Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅನಗತ್ಯ ವಾಹನ ಸಂಚಾರ ನಿಯಂತ್ರಣಕ್ಕೆ ಜಿಲ್ಲೆಯ ಗಡಿಯಲ್ಲಿ ಚೆಕ್‌ಪೋಸ್ಟ್
    ಉಡುಪಿ ಜಿಲ್ಲೆ

    ಅನಗತ್ಯ ವಾಹನ ಸಂಚಾರ ನಿಯಂತ್ರಣಕ್ಕೆ ಜಿಲ್ಲೆಯ ಗಡಿಯಲ್ಲಿ ಚೆಕ್‌ಪೋಸ್ಟ್

    Updated:28/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್ 2 ನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಏಪ್ರಿಲ್ 27 ರಿಂದ ಮೇ 12 ರ ವರೆಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್ ತೆರೆದು ಅನಗತ್ಯ ವಾಹನ ಸಂಚಾರವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ.

    Click Here

    Call us

    Click Here

    ಗಡಿಪ್ರದೇಶಗಳಲ್ಲಿ ಚೆಕ್‌ಪೋಸ್ಟ್ ಳನ್ನು ತೆರೆದು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ, ವೈದ್ಯಕೀಯ ಕಾರಣಗಳಿಂದ ಮತ್ತು ಸೂಕ್ತ ಪಾಸ್ಗಳನ್ನು ಪಡೆದು ಬರುವವರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಿ ಪ್ರವೇಶಿಸಲು ಅವಕಾಶ ನೀಡಲಾಗಿದೆ

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕೋವಿಡ್ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ 10 ವರೆಗೆ ಅವಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರ
    ಕಾಯ್ದುಕೊಳ್ಳಲು ಎಲ್ಲಾ ಅಂಗಡಿಗಳ ಮುಂದೆ ಮಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಈ ಕುರಿತಂತೆ ಅಧಿಕಾರಿಗಳು ಪರಿಶೀಲಿಸಬೇಕು. ಬೆಳಗ್ಗೆ 10 ಗಂಟೆಯ ನಂತರವೂ ಅನಾವಶ್ಯಕವಾಗಿ ತೆರೆದಿರುವ ಅಂಗಡಿಗಳ ಲೈಸೆನ್ಸ್ಗಳನ್ನು ಕೋವಿಡ್ ಮುಗಿಯುವವೆರೆಗೂ ಅಮಾನತು ಮಾಡಿ ಎಂದು ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸೂಕ್ತ ಅನುಮತಿಯೊಂದಿಗೆ ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲು ಅವಕಾಶ ನೀಡಲಾಗುವುದು ಹಾಗೂ ರಕ್ತದಾನ ಮಾಡಲು ತೆರಳುವವರಿಗೆ ಸಂಚರಿಸಲು ಅವಕಾಶ ನೀಡಲಾಗುವುದು ಎಂದರು.

    ಜಿಲ್ಲೆಯಲ್ಲಿ ಹೋಂ ಐಸೋಲೇಷನ್ ಮತ್ತು ಹೋಂ ಕ್ವಾರಂಟೈನ್ ನಲ್ಲಿರುವವನ್ನು ನಿಯಮಿತವಾಗಿ ಭೇಟಿ ನೀಡಿ ವರದಿ ನೀಡಬೇಕು. ಇದರಲ್ಲಿ 100% ಸಾಧನೆ ಆಗಬೇಕು. ಪಾಸಿಟಿವ್ ಇದ್ದು, ಹೋಂ ಐಸೋಲೇಷನ್ ನಿಂದ ಹೊರಬರುವವರು ಮತ್ತು ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಂಚರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದರು.

    Click here

    Click here

    Click here

    Click Here

    Call us

    Call us

    ಕೋವಿಡ್ ಪ್ರಕರಣಗಳು ಕಂಡು ಬಂದಲ್ಲಿ ಕಂಟೈನ್ಮೆಂಟ್ ಝೋನ್ ಮತ್ತು ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಡಿಸಿ, ಜಿಲ್ಲೆಯಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಿ, ಸೋಂಕಿತರನ್ನು ಬೇಗ ಪತ್ತೆಹಚ್ಚಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಜಿಲ್ಲಾಡಳಿತದಿಂದ ರೆಫರ್ ಮಾಡುವ ಕೋವಿಡ್ ಸೋಂಕಿತರಿಗೆ 75% ಬೆಡ್ಗಳು ಮೀಸಲಿಟ್ಟಿರುವ ಕುರಿತಂತೆ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿ, ಹೋಂ ಐಸೋಲೇಷನ್ ಇರಲು ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದಿರುವವರಿಗೆ ಹೋಂ ಕೇರ್ ಸೆಂಟರ್ ತೆರೆಯುವ
    ಬಗ್ಗೆ ಕ್ರಮ ಕೈಗೊಳ್ಳಿ. ಮುಂಜಾಗ್ರತೆಯಾಗಿ ಎಲ್ಲಾ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ಗಳು ಲಭ್ಯವಿರುವ ರೀತಿ ವ್ಯವಸ್ಥೆಗಳನ್ನು ಮಾಡಿಕೊಳ್ಳಿ ಎಂದರು.

    ಎಲ್ಲಾ ಸಾರ್ವಜನಿಕರು ಸೂಕ್ತ ರೀತಿಯಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಿದ್ದು, ಈ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದರು.
    ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಎಲ್ಲಾ ತಂಡಗಳು ಹಾಗೂ ವಿವಿಧ ಅಧಿಕಾರಿಗಳ ನೇತೃತ್ವದ ಕಾರ್ಯತಂಡಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಡಿಸಿ ಸೂಚಿಸಿದರು.

    ಈ ಹಿಂದೆ ಕೋವಿಡ್ ನಿಯಂತ್ರಣದಲ್ಲಿ ಜಿಲ್ಲಾಡಳಿತವು ಇಡೀ ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸಿತ್ತು. ಈ ಬಾರಿಯೂ ಕೂಡಾ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಸಾರ್ವಜನಿಕರೂ ಸಹ ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ, ಜಿಲ್ಲೆಯಲ್ಲಿ ಕೋವಿಡ್ 2 ನೇ ಅಲೆ ನಿಯಂತ್ರಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿ.ಜಗದೀಶ್ ಹೇಳಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    five × four =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.