ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕೋವಿಡ್-19 ಲಸಿಕಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಇಲ್ಲಿನ ರೋಟರಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮ ವನ್ನು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ನಂದಿನಿ ಪ್ರಾಸ್ತಾವಿಕ ಮಾತುಗಳ್ನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳುತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಬೈಂದೂರು ಶಿಕ್ಷಕರು ಹಾಗೂ ಪಟ್ಟಣ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ತಾಲೂಕು ಹಿರಿಯ ಮೇಲ್ವಿಚಾರಕ ಸಂದೀಪ ಕಾರ್ಯಕ್ರಮ ವಂದಿಸಿದರು.










