಗೆ ತಲುಪಿಸುವ ‘ಜನರ ಬಳಿಗೆ ಎಸ್‌ಸಿಡಿಸಿಸಿ ಬ್ಯಾಂಕ್’ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಬ್ಯಾಂಕಿನ ಆಫೀಸರ ಗಣೇಶ ಭಟ್, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ಪುರೋಹಿತ ಜಿ.ರಾಘವೇಂದ್ರ ಆಚಾರ್ಯ, ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತಿತರರು ಉಪಸ್ಥಿತರಿದ್ದರು.










