Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಸತಿ ಶಾಲೆಗಳಲ್ಲಿನ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ವಸತಿ ಶಾಲೆಗಳಲ್ಲಿನ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿರುವ ವಸತಿಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಕುರಿತಂತೆ, ವಸತಿ ಶಾಲೆಗಳಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹೆಚ್ಚಿನ ಮಾಹಿತಿ ನೀಡುವಂತೆ , ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಜಿಲ್ಲಾದಿಕಾರಿ ಜಿ. ಜಗದೀಶ್ ಸೂಚಿಸಿದರು.

    Click Here

    Call us

    Click Here

    ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ವಸತಿಶಾಲೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ವಸತಿಶಾಲೆಗಳ ಪ್ರಾಂಶುಪಾಲರ, ನಿಲಯಪಾಲಕರ, ಕಂಪ್ಯೂಟರ್ ಶಿಕ್ಷಕರ , ಪ್ರಥಮ ದರ್ಜೆ ಸಹಾಯಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಜ್ಯ ಸರಕಾರ ಉಡುಪಿ ಜಿಲ್ಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ನಡೆಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದ್ದು , ಉಡುಪಿ ಜಿಲ್ಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳ ಪ್ರಯೋಜನ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

    ವಸತಿಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಸರಕಾರವು ಉಚಿತವಾಗಿ ಊಟ, ವಸತಿ, ಸಮವಸ್ತ್ರ ಶೂ, ಪಠ್ಯಪುಸ್ತಕ, ನೋಟ್ಪುಸ್ತಕ ನೀಡುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುವ ಮೂಲಕ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

    6ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾರ್ಗದರ್ಶನವನ್ನು ನೀಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಮಾಧ್ಯಮಗಳ ಮುಖಾಂತರ ಹಾಗೂ ಸಾಮಾಜಿಕ ಜಾಲತಾಣಗಳ ಮುಖಾಂತರ ವ್ಯಾಪಕ ಪ್ರಚಾರವನ್ನು ಕೈಗೊಳ್ಳುವಂತೆ ಸೂಚಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಕಳ ತಾಲೂಕಿನ ಮಿಯಾರು, ಕಾಪು ತಾಲೂಕಿನ ಕಳತ್ತೂರು, ಉಡುಪಿ ತಾಲೂಕಿನ ಹಿರೇಬೆಟ್ಟು, ಬ್ರಹ್ಮಾವರ ತಾಲೂಕಿನ ಆರೂರು, ಕುಂದಾಪುರ ತಾಲೂಕಿನ ಶಂಕರನಾರಾಯಣ, ಸಿದ್ದಾಪುರ, ಯಡ್ಯಾಡಿ-ಮತ್ಯಾಡಿ, ಬೈಂದೂರು ತಾಲೂಕಿನ ಹೆರಂಜಾಲು ವಸತಿ ಶಾಲೆಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 16 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ .

    ಸಭೆಯಲ್ಲಿ ಜಿಲ್ಲಾ ಪ್ರವೇಶ ಪರೀಕ್ಷಾಧಿಕಾರಿಗಳು ಹಾಗೂ ಸಮಾಜಕಲ್ಯಾಣ ಇಲಾಖೆಯ ಉಪನಿದೇಶಕರಾದ ಅನಿತಾ ಮಡ್ಲೂರ್, ಬಿ.ಸಿ.ಎಂ ಜಿಲ್ಲಾ ಮಟ್ಟದ ಅಧಿಕಾರಿಗಳಾದ ದೇವೆಂದ್ರ ಬಿರಾದಾರ್, ಐ.ಟಿ.ಡಿ.ಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ದೂದ್ಪೀರ್, ಡಿ.ಡಿ.ಪಿ.ಐ ಎನ್.ಎಚ್ ನಾಗೂರ್, ಡಯಟ್ ಪ್ರಾಂಶುಪಾಲರಾದ ವೇದಮೂರ್ತಿ ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಚಂದ್ರಶೇಖರ ಬಿ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    two × three =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.