Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಮೀನುಗಾರ ಮಹಿಳೆಯರಿಂದ ಮೀನು ಖರೀದಿಸಿ ನೈತಿಕ ಬೆಂಬಲ ಸೂಚಿಸಿದ ವಿಹಿಪಂ ಬಜರಂಗದಳ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಮೀನುಗಾರ ಮಹಿಳೆಯರಿಂದ ಮೀನು ಖರೀದಿಸಿ ನೈತಿಕ ಬೆಂಬಲ ಸೂಚಿಸಿದ ವಿಹಿಪಂ ಬಜರಂಗದಳ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಅನ್ಯಕೋಮಿನ ಒಂದು ವರ್ಗ ಗಂಗೊಳ್ಳಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ, ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ ನೀಡಲು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡ ಮುಂದಾಗಿದೆ.

    Click Here

    Call us

    Click Here

    ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡದ ಪ್ರಮುಖರು ಹಾಗೂ ನಂದಗೋಕುಲ ಗೇರುಬೀಜ ಕಾರ್ಖಾನೆಯ ನೌಕರರು, ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮಂಗಳವಾರ ಮೀನು ಖರೀದಿಸಿ ಮಹಿಳಾ ಮೀನುಗಾರರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ಮುಂದಿನ ದಿನಗಳಲ್ಲಿ ಬೇರೆ ಬೇರೆ ಗ್ರಾಮದ ಹಿಂದು ಸಮಾಜದವರು ಗಂಗೊಳ್ಳಿಗೆ ಬಂದು ಮೀನು ಖರೀದಿಸುವ ಕಾರ್ಯ ಮಾಡಲಿದ್ದಾರೆ. ಯಾವುದೇ ಕಾರಣಕ್ಕೂ ಮಹಿಳಾ ಮೀನುಗಾರರು ಎದೆಗುಂದಬಾರದು ಎಂದು ಮಹಿಳೆಯರಲ್ಲಿ ವಿಶ್ವಾಸ ತುಂಬಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದು ಪರಿಷತ್‌ನ ಕೇಂದ್ರಿಯ ವಿಶ್ವಸ್ಥ ಮಂಡಳಿ ಸದಸ್ಯ ಪ್ರೇಮಾನಂದ ಶೆಟ್ಟಿ, ಗಂಗೊಳ್ಳಿಯಲ್ಲಿ ನಡೆದಿರುವ ವಿದ್ಯಮಾನದ ಬಳಿಕ ಅನ್ಯಕೋಮಿನವರು ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದು ಖಂಡನೀಯ. ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಹೊಟ್ಟೆಪಾಡಿಗೆ, ದೈನಂದಿನ ಜೀವನ ನಡೆಸಲು ಮೀನು ಮಾರಾಟ ಮಾಡುತ್ತಿರುವ ಮೀನುಗಾರರಿಂದ ಒಂದೇ ಸಮನೆ ಮೀನು ಖರೀದಿಗೆ ಬಹಿಷ್ಕಾರ ಹಾಕುವ ಮೂಲಕ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಅನ್ಯಕೋಮಿನವರ ಆರ್ಥಿಕ ಬಹಿಷ್ಕಾರದ ಪ್ರಯತ್ನವನ್ನು ಧಿಕ್ಕರಿಸುವ ನಿಟ್ಟಿನಲ್ಲಿ, ಮಹಿಳಾ ಮೀನುಗಾರರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಯಾರೇ ಬಹಿಷ್ಕಾರ ಹಾಕಿದರೂ, ಯಾರೇ ದಾಳಿ ಮಾಡಿದರೂ ಕೂಡ ನಾವು ನಿರಂತರವಾಗಿ ಮಹಿಳ ಮೀನುಗಾರರಿಗೆ ಸಹಕಾರ ನೀಡುತ್ತೇವೆ. ನಿಮ್ಮೊಟ್ಟಿಗೆ ಬದುಕುತ್ತೇವೆ ಎಲ್ಲಾ ರೀತಿಯಲ್ಲಿ ಶಕ್ತಿಯನ್ನು ನೀಡುತ್ತೇವೆ ಎಂದು ಅವರು ಹೇಳಿದರು.

    ಸಾವಿರಾರು ವರ್ಷಗಳಿಂದ ಇದೇ ರೀತಿಯಲ್ಲಿ ಬಹಿಷ್ಕಾರ ಹಾಕುತ್ತಾ ಇಡೀ ದೇಶಾದ್ಯಂತ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ. ಹಿಂದುಗಳನ್ನು ರಾಷ್ಟ್ರದಿಂದ ಬೇರ್ಪಡಿಸುವ ಭಾಗವಾಗಿ ಷಡ್ಯಂತ್ರ ನಡೆದಿದೆ. ಈ ಷಡ್ಯಂತ್ರ ಇನ್ನು ಮುಂದೆ ಯಶಸ್ವಿಯಾಗುವುದಿಲ್ಲ. ಸಮಸ್ತ ಹಿಂದು ಜನಾಂಗ ಎಚ್ಚೆತ್ತುಕೊಂಡಿದೆ. ಈ ದೇಶದ ಯಾವುದೇ ಮೂಲೆಯಲ್ಲಿ ಹಿಂದು ಸಮಾಜದ ಮೇಲೆ ಅಕ್ರಮಣ ಅಥವಾ ಇಂತಹ ವಿಭಜನೆ ಶಕ್ತಿಗಳು ತಮ್ಮ ಕಾರ್ಯ ಚಟುವಟಿಕೆಗಳನ್ನು ತೋರಿಸಿದರೆ ಸಮಸ್ತ ದೇಶದ ಹಿಂದು ಸಮಾಜ ತಕ್ಕ ನೀಡಲು ಸಿದ್ಧವಾಗಿದೆ. ನಿಮ್ಮ ಯಾವುದೇ ಷಡ್ಯಂತ್ರ ವಿಫಲ ಮಾಡಲು ನಾವು ಸಿದ್ಧರಿದ್ದೇವೆ. ಇವತ್ತಿನವರೆಗೆ ನೀವು ನಮ್ಮ ವಿಶ್ವಾಸ ಇಟ್ಟುಕೊಂಡು ನಮ್ಮೊಟ್ಟಿಗೆ ಬದುಕುವ ನಾಟಕ ಮಾಡುತ್ತಾ ನಮ್ಮ ಎಲ್ಲಾ ವ್ಯಾಪಾರಿಗಳ ವ್ಯಾಪಾರವನ್ನು ಸೋಲಿಸುವ ಪ್ರಯತ್ನ ಮಾಡಿದ್ದೀರಿ ಎಂದು ಆರೋಪಿಸಿದ ಅವರು ನಾವು ಯಾವತ್ತೂ ಕೂಡ ಹಿಂದು ಸಮಾಜ ಮೀನುಗಾರರ ಪರವಾಗಿದ್ದೇವೆ ಎಂದು ಹೇಳಿದರು.

    ವಿಹಿಂಪ ಕುಂದಾಪುರ ತಾಲೂಕು ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಗೋಳಿಯಂಗಡಿ, ಬಜರಂಗದಳ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ, ವಿಹಿಂಪ ಸಂಪರ್ಕ ಪ್ರಮುಖ್ ಗಿರೀಶ ಕುಂದಾಪುರ, ಬಜರಂಗದಳ ತಾಲೂಕು ಸಂಚಾಲಕ ಸುಧೀರ್, ತಾಲೂಕು ಮಠ ಮಂದಿರ ಪ್ರಮುಖ್ ಶ್ರೀನಿವಾಸ ಕುಂದರ್, ಬಿಎಂಎಸ್ ಗೌರವಾಧ್ಯಕ್ಷ ಕೆ.ಟಿ.ಸತೀಶ್, ಸಂಕೇತ್ ಕೊರ್ಗಿ, ವಿಹಿಂಪ ಮತ್ತು ಬಜರಂಗದಳ ಕಾರ್ಯಕರ್ತರು, ನಂದಗೋಕುಲ ಗೇರುಬೀಜ ಕಾರ್ಖಾನೆಯ ನೌಕರರು, ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    seventeen − 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.