Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾವೈಕ್ಯತೆಯ ಹಣತೆ ಹಚ್ಚಿ ಬೀಳ್ಕೊಡುಗೆ ಪಡೆದುಕೊಂಡ ಕೋಟೇಶ್ವರ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು!
    Uncategorized

    ಭಾವೈಕ್ಯತೆಯ ಹಣತೆ ಹಚ್ಚಿ ಬೀಳ್ಕೊಡುಗೆ ಪಡೆದುಕೊಂಡ ಕೋಟೇಶ್ವರ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು!

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ವಿವಿಧ ಬಣ್ಣದ ರಂಗೋಲಿಗಳಿಂದ ರಚಿಸಲಾದ ಭಾರತದ ಭೂಪಟದ ಜತೆಯಲ್ಲಿ ಭಾರತ ಮಾತೆಯ ರಂಗವಲ್ಲಿ ಚಿತ್ರಕ್ಕೆ ಕೋಟೇಶ್ವರ ಪಬ್ಲಿಕ್ ಸ್ಕೂಲ್‌ನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಣತೆ ಹಚ್ಚಿ ದೀಪ ಬೆಳಗಿಸಿ ಬೀಳ್ಕೋಡುಗೆ ಪಡೆದುಕೊಂಡ ವಿನೂತನ ಕಾರ‍್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು.

    Click Here

    Call us

    Click Here

    ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಿತ್ರಕಲಾ ಶಿಕ್ಷಕ ಡಾ. ಉಪಾಧ್ಯಾಯ ಮೂಡುಬೆಳ್ಳೆ ಇವರ ನೇತೃತ್ವದಲ್ಲಿ ೮ ಅಡಿ ಎತ್ತರದ ೭ ಅಡಿ ಅಗಲದ ಭಾರತ ದೇಶದ ಭೂಪಟದ ಜತೆ ಮಧ್ಯದಲ್ಲಿ ಭಾರತ ಮಾತೆಯ ಚಿತ್ರಣವನ್ನು ರಚಿಸಲಾಗಿತ್ತು. ಶಾಲೆಯ 2022ನೇ ಸಾಲಿನ 126 ಮಂದಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ವೇದಿಕೆಗೆ ಬಂದು ತಮ್ಮ ಭಾವೈಕ್ಯತೆಯ ಸಂದೇಶದೊಂದಿಗೆ ಸರ್ವಧರ್ಮಗಳ ಮಾನವೀಯತೆಯ ಪ್ರತಿಬಿಂಬವನ್ನು ಸಾರುವ ಹಣತೆಗಳ ಮೂಲಕ ಭಾರತ ಮಾತೆ ಹಾಗೂ ಭಾರತ ಭೂಪಟದ ಸುತ್ತ ಎಲ್ಲಾ ವಿದ್ಯಾರ್ಥಿಗಳು ಸೇರಿಕೊಂಡು ಜಾತಿ ಮತ ಭೇದವೆನ್ನದೆ ಹಣತೆಗಳನ್ನು ಹಚ್ಚಿ ಭಾವೈಕ್ಯತೆಯ ಸಂದೇಶದ ಪ್ರತಿಜ್ಞೆ ಸ್ವೀಕರಿಸಿ ಭಾರತ ಮಾತೆಯ ಆಶೀರ್ವಾದವನ್ನು ಪಡೆದುಕೊಂಡು ಪುಳಕೀತರಾದರು.

    ಕೆಪಿಎಸ್ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೆಪಿಎಸ್ ಪ್ರಾಂಶುಪಾಲ ಡೆನ್ನಿಸ್ ಬಾಂಜೆ, ಎಸ್‌ಎಸ್‌ಎಲ್‌ಸಿ ತರಗತಿ ಶಿಕ್ಷಕರಾದ ದಿವ್ಯಾಪ್ರಭಾ, ಸಂಧ್ಯಾ, ಅನುರಾಧಾ, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರಣಮ್ಯ ಸ್ವಾಗತಿಸಿದರು. ಮೇಘನಾ ಮತ್ತು ಪಾಲ್ಗುಣಿ ಕಾರ‍್ಯಕ್ರಮ ನಿರೂಪಿಸಿದರು. ಮಾನ್ಯ ವಂದಿಸಿದರು.

    ಎಳೆವೆಯಲ್ಲಿಯೇ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಭಾವೈಕ್ಯತೆಯನ್ನು ಸಾರುವುದಲ್ಲದೆ ಸಕಾರಾತ್ಮಕ ಚಿಂತನೆಯನ್ನು ವೃದ್ಧಿಸುವ ಜೊತೆಯಲ್ಲಿ ಸಮಾನತೆ ಮತ್ತು ದೇಶ ಭಕ್ತಿಯನ್ನು ಬೆಳಸುವ ಉದ್ದೇಶದಿಂದ ಈ ವಿನೂತನ ಕಾರ‍್ಯಕ್ರಮ ಆಯೋಜಿಸಿದ್ದೇವೆ. ಎಲ್ಲಾ ವಿದ್ಯಾರ್ಥಿಗಳು ತುಂಬು ಮನಸ್ಸಿನಿಂದ ಭಾಗವಹಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ ದೇಶಭಿಮಾನ ಮತ್ತು ಭಾವೈಕ್ಯತೆಯ ಮಹತ್ವವನ್ನು ತಿಳಿದುಕೊಂಡಿದ್ದಾರೆ. – ಡಾ. ಉಪಾಧ್ಯಾಯ ಮೂಡುಬೆಳ್ಳೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಿತ್ರಕಲಾ ಶಿಕ್ಷಕರು, ಕೆಪಿಎಸ್ ಸ್ಕೂಲ್, ಕೋಟೇಶ್ವರ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    six + 13 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.