Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಫ್ಲೈಓವರ್ ಬಳಿ ಬಾಕಿ ಉಳಿದಿರುವ ಹೆದ್ದಾರಿ ಕಾಮಗಾರಿ ಆದ್ಯತೆ ಮೇರೆಗೆ ಪೂರ್ಣಗೊಳಿಸಿ: ಉಡುಪಿ ಡಿಸಿ
    ಉಡುಪಿ ಜಿಲ್ಲೆ

    ಕುಂದಾಪುರ ಫ್ಲೈಓವರ್ ಬಳಿ ಬಾಕಿ ಉಳಿದಿರುವ ಹೆದ್ದಾರಿ ಕಾಮಗಾರಿ ಆದ್ಯತೆ ಮೇರೆಗೆ ಪೂರ್ಣಗೊಳಿಸಿ: ಉಡುಪಿ ಡಿಸಿ

    Updated:30/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ಜನ ಸಾಮಾನ್ಯರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ತಿಳಿಸಿದರು.

    Click Here

    Call us

    Click Here

    ಅವರು ನಗರದ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ವಾಹನಗಳ ಹಾಗೂ ಜನಸಾಮಾನ್ಯರು ಸುರಕ್ಷಿತ ಹಾಗೂ ಸುಗಮವಾಗಿ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ರಸ್ತೆ ಕಾಮಗಾರಿಗಳನ್ನು ಕೈಗೊಂಡಾಗ ಮಾತ್ರ ಅಪಘಾತ ಮುಕ್ತವಾಗುದರ ಜೊತೆಗೆ ಜನರು ಯಾವುದೇ ತೊಂದರೆ ಇಲ್ಲದೆ ಸಂಚರಿಸಬಹುದು ಇದಕ್ಕೆ ಒತ್ತು ನೀಡಬೇಕು ಎಂದರು.

    ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರದ ಸಂಗಂ ಹತ್ತಿರ ಮಳೆಯ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ, ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆಯನ್ನು ಸ್ಥಳೀಯ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸಮನ್ವಯದೊಂದಿಗೆ ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

    ಕುಂದಾಪುರದ ಫ್ಲೈಓವರ್ ಹತ್ತಿರ ಬಾಕಿ ಉಳಿದಿರುವ ರಸ್ತೆಯ ಡಾಂಬರೀಕರಣ, ಮಳೆಯ ನೀರು ಸರಾಗವಾಗಿ ಹೋಗುವ ವ್ಯವಸ್ಥೆ ಬೀದಿದೀಪ, ಸೂಚನಾ ಫಲಕಗಳು ಅಳವಡಿಕೆ, ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವ ದಾರಿ ಸೇರಿದಂತೆ ಮತ್ತಿತರ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಕೈಗೊಂಡು ಪೂರ್ಣಗೊಳಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಹೆದ್ದಾರಿ ರಸ್ತೆಗಳ ಕಾಮಗಾರಿಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಯಾವುದೇ ರೀತಿಯ ನೆರವು ಹಾಗೂ ಮತ್ತಿತರ ಸಮಸ್ಯೆಗಳಿದ್ದಲ್ಲಿ ಸಚಿವರ ಮೂಲಕ ಶೀಘ್ರದಲ್ಲಿಯೇ ಬಗೆಹರಿಸಿ ಕೊಡುವುದಾಗಿ ತಿಳಿಸಿದರು.

    ಹೆದ್ದಾರಿ ರಸ್ತೆಗಳನ್ನು ಪ್ರತಿ ವರ್ಷದ ನಿರ್ವಹಣೆಯನ್ನು ಕಾಲ-ಕಾಲಕ್ಕೆ ಕೈಗೊಳ್ಳುವುದರ ಜೊತೆಗೆ ಯಾವುದೇ ರಸ್ತೆಯಲ್ಲಿ ಗುಂಡಿಗಳು ಬೀಳದ ಹಾಗೆ ನೋಡಿಕೊಳ್ಳಬೇಕು ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಚರಂಡಿ ನಿರ್ಮಾಣವನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

    ಪರ್ಕಳದಿಂದ ಮಣಿಪಾಲ್ವರೆಗಿನ ರಸ್ತೆ ಅಗಲೀಕರಣದ ಸಂಬಂಧ ಉಚ್ಛನ್ಯಾಯಾಲಯದಲ್ಲಿ ಹೂಡಿರುವ ದಾವೆಯನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಬೇಕು, ತಕರಾರು ಇಲ್ಲದೇ ಇರುವ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿರುವ ಹಿನ್ನೆಲೆ ಕಾಮಗಾರಿಯನ್ನು ತತ್ಕ್ಷಣದಲ್ಲಿಯೇ ಪ್ರಾರಂಭಿಸಬೇಕೆಂದು ಸೂಚನೆ ನೀಡಿದರು.

    ಇಂದ್ರಾಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ, ತಾತ್ಕಾಲಿಕ ರಸ್ತೆ ದುರಸ್ಥಿ ಕೈಗೊಳ್ಳಬೆಕೆಂದ ಅವರು ಕರಾವಳಿ ಜಂಕ್ಷನ್ನಿಂದ ಮಲ್ಪೆ ಬಂದರಿನವರೆಗೆ ರಸ್ತೆ ಕಾಮಗಾರಿಯನ್ನು ಅಗತ್ಯವಿರುವ ಪೂರ್ವ ತಯಾರಿಯನ್ನು ಕೈಗೊಳ್ಳಬೇಕು ಎಂದರು.

    ಹೆಬ್ರಿಯಿಂದ ಸೋಮೆಶ್ವರ ಒಳಗೊಂಡಂತೆ ಆಗುಂಬೆವರೆಗಿನ ರಸ್ತೆಯ ಡಾಂಬರೀಕರಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲೆಯೇ ಪೂರ್ಣಗೋಳಿಸಿ ಕಾಮಗಾರಿಯನ್ನು ಪ್ರಾರಂಬಿಸಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಪ ವಿಭಾಗಾಧಿಕಾರಿ ರಾಜು, ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾದಿಕಾರದ ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    8 + nine =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.