Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಜೆಕಾರು: ಗುರುವೃಂದ – ವೃಕ್ಷ ಗೌರವ ವಿಶಿಷ್ಟ ಶಿಕ್ಷಕರ ದಿನಾಚರಣೆ
    ಊರ್ಮನೆ ಸಮಾಚಾರ

    ಅಜೆಕಾರು: ಗುರುವೃಂದ – ವೃಕ್ಷ ಗೌರವ ವಿಶಿಷ್ಟ ಶಿಕ್ಷಕರ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಅಜೆಕಾರು:
    ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಮತ್ತು ಬ್ರದರ‍್ಸ್ ಸ್ಪೋರ್ಟ್ಸ್ ಆಂಡ್ ಯೂತ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ಮತ್ತು ಅಡುಗೆಯವರ ಹೆಸರಲ್ಲಿ ನೆರಳು ನೀಡುವ, ಫಲ ನೀಡುವ ಗಿಡಗಳನ್ನು ನೆಡುವ ವಿನೂತನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಗುರುವೃಂದ ವೃಕ್ಷ ಗೌರವ ಅಜೆಕಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

    Click Here

    Call us

    Click Here

    ವಿಶ್ರಾಂತ ವಿದ್ಯಾಂಗ ಪರಿವೀಕ್ಷಕ ಅಡಂದಾಲು ಕರುಣಾಕರ ಹೆಗ್ಡೆ ಅವರು ಗಿಡಗಳನ್ನು ಶಿಕ್ಷಕರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಶಿಕ್ಷಕರನ್ನು ವಿದ್ಯಾರ್ಥಿಗಳು ಅನುಕರಣೆ ಮಾಡುತ್ತಾರೆ. ಹಾಗಾಗಿ ಅವರ ಜವಾಬ್ದಾರಿ ಹೆಚ್ಚು ಇದೆ. ಅವರಲ್ಲಿ ಸಮಾಜದ ಬಗ್ಗೆ ಉತ್ತಮ ಕಲ್ಪನೆಗಳನ್ನು ಬಿತ್ತ ಬೇಕು ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಸಮಿತಿಯ ರಾಜ್ಯಾಧ್ಯಕ್ಷ ಡಾ.ಶೇಖರ ಅಜೆಕಾರು ಮಾತನಾಡಿ, ಕನ್ನಡ ನಾಡು- ನುಡಿಯ ಸೇವೆ, ಸರಕಾರಿ ಶಾಲೆಗಳ ಅಭಿವೃದ್ಧಿಗೆ ಯಾರೇ ಕೆಲಸ ಮಾಡಿದರೂ ಅದಕ್ಕೆ ಪ್ರತಿಯೊಬ್ಬರು ಪ್ರೋತ್ಸಾಹ ನೀಡಬೇಕು, ಅನಾವಶ್ಯಕ ಟೀಕೆಗೆ ಸಮಯ ವ್ಯರ್ಥ ಮಾಡಬಾರದು ಎಂದು ಹೇಳಿದರು.

    ವಿಶ್ರಾಂತ ಮುಖ್ಯೋಪಾಧ್ಯಾಯ ಮೌರೀಸ್ ತಾವ್ರೋ ಶಿಕ್ಷಕರನ್ನು ಅಭಿನಂದಿಸಿದರು. ಶಾಲೆಯಲ್ಲಿ ಆರು ವರ್ಷಗಳ ಕಾಲ ಮತ್ತು ಒಟ್ಟು 16 ವರ್ಷ ಗೌರವ ಶಿಕ್ಷಕಿಯಾಗಿದ್ದು ಈಗ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಚರಿತ್ರಾ ಎಂ ಅವರನ್ನು ಸನ್ಮಾನಿಸಲಾಯಿತು.

    ಯುವ ಉದ್ಯಮಿ ಅರುಣ್ ಶೆಟ್ಟಿಗಾರ್, ಪಂಚಾಯತ್ ಸದಸ್ಯೆ ಯಶೋದಾ ಶೆಟ್ಟಿ, ಬೆಳದಿಂಗಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೌಮ್ಯಶ್ತೀ ಅಜೆಕಾರು, ಮಕ್ಕಳ ವಿಭಾಗದ ಸುನಿಧಿ ಅಜೆಕಾರು, ಸುನಿಜ ಅಜೆಕಾರು, ಶಾಲಾ ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಬ್ರದರ‍್ಸ್ ಸದಸ್ಯರು ಉಪಸ್ಥಿತರಿದ್ದರು. ವಾರ್ಡಿನ ಪಂಚಾಯತ್ ಸದಸ್ಯರಾದ ಜಾನ್ ಟೆಲಿಸ್, ಅಬ್ದುಲ್ ಗಫೂರ್ ಸಹಕರಿಸಿದರು. ಮುಖ್ಯೋಪಾಧ್ಯಾಯ ಎಸ್.ಆರ್. ವಿಶ್ವನಾಥ ಸ್ವಾಗತಿಸಿದರು. ಜಯರಾಮ ಆಚಾರ್ಯ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್‌

    26/05/2026

    ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ

    25/05/2026

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026
    Leave A Reply Cancel Reply

    14 − 6 =

    Call us

    Click Here

    Call us

    Call us

    Call us
    Highest Viewed Recently
    • ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್‌
    • ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ: ಡಾ. ನಾಗಲಕ್ಷ್ಮೀ ಚೌಧರಿ
    • ಕೊಲ್ಲೂರು ಅಪಘಾತದಲ್ಲಿ ಮೃತ ಮಹಿಳೆಯ ಚಿನ್ನ ಕದ್ದ ಪ್ರಕರಣ: ಆರೋಪಿ ಹೇಮಂತ್ ಬಂಧನ
    • ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.