Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಣೇಶ ಚತುರ್ಥಿ, ಮೊಹರಂ ಮತ್ತಿತರ ಹಬ್ಬಗಳ ಆಚರಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟ
    ರಾಜ್ಯ

    ಗಣೇಶ ಚತುರ್ಥಿ, ಮೊಹರಂ ಮತ್ತಿತರ ಹಬ್ಬಗಳ ಆಚರಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟ

    Updated:12/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು, ಅ.12:
    ಗಣೇಶ ಚತುರ್ಥಿ, ಮೊಹರಂ ಮತ್ತಿತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಯಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

    Click Here

    Call us

    Click Here

    ಗಣೇಶ ಚತುರ್ಥಿ, ಮೊಹರಂ, ಶ್ರೀ ಕೃಷ್ಣ ಜನ್ಮಾಷ್ಟಮಿ, ದುರ್ಗಾ ಪೂಜೆ ಮೊದಲಾದ ಹಬ್ಬ ಆಚರಣೆ ಸಂದರ್ಭದಲ್ಲಿ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಸಲಹೆ ನೀಡಲಾಗಿದೆ. ಮೊಹರಂ ಪ್ರಾರ್ಥನಾ ಸಭೆ, ಮೆರವಣಿಗೆಗಳಿಗೆ ಅವಕಾಶವಿಲ್ಲ. ಕಬರಸ್ಥಾನದಲ್ಲಿಯೂ ಸಭೆ ಮಾಡುವಂತಿಲ್ಲ. ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬೃಹತ್ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ.

    ಪೂಜಾ ಸ್ಥಳಗಳು ಮತ್ತಿತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಮತ್ತು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿನೊಂದಿಗೆ ಪೂಜಾ ಕಾರ್ಯ ಕೈಗೊಳ್ಳಲು ಅನುಮತಿಸಿದೆ. ಕೋವಿಡ್ ನಿಯಮದೊಂದಿಗೆ ಮಸಿದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಮಸೀದಿ ಪ್ರವೇಶಿಸುವಾಗ ಸ್ಯಾನಿಟೈಸರ್, ದೇಹದ ತಾಪಮಾನ ಪರೀಕ್ಷಿಸುವುದು ಕಡ್ಡಾಯ.ಆದರೆ ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ, ಸಭೆ, ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ. ಅಗತ್ಯವಿದ್ದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ  ಆದೇಶಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಈ ಮಾರ್ಗಸೂಚಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 51ರಿಂದ 60ರ ಅನ್ವಯ ಹಾಗೂ ಭಾರತ ದಂಡ ಸಂಹಿತೆ 188ನೇ ಪ್ರಕರಣದಡಿ ಕಾನೂನು ಕ್ರಮ ಕೈಗೊಳ್ಳತಕ್ಕದ್ದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಆತಿಥ್ಯ ನೀಡುವುದರಲ್ಲಿ ಬಂಟ ಸಮುದಾಯ ಪ್ರಸಿದ್ಧಿ: ಬೆಳಗಾವಿ ಬಂಟರ ಭವನ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    15/06/2025

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

    08/04/2025
    Leave A Reply Cancel Reply

    two × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.