Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹವಾಮಾನ ಬದಲಾವಣೆ ಮತ್ತು ಕೃಷಿ ಕುರಿತಾದ ರೈತ ಜಾಗೃತಿ
    ಊರ್ಮನೆ ಸಮಾಚಾರ

    ಹವಾಮಾನ ಬದಲಾವಣೆ ಮತ್ತು ಕೃಷಿ ಕುರಿತಾದ ರೈತ ಜಾಗೃತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದ ಗ್ರಾಮೀಣ ಹವಾಮಾನ ಸೇವಾ ಯೋಜನೆ ಹಾಗೂ ಶ್ರೀ ಮೂಕಾಂಬಿಕಾ ಆತ್ಮ ರೈತರ ಸಂಘ ಗೋಳಿಹೊಳೆ ವತಿಯಿಂದ ಗೋಳಿಹೊಳೆ ಗ್ರಾಮದಲ್ಲಿ ರೈತರಿಗೆ ಹವಾಮಾನ ಬದಲಾವಣೆ ಮತ್ತು ಕೃಷಿ ಕುರಿತಾದ ರೈತ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    Click Here

    Call us

    Click Here

    ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದ ಸಹ ಸಂಶೋಧನಾ ನಿರ್ದೇಶಕರಾದ ಡಾ. ಲಕ್ಷ್ಮಣ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಹವಾಮಾನದಿಂದ ಕೃಷಿಯಲ್ಲಿ ಅನೇಕ ರೀತಿಯ ತೊಂದರೆಗಳು ಎದುರಾಗುತ್ತಿರುವುದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ ಇದರ ಪರಿಣಾಮವಾಗಿ ರೈತರು ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ರೀತಿಯ ನಷ್ಟಗಳನ್ನು ಹಿಮ್ಮೆಟ್ಟಿ ಕೃಷಿಯಲ್ಲಿ ಲಾಭ ಗಳಿಸಬೇಕೆಂದರೆ ರೈತರು ಕೃಷಿಯಲ್ಲಿ ಲಭ್ಯವಿರುವ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ಹವಾಮಾನ ವೈಪರೀತ್ಯದಿಂದ ಗೇರು ಬೆಳೆಯಲ್ಲಿ ಆಗುವ ನಷ್ಟವನ್ನು ತಪ್ಪಿಸಲು ರೈತರು ಪಾಲಿಸಬೇಕಾದ ಕೃಷಿ ಚಟುವಟಿಕೆಗಳನ್ನು ಸಂಕ್ಷಿಪ್ತವಾಗಿ ತಿಳಿಸಿದರು.

    ಮೇಘಧೂತ್ ತಾಂತ್ರಿಕ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಧನಂಜಯ. ಬಿ, ಇತ್ತೀಚಿನ ದಿನಗಳಲ್ಲಿ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಕೃಷಿ ಮಾಡುವುದು ಅನಿವಾರ್ಯವಾಗಿದೆ ಈ ನಿಟ್ಟಿನಲ್ಲಿ ಮೇಘಧೂತ್ ಮೊಬೈಲ್ ಆಪ್ ಹೆಚ್ಚು ಸಹಕಾರಿಯಾಗಿದೆ ಎಂದರು. ಜಿ.ಕೆ.ಎಂ.ಎಸ್ ಹಾಗೂ ನೈಸರ್ಗಿಕ ಕೃಷಿ ಯೋಜನೆಯ ಪ್ರಧಾನ ಸಂಶೋಧಕರಾಧ ಡಾ.ಕೆ.ವಿ.ಸುಧೀರ್ ಕಾಮತ್ ರವರು ರೈತರಿಗೆ ಅಡಿಕೆ,ತೆಂಗು ಹಾಗೂ ಬಾಳೆ ಬೆಳೆಗಳ ಸಮಗ್ರ ಬೆಳೆ ನಿರ್ವಹಣೆ ಕುರಿತಾದ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ರೈತ ಸಂಪರ್ಕ ಕೇಂದ್ರದ ಬೈಂದೂರಿನ ಕೃಷಿ ಅಧಿಕಾರಿಗಳಾದ ಗಾಯತ್ರಿ ಯವರು ರೈತರಿಗೆ ಕೃಷಿ ಇಲಾಖೆಯಿಂದ ಲಭ್ಯವಿರುವ ಸೌಲಭ್ಯಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಿದರು.

    ಅನಂತರ ತಾಂತ್ರಿಕ ಮಾಹಿತಿಯನ್ನು ನೀಡಿದ ಪ್ರವೀಣ್ ಕೆ.ಎಂ ರವರು ಭಾರತೀಯ ಹವಾಮಾನ ಇಲಾಖೆಯು ರೈತರಿಗೆ ಹವಾಮಾನ ಮುನ್ಸೂಚನೆಯ ಜೊತೆಗೆ ಸೂಕ್ತ ಬೆಳೆ ಸಲಹೆ ನೀಡುವ ಸಲುವಾಗಿ ಮೇಘಧೂತ್ ಆಪ್ ಅನ್ನು ಬಿಡುಗಡೆಗೊಳಿಸಿದೆ ರೈತರು ಈ ಆಪ್‌ನ ಸದುಪಯೋಗ ಪಡಿಸಿಕೊಳ್ಳಬೇಕೆಂದು ನೆರೆದಿದ್ದ ರೈತರಿಗೆ ಕಿವಿಮಾತು ಹೇಳಿದರು. ಶ್ರೀ.ಸಂದೇಶ್ ಪೂಜಾರಿ, ಗೌರವಾಧ್ಯಕ್ಷರು, ಶ್ರೀ ಮೂಕಾಂಬಿಕಾ ಆತ್ಮ ರೈತರ ಸಂಘ,ಗೋಳಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ.ಕುಪ್ಪಯ್ಯನಾಯಕ್ ಹಾಗೂ ಶ್ರೀ.ಶೇಖರ್ ಪೂಜಾರಿಯವರು ನೆರೆದಿದ್ದ ರೈತರಿಗೆ ತರಕಾರಿ ಬೀಜಗಳನ್ನು ವಿತರಿಸಿದರು.

    ಈ ಕಾರ್ಯಕ್ರಮವನ್ನು ಡಾ. ಸಂತೋಷ್ ಗೌಡ ಜಿ.ಬಿ ನಿರೂಪಿಸಿದರು ಹಾಗೂ ಕೇಂದ್ರದ ವಿಜ್ಞಾನಿಗಳಾದ ಡಾ.ಸುನೀಲ್ ಕುಮಾರ್.ಕೆ, ಡಾ.ಮಹಂತೇಶ್.ಪಿ.ಎಸ್, ಸ್ವಾತಿ ಶೆಟ್ಟಿ ಹಾಗೂ ಹವಾಮಾನ ಘಟಕದ ಪರಿವೀಕ್ಷಕರಾದ ದಿನೇಶ ಖಾರ್ವಿ ಉಪಸ್ಥಿತರಿರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    three × 1 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.