ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ ನಡೆಯಿತು.
ಅತಿಥಿಯಾಗಿ ಡಾ. ಅತುಲ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ ಅದಕ್ಕಿಂತ ಹೆಚ್ಚಿನ ಜವಾಬ್ದಾರಿ ಹೆತ್ತವರ ಮೇಲಿದೆ ಎಂದು ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುವ ಎಲ್ಲಾ ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತಾಗಿ ವಿದ್ಯಾರ್ಥಿಗಳ ಪೋಷಕರಿಗೆ ಸವಿಸ್ತಾರವಾಗಿ ತಿಳಿಸಿದರು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಕೆ. ವೆಂಕಟರಮಣ ಹೆಗ್ಡೆ ಸಂಘದ ಧ್ಯೇಯೋದ್ದೇಶ ಹಾಗೂ ಕಾರ್ಯಕ್ರಮಗಳ ಕುರಿತು ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ನೂತನ ಸದಸ್ಯರಾಗಿ ಆಯ್ಕೆಯಾದ ಡಾ. ಅತುಲ್ ಕುಮಾರ್ ಶೆಟ್ಟಿಯವರನ್ನು ಗೌರವಿಸಲಾಯಿತು. ರಕ್ಷಕ-ಶಿಕ್ಷಕ ಸಂಘದ ಜೊತೆ ಕಾರ್ಯದರ್ಶಿಯಾದ ಫಾತಿಮಾ ಲೋಬೊ ಉಪಸ್ಥಿತರಿದ್ದರು
ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಾಕರ್ ಪಾರಂಪಳ್ಳಿ ಸ್ವಾಗತಿಸಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಇಂಗ್ಲೀಷ್ ಉಪನ್ಯಾಸಕರಾದ ರಸಿಕ್ ಕುಮಾರ್ ಶೆಟ್ಟಿ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿಯಾದ ಕು. ಸೌಮ್ಯ ಎನ್. ಕುಂದರ್ ಅತಿಥಿಗಳನ್ನು ಪರಿಚಯಿಸಿ, ನಿರೂಪಿಸಿದರು.















