Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: 4 ಪ್ರತ್ಯೇಕ ಅಪಘಾತ: ನಾಲ್ಕು ಜಾನುವಾರು ಸಾವು, ಎರಡು ದನಗಳಿಗೆ ಗಾಯ
    ಅಪಘಾತ-ಅಪರಾಧ ಸುದ್ದಿ

    ಬೈಂದೂರು: 4 ಪ್ರತ್ಯೇಕ ಅಪಘಾತ: ನಾಲ್ಕು ಜಾನುವಾರು ಸಾವು, ಎರಡು ದನಗಳಿಗೆ ಗಾಯ

    Updated:28/11/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು,ನ.27:
    ತಾಲೂಕಿನ ಯಡ್ತರೆ ಸಮೀಪದ ರಾಹುತನಕಟ್ಟೆ ಹಾಗೂ ನಾಕಟ್ಟೆ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದ ನಾಲ್ಕು ಪ್ರತ್ಯೇಕ ಅಪಘಾತದಲ್ಲಿ ನಾಲ್ಕು ದನಗಳು ಸಾವನ್ನಪ್ಪಿದ್ದು, ಎರಡು ದನಗಳು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿರುವ ಘಟನೆ ನಡೆದಿದೆ.

    Click Here

    Call us

    Click Here

    ರಾಹುತನಕಟ್ಟೆ ಬಳಿ ಶನಿವಾರ ರಾತ್ರಿ ವೇಳೆಗೆ ಎರಡು ಪ್ರತ್ಯೇಕ ಅಪಘಾತಗಳು ನಡೆದು ಎರಡು ದನಗಳು ಮೃತಪಟ್ಟು ಎರಡು ದನಗಳಿಗೆ ಗಾಯಗಳಾಗಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಹಾಗೂ ಕಾರಿಗೆ ದನಗಳು ಅಡ್ಡಬಂದು ಅಪಘಾತ ನಡೆದಿತ್ತು. ದನಗಳಿಗೆ ಸಣ್ಣಪುಟ್ಟ ಗಾಯಗೊಂದಿಗೆ ಪಾರಾಗಿದ್ದವು. ಬೈಕ್ ಹಾಗೂ ಕಾರಿಗೂ ಹಾನಿಯಾಗಿತ್ತು. ಆ ಬಳಿಕ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಎರಡು ದನಗಳು ಅಡ್ಡ ಬಂದು ಡಿಕ್ಕಿ ಹೊಡೆದಿದ್ದು, ಎರಡೂ ದನಗಳೂ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು.

    ನಾಕಟ್ಟೆ ಅಂಬಿಕಾ ಉಪಹಾರ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಂದೂರು ಹಾಗೂ ಯಡ್ತರೆ ಕಡೆಗೆ ತೆರಳುವ ಎರಡೂ ಮಾರ್ಗದಲ್ಲಿ ಬೇರೆ ಬೇರೆ ವಾಹನಕ್ಕೆ ಎರಡು ದನಗಳು ಡಿಕ್ಕಿಯಾಗಿ ಸಾವನ್ನಪ್ಪಿದ್ದವು.

    ಕತ್ತಲ ಹೆದ್ದಾರಿ – ಬೀಡಾಡಿ ದನಗಳ ಹಾವಳಿ:
    ಕೋಟದಿಂದ ಶಿರೂರು ತನಕದ ನವಯುಗ ಹಾಗೂ ಐಆರ್‌ಬಿ ಕಂಪೆನಿಗಳು ಆಯ್ದ ಪ್ರದೇಶಗಳಲ್ಲಷ್ಟೇ ಬೀದಿದೀಪ ಅಳವಡಿಸಿದೆ. ಕೆಲವು ಜನವಸತಿ, ಜನಸಂಚಾರದ ಪ್ರದೇಶಗಳಲ್ಲಿಯೂ ಬೀದಿದೀಪವಿಲ್ಲದೇ ಜನರು, ವಾಹನ ಸವಾರರು ನಿರಂತರ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವೆಡೆ ಬೀದಿ ದೀಪ ಅಳವಡಿಸಿದ್ದರೂ ಸರಿಯಾದ ನಿರ್ವಹಣೆಯೂ ಆಗುತ್ತಿಲ್ಲ. ಅದರ ನಡುವೆ ರಸ್ತೆ ಮೇಲೆಗೆ ನಿಲ್ಲವ ಬೀಡಾಡಿ ದನಗಳಿಂದಾಗಿ ಸಾಕಷ್ಟು ವಾಹನಗಳು ಅಪಘಾತಕ್ಕೀಡಾಗಿ ಪ್ರಾಣಹಾನಿ ಸಂಭವಿಸುತ್ತಲೇ ಇದೆ.

    ಈ ಬಗ್ಗೆ ಐಆರ್‌ಬಿ ಹಾಗೂ ನವಯುಗ ಕಂಪೆನಿಯ ಅಧಿಕಾರಿಗಳಿಗೆ ಸಾಕಷ್ಟು ಭಾರಿ ದೂರು ಸಲ್ಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳ ಸಭೆಗೆ ಹಾಜರಾಗುವ ಎನ್‌ಎಚ್‌ಆರ್‌ಐ ಅಧಿಕಾರಿಗಳು ಕಾರಣ ಕೊಟ್ಟು ಜಾರಿಕೊಳ್ಳುತ್ತಿದ್ದಾರೆ. ಇನ್ನು ಕೊಲ್ಲೂರು ದೇವಳದಿಂದ ನೂತನ ಗೋಶಾಲೆ ತೆರೆಯುವ ವಿಚಾರ ನೆನೆಗುದಿಗೆ ಬಿದ್ದಿದೆ.

    Click here

    Click here

    Click here

    Click Here

    Call us

    Call us

    ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ದನ ಅಡ್ಡವಿರಿಸಿ ಪ್ರತಿಭಟನೆ:
    ನಿನ್ನೆ ರಾತ್ರಿ ಅಪಘಾತ ನಡೆದಿದ್ದರೂ ಇಂದು ಮಧ್ಯಾಹ್ನದ ತನಕ ದನಗಳನ್ನು ಹಾಗೆ ರಸ್ತೆಯಲ್ಲಿಯೇ ಬಿಟ್ಟಿದ್ದರಿಂದ ಐಆರ್‌ಬಿ ಕಂಪೆನಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಕಾಲ ಹೆದ್ದಾರಿ ತಡೆದು ಪ್ರತಿಭಟಿಸಿದರು. ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಳಿಕ ಸ್ಥಳಕ್ಕೆ ಬಂದ ಐಆರ್‌ಬಿ ಸಿಬ್ಬಂದಿಗಳು ಎರಡೂ ದನಗಳನ್ನು ಬದಿಗೆ ಸರಿಸಿ ರಸ್ತೆ ಪಕ್ಕದಲ್ಲಿಯೇ ಹೂತು ಹಾಕಿದ್ದಾರೆ.

    ಇದನ್ನೂ ಓದಿ:
    ► ರಾ.ಹೆ-66ರಲ್ಲಿ ಇನ್ನೋವಾ ಡಿಕ್ಕಿಯಾಗಿ ಎರಡು ದನಗಳ ಸಾವು – https://kundapraa.com/?p=44049 .
    ► ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸಾವು – https://kundapraa.com/?p=51543 .

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.