Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ರಿಂಗ್‌ರೋಡ್ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ
    ಊರ್ಮನೆ ಸಮಾಚಾರ

    ಕುಂದಾಪುರ ರಿಂಗ್‌ರೋಡ್ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ

    Updated:07/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ:
    ಕುಂದಾಪುರ ಪುರಸಭೆ ವ್ಯಾಪ್ತಿಯ ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ಅಭಿವೃದ್ದಿಗೆ 20 ಕೋಟಿ ರೂ. ಅನುದಾನ ಮಂಜೂರಾಗಿದೆ.

    Click Here

    Call us

    Click Here

    ಮಹತ್ವಾಕಾಂಕ್ಷೆಯ ಯೋಜನೆ:
    2006-07ನೇ ಸಾಲಿನಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ದೂರದೃಷ್ಟಿತ್ವದಲ್ಲಿ ಸಾಕಾರಗೊಂಡ ಈ ಮಹತ್ವಾಕಾಂಕ್ಷೆಯ ಯೋಜನೆ ನಿರ್ವಹಣೆ ಇಲ್ಲದೆ ಸೊರಗುತ್ತಿತ್ತು. ಆರಂಭದಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ರಿಂಗ್‌ರೋಡ್ ಆನಂತರ ದಿನಗಳಲ್ಲಿ ನಿರ್ವಹಣೆ ಕಾಣದೆ ವರ್ಷಗಳೇ ಸಂದುಹೋಗಿವೆ. ಪೂರ್ಣ ಪ್ರಮಾಣದಲ್ಲಿ ರಿಂಗ್‌ರೋಡ್ ನಿರ್ಮಾಣದ ಅವಶ್ಯವನ್ನು ಶಾಸಕರು ಮನಗಂಡಿದ್ದರು. ಆದರೆ ನಾನಾ ಕಾರಣಗಳಿಂದ ಅನೇಕ ಬಾರಿ ಪ್ರಸ್ತಾವ ಸಲ್ಲಿಸಿದ್ದರೂ ಮಂಜೂರಾತಿ ವಿಳಂಬವಾಗುತ್ತಿತ್ತು. ಕುಂದಾಪುರದ ಸಂಗಮ್‌ನಿಂದ ಮೊದಲ್ಗೊಂಡು ಪಂಚಗಂಗಾವಳಿ ನದಿ ಪಾತ್ರದಲ್ಲಿ ಹಾದು ಹೋಗುವ ರಿಂಗ್ ರೋಡ್ ಚರ್ಚ್ ರಸ್ತೆಯನ್ನು ಸಂಧಿಸುತ್ತದೆ.

    ಸಂಚಾರ ದಟ್ಟಣ ತಗ್ಗಲಿದೆ:
    ರಿಂಗ್‌ರೋಡ್ ನಿರ್ಮಾಣವಾದರೆ ನಗರದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ನಗರದೊಳಗೆ ಪ್ರವೇಶ ಪಡೆಯದೇ ಕೋಡಿ ಮೊದಲಾದ ಭಾಗಗಳಿಗೆ ಪುರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಹೆದ್ದಾರಿಯಿಂದ ರಿಂಗ್ ರೋಡ್ ಮೂಲಕ ಹೋಗಲು ಸಾಧ್ಯವಿದೆ.

    ರಿಂಗ್ ರೋಡ್ ಸಾಕಾರಗೊಂಡು 15 ವರ್ಷ ಸಂದರೂ ಇನ್ನು ಪೂರ್ಣಪ್ರಮಾಣದಲ್ಲಿ ಡಾಮರು ಕಾಮಗಾರಿ ನಡೆದಿರಲಿಲ್ಲ. ಹಲವೆಡೆ ನದಿ ದಂಡೆಗೆ ರಿಂಗ್ ರೋಡ್‌ಗೆಂದು ಕಟ್ಟಿದ ರಿವಿಟ್‌ಮೆಂಟ್ ಕುಸಿದಿದೆ. ಮಳೆಯ ಅಬ್ಬರಕ್ಕೆ ರಿಂಗ್‌ರೋಡ್‌ನಲ್ಲಿ ಬೃಹತ್ ಗುಂಡಿಗಳು ಸೃಷ್ಟಿಯಾಗಿ ವಾಹನ ಓಡಾಟ ದುಸ್ತರವೆನಿಸಿದೆ. ಸಂಜೆ ವಿಹಾರಿಗಳು, ಪ್ರವಾಸಿಗರನ್ನು ಬರ ಸೆಳೆಯುವ ರಿಂಗ್ ರೋಡ್‌ನ ಉದ್ದಕ್ಕೂ ಕೊಳಚೆ ಕಣ್ಣಿಗೆ ಕಟ್ಟುತ್ತಿದೆ. ಸ್ಥಳೀಯಾಡಳಿತ ರಿಂಗ್‌ರೋಡ್ ನಿರ್ವಹಣೆಗೆ ಅನುದಾನ ತರುವಲ್ಲಿ ಸೋತಿದೆ ಎಂಬ ಆರೋಪ ಕೇಳಿಬಂದಿದೆ.

    ಮೀನುಗಾರಿಕೆ ವಲಯ ಎಂದು ಗುರುತಿಸಿಕೊಂಡಿರುವ ಖಾರ್ವಿಕೇರಿ ಪಂಚಗಂಗಾವಳಿ, ಮದ್ದುಗುಡ್ಡೆ ಪ್ರದೇಶದಲ್ಲಿ ರಿಂಗ್ ರೋಡ್ ಹಾದು ಹೋಗಿದೆ ಈ ಎರಡು ಪ್ರದೇಶಗಳು ಅಂತ್ಯಂತ ಜನಸಂದಣಿಯಿಂದ ಕೂಡಿವೆ. ಸಹಸ್ರಾರು ಮನೆಗಳು ಇಲ್ಲಿವೆ. ಮುಖ್ಯವಾಗಿ ನದಿಪಾತ್ರದ ಇಲ್ಲಿಯ ಜನರು ಹೆಚ್ಚಾಗಿ ಮೀನುಗಾರಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನದಿ ಪಾತ್ರದ ಜನರ ಸಂಪರ್ಕಕ್ಕೆ ಹಾದಿ ಇದಾಗಿದ್ದರೂ ಅಭಿವೃದ್ದಿ ನನೆಗುದಿಗೆ ಬಿದ್ದ ಬಗ್ಗೆ ಆಕ್ರೋಶ ಇತ್ತು.

    Click here

    Click here

    Click here

    Click Here

    Call us

    Call us

    ಸ್ಥಳೀಯರ ಅನೇಕ ವರ್ಷಗಳ ಬೇಡಿಕೆಯಾಗಿದ್ದ ರಿಂಗ್ ರೋಡ್ ಕಾಮಗಾರಿಯನ್ನು 20 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಅವರು ಅನುಮೋದಿಸಿದ್ದಾರೆ. ಈ ಬಗ್ಗೆ ಆಡಳಿತ ಇಲಾಖೆಗೆ ತಿಳಿಸಲಾಗಿದೆ. ಇನ್ನು ಟೆಂಡರ್ ಪ್ರಕ್ರಿಯೆ ನಡೆಯುವುದು ಬಾಕಿ ಇದೆ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮಾಹಿತಿ ನೀಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026
    Leave A Reply Cancel Reply

    seventeen + five =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.