Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅ.28ರಂದು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ
    ಉಡುಪಿ ಜಿಲ್ಲೆ

    ಅ.28ರಂದು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅತ್ಯಂತ ವೈಶಿಷ್ಠ ಪೂರ್ಣವಾಗಿ ಆಚರಿಸುವ ಕುರಿತಂತೆ ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಹಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

    Click Here

    Call us

    Click Here

    ಅವರು ವರ್ಚುವಲ್ ಸಭೆಯ ಮೂಲಕ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಶ್ರೀ ಕೃಷ್ಣ ಮಠ, ಮಲ್ಪೆ ಬೀಚ್, ಸೀ ವಾಕ್, ಕಾರ್ಕಳದ ಜೈನ ಬಸದಿ, ಗೊಮ್ಮಟ ಬೆಟ್ಟ, ವರಂಗ, ಮುಂತಾದ ಪ್ರದೇಶಗಳಲ್ಲಿ ಸಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು. ಪಡುಬಿದ್ರೆಯ ಬ್ಲೂ ಫ್ಲಾಗ್ ಬೀಚ್, ಕಾಪು ಲೈಟ್ ಹೌಸ್ ಬಳಿಯಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

    ಮೀನುಗಾರಿಕೆ ಇಲಾಖೆವತಿಯಿಂದ ಬೋಟ್ ಗಳಲ್ಲಿ ಮೀನುಗಾರರಿಂದ, ಮೆಸ್ಕಾಂ ವತಿಯಿಂದ ಲೈನ್ ಮೆನ್ ಗಳ ಮೂಲಕ ಕೈಗಾರಿಕೆ ಇಲಾಖೆವತಿಯಿಂದ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ, ಗೇರು ಬೀಜ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಂದ ,ಅರಣ್ಯ ಇಲಾಖೆವತಿಯಿಂದ ಅರಣ್ಯ ರಕ್ಷಕರಿಂದ ಅರಣ್ಯದಲ್ಲಿ, ಟ್ರೀ ಪಾರ್ಕ್ಗಳಲ್ಲಿ, ಮುಜರಾಯಿ ಇಲಾಖೆವತಿಯಿಂದ ಕೊಲ್ಲೂರು, ಮಂದಾರ್ತಿ,ಆನೆಗುಡ್ಡೆ ದೇವಸ್ಥಾನಗಳ ಮುಂಭಾಗದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಸಹ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚನೆ ನೀಡಿದರು.

    ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರನ್ನು ಒಳಗೊಂಡ ಕಾರ್ಯಕ್ರಮ ರೂಪಿಸುವಂತೆ ಎಲ್ಲಾ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಆಯೋಜಿಸುವಂತೆ ಪ್ರೌಢ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ, ಹಾಗೂ ಮಾಹೆ ಸಂಸ್ಥೆಯಲ್ಲೂ ್ಲ ಸಹ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿ, ಜಿಲ್ಲೆಯ ಎಲ್ಲಾ ಪ್ರಮುಖ ಬ್ಯಾಂಕ್ ಗಳಲ್ಲಿ ಸಿಬ್ಬಂದಿಗಳಿAದ ಕನ್ನಡ ಗೀತೆಗಳನ್ನು ಹಾಡಿಸಿ ಎಂದರು.

    Click here

    Click here

    Click here

    Click Here

    Call us

    Call us

    ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಹ ಕನ್ನಡ ಗೀತೆಗಳನ್ನು ಹಾಡುವಂತೆ ತಿಳಿಸಿದ ಅವರು ಈ ಕುರಿತಂತೆ 2 ದಿ ಮೊದಲು ರಿಹರ್ಸಲ್ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎಲ್ಲಾ ಸಿಬ್ಬಂದಿಗಳೂ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೇರಿ ಹಾಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.

    ಉಡುಪಿ ನಗರಸಭೆಯಿಂದ ಪೌರ ಕಾರ್ಮಿಕರು, ಸಿಬ್ಬಂದಿ ಮತ್ತು ನಗರಸಭಾ ಸದಸ್ಯರು ನ್ನು ಒಳಗೊಂಡ 3 ತಂಡಗಳನ್ನು ರಚಿಸಿಕೊಂಡು ಹಾಡಲು ವ್ಯವಸ್ಥೆ ಮಾಡಿಕೊಳ್ಳುವುವಾಗಿ ನಗರಸಭೆ ಅಧಿಕಾರಿಗಳು ತಿಳಿಸಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಜಿಲ್ಲೆಯ ಎಲ್ಲಾ ಕನ್ನಡ ಸಂಘ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ, ಮಲ್ಪೆಯಲ್ಲಿ 100 ಮಂದಿ ಕಲಾವಿದರು ಬೋಟ್ ನಲ್ಲಿ ತೆರಳಿ ಸಮುದ್ರದಲ್ಲಿ ಹಾಡಲು ಮತ್ತು ಕೋಟ ಶಿವರಾಮ ಥೀಂ ಪಾರ್ಕ್ನಲ್ಲಿ ಸಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

    ಅಕ್ಟೋಬರ್ 28 ರಂದು ಜಿಲ್ಲೆಯಾದ್ಯಂತ ನಡೆಯುವ ಕಾರ್ಯಕ್ರಮಗಳ ಸಂಪೂರ್ಣ ದಾಖಲೀಕರಣ ಕಾರ್ಯವನ್ನು ವ್ಯವಸ್ಥಿತ ರೀತಿಯಲ್ಲಿ ಮಾಡುವಂತೆ ಹಾಗೂ ಮಲ್ಪೆಯಲ್ಲಿ ಬೋಟ್ ನಡೆಯುವ ಕಾರ್ಯಕ್ರಮದಲ್ಲಿ ಸುರಕ್ಷಾ ಸಾಧನಗಳನ್ನು ಧರಿಸಿಕೊಂಡು ಕಾರ್ಯಕ್ರಮ ಆಯೋಜಿಸುವಂತೆ ಮತ್ತು ಎಲ್ಲಾ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್,ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    19 − 18 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.