Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಾರ್ಕಿಂಗ್ ಜಾಗ ಅತಿಕ್ರಮಣವಾಗಿದ್ದಲ್ಲಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಿ: ಡಿಸಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಪಾರ್ಕಿಂಗ್ ಜಾಗ ಅತಿಕ್ರಮಣವಾಗಿದ್ದಲ್ಲಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಿ: ಡಿಸಿ ಜಿ. ಜಗದೀಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ನಗರದ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವಾಗ ಪಾರ್ಕಿಂಗ್‌ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಪಾರ್ಕಿಂಗ್‌ಗೆ ಜಾಗ ಬಿಡದೇ ಆ ಸ್ಥಳವನ್ನು ಅತಿಕ್ರಮಿಸಿರುವವರ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.

    Click Here

    Call us

    Click Here

    ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಉಡುಪಿ ನಗರದಲ್ಲಿ ಪಾರ್ಕಿಂಗ್ ಸಮಸ್ಯೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಮತ್ತು ವಾಹನಗಳ ಪಾರ್ಕಿಂಗ್‌ಗೆ ತೀವ್ರ ಸಮಸ್ಯೆಯಾಗುತ್ತಿದ್ದು, ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಛಯಗಳನ್ನು ನಿರ್ಮಿಸುವಾಗ, ಪಾರ್ಕಿಂಗ್‌ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಆ ಸ್ಥಳವನ್ನು ಅತಿಕ್ರಮಿಸಿ, ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಿಸಿರುವ ಸಂಬಂದಪಟ್ಟ ಮಾಲೀಕರಿಗೆ 15 ದಿನದಲ್ಲಿ ತೆರವುಗೊಳಿಸುವ ಕುರಿತು ನೊಟೀಸ್ ನೀಡಿ, ಅತಿಕ್ರಮಣ ತೆರವು ಆಗದಿದಲ್ಲಿ ಸಂಬಂದಪಟ್ಟ ವಾಣಿಜ್ಯ ಸಂಸ್ಥೆಯ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವುದು ಸೇರಿದಂತೆ ಅತಿಕ್ರಮಣ ಪ್ರದೇಶವನ್ನು ನಗರಸಭೆ ವತಿಯಿಂದ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.

    ನಗರ ಪ್ರದೇಶದಲ್ಲಿನ ಪಾಟ್ ಹೋಲ್‌ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಹಂಪ್ಸ್ಗಳನ್ನು ನಿರ್ಮಿಸಿ, ಹಂಪ್ಸ್ಳನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ಮಿಸುವಂತೆ ಸೂಚನೆ ನೀಡಿದರು.

    ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್‌ಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಸೂಚನಾ ಫಲಕಗಳನ್ನು ಅಳವಡಿಸಿ, ಪಾಟ್ ಹೋಲ್‌ಗಳನ್ನು ಮುಚ್ಚಲು ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಂಡು ಅಪಘಾತಗಳು ಸಂಭವಿಸದಂತೆ ಎಚ್ಚರವಹಿಸಿ, ಕೋಟ ಬಳಿಯ ಅಂಡರ್ ಪಾಸ್‌ನ್ನು ಅಗಲಗೊಳಿಸಿ ಏಕಕಾಲದಲ್ಲಿ ಎರಡು ವಾಹನಗಳು ಸಂಚರಿಸಲು ಸಾಧ್ಯವಾಗುವಂತೆ ಅಗಲಗೊಳಿಸುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಂಜಿನಿಯರ್‌ಗಳಿಗೆ ಸೂಚಿಸಿದರು.

    Click here

    Click here

    Click here

    Call us

    Call us

    18 ವರ್ಷಕ್ಕಿಂತ ಕೆಳಗಿನ ಮಕ್ಕಳು ರಸ್ತೆ ಸುರಕ್ಷತಾ ನಿಯಮಗಳನ್ನು ಮೀರಿ, ವಾಹನಗಳನ್ನು ಚಲಾಯಿಸಿ ಅಪಘಾತಳಿಗೆ ಕಾರಣವಾಗುತ್ತಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ, ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದಲ್ಲಿ ಪೋಷಕರೂ ಸಹ ಜೈಲು ಶಿಕ್ಷೆಗೆ ಒಳಪಡುತ್ತಾರೆ ಎಂಬ ಬಗ್ಗೆ ಎಚ್ಚರ ಮೂಡಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

    ಕಲ್ಸಂಕ ಬಳಿ ಕೃಷ್ಣಮಠಕ್ಕೆ ಪ್ರವೇಶಿಸುವ ಸ್ಥಳದಲ್ಲಿನ ಸೇತುವೆಯನ್ನು ಅಗಲಗೊಳಿಸಿದಲ್ಲಿ ಅಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯಂತೆ, ಸಂಬಂದಿಸಿದ ಇಲಾಖೆಗಳು ಕ್ರಿಯಾ ಯೋಜನೆಯ ಚಟುವಟಿಕೆಗಳು ಮತ್ತು ಅವುಗಳಿಗೆ ತಗಲುವ ಅಂದಾಜು ವೆಚ್ಚದ ವಿವರಗಳನ್ನು ಶೀಘ್ರದಲ್ಲಿ ಸಲ್ಲಿಸುವಂತೆ ಡಿಸಿ ಸೂಚಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ್ ಚಂದ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಪೌರಾಯುಕ್ತ ಉದಯ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025

    ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ
    • ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ
    • ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ
    • ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್
    • ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಲಿ: ಡಾ. ಕೃಷ್ಣ ಕಾಂಚನ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.