Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಜ್ಜಾಡಿ: ಶತಮಾನೋತ್ಸವ ಭವನ, ರಂಗ ಮಂದಿರ ಉದ್ಘಾಟನೆ
    ಊರ್ಮನೆ ಸಮಾಚಾರ

    ಗುಜ್ಜಾಡಿ: ಶತಮಾನೋತ್ಸವ ಭವನ, ರಂಗ ಮಂದಿರ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಶತಮಾನೋತ್ಸವದ ಸವಿನೆನಪಿಗಾಗಿ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶತಮಾನೋತ್ಸವ ಭವನ ಹಾಗೂ ರಂಗ ಮಂದಿರದ ಉದ್ಘಾಟನೆ ನಡೆಯಿತು.

    Click Here

    Call us

    Click Here

    ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟಿ, ಸರಕಾರ ಶಾಲೆಗಳಲ್ಲಿ ನೂತನ ಕೊಠಡಿಗಳನ್ನು ನಿರ್ಮಿಸಿದರಷ್ಟೇ ಸಾಲದು. ಮಕ್ಕಳ ದಾಖಲಾತಿ ಕೂಡ ಪ್ರತಿವರ್ಷ ಹೆಚ್ಚಳವಾಗಬೇಕು. ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾರಣವಾಗಬೇಕು. ಶತಮಾನೋತ್ಸವನ್ನು ಆಚರಿಸಿಕೊಳ್ಳುತ್ತಿರುವ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ತಾಲೂಕಿನಲ್ಲೇ ಅತ್ಯುತ್ತಮವಾದ ಶಾಲೆಯಾಗಿದ್ದು, ಬೈಂದೂರು ವಲಯದಲ್ಲಿ ಅತಿ ಹೆಚ್ಚು ಮಕ್ಕಳ ದಾಖಲಾತಿ ಹೊಂದಿರುವ ಎರಡನೇ ದೊಡ್ಡ ಸರಕಾರಿ ಶಾಲೆಯಾಗಿರುವುದು ಪ್ರಶಂಸನಾರ್ಹವಾದುದು ಎಂದು ಹೇಳಿದರು.

    ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ದಾನಿಗಳ ಸಹಾಯದಿಂದ ಸುಸಜ್ಜಿತವಾದ ಶಾಲಾ ಕೊಠಡಿ, ವಿಸ್ತಾರದ ರಂಗ ಮಂದಿರ, ಸ್ಮಾರ್ಟ್ ಕ್ಲಾಸ್, ಶೌಚಾಲಯ, ಆವರಣ ಗೋಡೆ, ಸಭಾಂಗಣ ನವೀಕರಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದ್ದು, ಎಲ್ಲರ ಸಹಕಾರದಿಂದ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹೇಳಿದರು.

    ನೂತನವಾಗಿ ನಿರ್ಮಾಣಗೊಂಡ ರಂಗ ಮಂದಿರವನ್ನು ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ಟಿ ಪೂಜಾರಿ ಗುಜ್ಜಾಡಿ ಉದ್ಘಾಟಿಸಿದರು.

    ಕುಂದಾಪುರ ತಾ. ಪಂ ಅಧ್ಯಕ್ಷೆ ಇಂದಿರಾ ಶೆಟ್ಟಿ, ಜಿ.ಪಂ ಸದಸ್ಯೆ ಶೋಭ ಜಿ. ಪುತ್ರನ್, ತಾ. ಪಂ ಸದಸ್ಯರಾದ ನಾರಾಯಣ ಕೆ. ಗುಜ್ಜಾಡಿ, ರಾಜು ದೇವಾಡಿಗ ತ್ರಾಸಿ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ ಮುಂದಿನಮನಿ, ಉದ್ಯಮಿಗಳಾದ ಶೇಷಯ್ಯ ಕೊತ್ವಾಲ್, ಗಣಪತಿ ಮೇಸ್ತ ಗುಜ್ಜಾಡಿ, ವಸಂತ ಮೇಸ್ತ ಗುಜ್ಜಾಡಿ, ವಿನೋದ್ ಭಂಡಾರಿ ಶಿವಮೊಗ್ಗ, ಪತ್ರಕರ್ತ ಬಿ.ರಾಘವೇಂದ್ರ ಪೈ ಗಂಗೊಳ್ಳಿ, ಎಸ್‌ಡಿಎಂಸಿ ನಿಕಟಪೂರ್ವ ಅಧ್ಯಕ್ಷ ರಾಮನಾಥ ಚಿತ್ತಾಲ್, ಯಶೋಧಾ ಎನ್.ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಇಂದಿರಾ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ಎಂ. ಪೂಜಾರಿ, ನಿವೃತ್ತ ಮುಖ್ಯೋಪಾಧ್ಯಾಯ ಜಯರಾಮ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ರಾಜೀವ್ ಶ್ರೀಯಾನ್ ಸ್ವಾಗತಿಸಿದರು. ಅಧ್ಯಕ್ಷ ಉಮೇಶ ಎಲ್.ಮೇಸ್ತ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಆನಂದ ಜಿ. ವರದಿ ವಾಚಿಸಿದರು. ಶಾಲಾ ಶಿಕ್ಷಕಿ ಆಶಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಮಾಧವಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    twelve − 7 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.