Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಲನಚಿತ್ರ ಉದ್ಯಮದಲ್ಲಿ ವಿಫುಲ ಉದ್ಯೋಗವಕಾಶ: ಅಶೋಕ್ ಕಶ್ಯಪ್
    ಉಡುಪಿ ಜಿಲ್ಲೆ

    ಚಲನಚಿತ್ರ ಉದ್ಯಮದಲ್ಲಿ ವಿಫುಲ ಉದ್ಯೋಗವಕಾಶ: ಅಶೋಕ್ ಕಶ್ಯಪ್

    Updated:23/03/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಮಾ.23:
    ಭಾರತದ ಚಲನಚಿತ್ರ ಉದ್ಯಮದಲ್ಲಿ ವಿಫುಲ ಉದ್ಯೋಗವಕಾಶಗಳಿದ್ದು, ಪ್ರತಿ ವರ್ಷ 10000 ದಿಂದ 20000 ದ ವರೆಗೆ ಚಲನಚಿತ್ರ ಕ್ಷೇತ್ರದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳ ಅವಶ್ಯಕತೆಯಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಅಶೋಕ್ ಕಶ್ಯಪ್ ಹೇಳಿದರು.

    Click Here

    Call us

    Click Here

    ಅವರು ಇಂದು ಮಣಿಪಾಲದ ಎಮ್.ಐ.ಸಿ ಆಡಿಟೋರಿಯಂನಲ್ಲಿ, ಕರ್ನಾಟಕ ಚಲಚಿತ್ರ ಅಕಾಡೆಮಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಷನ್ ಇವರ ಸಹಯೋಗದಲ್ಲಿ ನಡೆದ 5 ದಿನಗಳ ಚಲನಚಿತ್ರ ನಿರ್ಮಾಣ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

    ಹಿಂದೆ ಚಲನಚಿತ್ರ ಉದ್ಯಮದಲ್ಲಿ ಪರಿಣಿತರನ್ನು ತಯಾರುಮಾಡಲು ಹಲವು ವರ್ಷಗಳೇ ಬೇಕಿದ್ದವು ಆದರೆ ಇಂದು ತಾಂತ್ರಿಕತೆ ಮತ್ತು ಈ ಕ್ಷೇತ್ರದಲ್ಲಿ ಅನುಭವ ಹೊಂದಿದ ಪರಿಣಿತರಿಂದ ತರಬೇತಿಗಳು ದೊರೆಯುತ್ತಿರುವುದರಿಂದ ಉತ್ತಮ ಪರಿಣಿತರು ಸೃಷ್ಟಿಯಾಗುತ್ತಿದ್ದಾರೆ ಅಲ್ಲದೆ ಹಲವು ಕಾಲೇಜುಗಳು ಮತ್ತು ವಿಶ್ವ ವಿದ್ಯಾಲಯಗಳು ಇದನ್ನು ಒಂದು ಕೋರ್ಸ್ ಆಗಿ ಭೋಧಿಸುತ್ತಿವೆ ಎಂದರು.

    ಚಲನಚಿತ್ರ ನಿರ್ಮಾಣದಲ್ಲಿ ಅನಿಮೇಶನ್, ಗ್ರಾಫಿಕ್ಸ್, ಉತ್ತಮ ಗುಣಮಟ್ಟದ ವೀಡಿಯೋ ನಿರ್ದೇಶನ ವಿಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ತಂತ್ರಜ್ಞರು ಕಾರ್ಯರ್ನಿಹಿಸುತ್ತಿದ್ದು, ಇವರು ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಚಲನಚಿತ್ರ ನಿರ್ಮಾಣದಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಬಹಳಷ್ಟು ವಿದೇಶಿ ಚಲನಚಿತ್ರಗಳ ನಿರ್ದೇಶಕರು ಮತ್ತು ನಿರ್ಮಾಪಕರು ತಮ್ಮ ಚಿತ್ರ ನಿರ್ಮಾಣದ ತಾಂತ್ರಿಕ ಕಾರ್ಯಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಭಾರತದಲ್ಲಿ ತಯಾರಿಸುತ್ತಿದ್ದಾರೆ. ಚಲನಚಿತ್ರ ವಿಭಾಗದ ವಿದ್ಯಾರ್ಥಿಗಳು ಚಿತ್ರ ನಿರ್ಮಾಣದ ಕೌಶಲ್ಯಗಳನ್ನು ಅರಿಯುವುದು ಅತ್ಯಂತ ಅಗತ್ಯವಿದೆ ಎಂದರು.

    ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ, ಕರ್ನಾಟಕದ ಎಲ್ಲಾ ಭಾಷೆಗಳ ಹಳೆಯ ಚಲನಚಿತ್ರಗಳನ್ನು ಡಿಜಿಟಲ್ ರೂಪ ಕೊಡುವುದೂ ಸೇರಿದಂತೆ ಅದನ್ನು ಸಂರಕ್ಷಿಸುವ ಕಾರ್ಯ ಮಾಡಲು ಸರಕಾರಕ್ಕೆ ಅನುದಾನ ಕೋರಲಾಗಿದೆ ಮತ್ತು ಕನ್ನಡದಲ್ಲೂ ಸಹ ಓಟಿಟಿ ಆರಂಭಿಸುವುದು ಅಗತ್ಯವಿದೆ. ರಾಜ್ಯದ ನಾಲ್ಕು ವಿವಿಗಳನ್ನು ಗುರುತಿಸಿ, ಅವುಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ದೊರಕಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಅವರಿಗೆ ಕಾರ್ಯಗಾರಗಳನ್ನು ನಡೆಸಿ, ಇಂಡಸ್ಟ್ರೀ ತಜ್ಞರಿಂದ ತರಬೇತಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಎಂಐಸಿ ಮಣಿಪಾಲದ ನಿರ್ದೇಶಕಿ ಡಾ. ಪದ್ಮಾರಾಣಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಶ್ರೀರಾಜ್ ಗುಡಿ , ಮಣಿಪಾಲ ಪ್ರಸಾರ ವಿಭಾಗದ ಶುಭಾ ಹಾಜರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    fifteen − 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.