Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಸ್ತೆಗಳ ಬ್ಲ್ಯಾಕ್‌ಸ್ಪಾಟ್‌ನಲ್ಲಿ ಅಪಘಾತವಾಗಿ ಜೀವಹಾನಿಯಾದಲ್ಲಿ ಅಧಿಕಾರಿಗಳ ವಿರುದ್ಧ ಪ್ರಕರಣ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ರಸ್ತೆಗಳ ಬ್ಲ್ಯಾಕ್‌ಸ್ಪಾಟ್‌ನಲ್ಲಿ ಅಪಘಾತವಾಗಿ ಜೀವಹಾನಿಯಾದಲ್ಲಿ ಅಧಿಕಾರಿಗಳ ವಿರುದ್ಧ ಪ್ರಕರಣ: ಜಿಲ್ಲಾಧಿಕಾರಿ

    Updated:07/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಏ.6:
    ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ರಸ್ತೆ ಬ್ಲ್ಯಾಕ್‌ಸ್ಪಾಟ್‌ನಲ್ಲಿ ಸಂಬಂಧಪಟ್ಟ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು 15 ದಿನಗಳಲ್ಲಿ ತೆರವುಗೊಳಿಸಬೇಕು. 15 ದಿನದ ನಂತರ ಆ ಪ್ರದೇಶದಲ್ಲಿ ಅಪಘಾತ ಸಂಭವಿಸಿ ಜೀವಹಾನಿಯಾದಲ್ಲಿ ರಸ್ತೆಯನ್ನು ನಿರ್ಮಿಸಿ, ನಿರ್ವಹಿಸುತ್ತಿರುವ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದ್ದಾರೆ.

    Click Here

    Call us

    Click Here

    ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಎ ರಲ್ಲಿ ಒಟ್ಟು 33 ಅಪಘಾತ ಸಂಭವಿಸುವ ಬ್ಲ್ಯಾಕ್‌ಸ್ಪಾಟ್‌ಗಳನ್ನು ಗುರುತಿಸಿದ್ದು, ಈ ಪ್ರದೇಶದಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಿದ್ದು, ಇದುವರೆಗೆ ಅಗತ್ಯ ಕ್ರಮ ಕೈಗೊಳ್ಳದ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಇನ್ನು 15 ದಿನದಲ್ಲಿ ಈ ಎಲ್ಲಾ ಪ್ರದೇಶಗಳಲ್ಲಿ ಅಗತ್ಯ ದುರಸ್ಥಿ ಕಾರ್ಯ ಕೈಗೊಂಡು ವರದಿ ನೀಡಬೇಕು. ದುರಸ್ಥಿ ಮಾಡದೇ ಈ ಪ್ರದೇಶದಲ್ಲಿ ಅಪಘಾತ ಸಂಭವಿಸಿ, ಜೀವ ಹಾನಿಯಾದಲ್ಲಿ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ, ಸಾವಿಗೆ ಕಾರಣವಾದ ಕುರಿತು ಪ್ರಕರಣ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

    ಬ್ಲ್ಯಾಕ್‌ಸ್ಪಾಟ್‌ಗಳ ದುರಸ್ಥಿ ಮಾಡುವ ಕುರಿತಂತೆ ರಾಷ್ಟ್ರೀಯ ಹೆದ್ದಾರಿಯ ಯೋಜನಾ ನಿರ್ದೇಶಕರಿಗೆ ಮತ್ತು ಪ್ರಾದೇಶಿಕ ನಿರ್ದೇಶಕರುಗಳಿಗೂ ಸಹ ಪತ್ರ ಬರೆಯುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯೊಳಗಿನ ಇತರೆ ರಸ್ತೆಗಳಲ್ಲಿಯೂ ಇರುವ ಬ್ಲಾಕ್ಸ್ಪಾಟ್ಗಳಲ್ಲಿ ದುರಸ್ಥಿ ಕಾರ್ಯ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಅಧಿಕಾರಿಗಳ ನಿರ್ಲಕ್ಷದಿಂದ ಅಪಘಾತಗಳು ಸಂಭವಿಸಿ ಜೀವ ಹಾನಿಯಾದರೆ, ಮರಳಿ ವ್ಯಕ್ತಿಯ ಜೀವ ತರಲು ಸಾಧ್ಯವೇ ಎಂದು ಪ್ರಶ್ನಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಇತ್ತೀಚೆಗೆ ಸಂತೆಕಟ್ಟೆ ಬಳಿ ಸಂಭವಿಸಿದ ಅಪಘಾತದಲ್ಲಿ ಬಲಿಯಾದ ಪೊಲೀಸ್ ಅಧಿಕಾರಿ ಮತ್ತು ಮಗಳ ಸಾವಿನ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದರು.

    ಮಣಿಪಾಲದ ಟೈಗರ್ ಸರ್ಕಲ್ ಬಳಿ ಅಳವಡಿಸಿರುವ ಸಿಗ್ನಲ್ನಿಂದ ರಸ್ತೆಯ ಬಲ ಮತ್ತು ಎಡ ಬದಿಯ ಕ್ರಾಸ್ಗಳಿಂದ ಬರುವ ವಾಹನ ಸವಾರರಿಗೆ ಸಿಗ್ನಲ್ ಇಲ್ಲದೇ ಇರುವುದರಿಂದ ತೀವ್ರ ತೊಂದರೆಯಾಗುತ್ತಿದ್ದು, ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದರು.

    Click here

    Click here

    Click here

    Click Here

    Call us

    Call us

    ಮಣಿಪಾಲದ ಈಶ್ವರ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಮೀಸಲಿಟ್ಟ ಪ್ರದೇಶದಲ್ಲಿರುವ ರಿಕ್ಷಾ ನಿಲ್ದಾಣ ತೆರವುಗೊಳಿಸುವ ಬಗ್ಗೆ ಬಂದಿರುವ ದೂರಿನ ಕುರಿತಂತೆ ನಗರಸಭೆ, ಆರ್.ಟಿ.ಓ, ಪೋಲೀಸ್ ಮತ್ತು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಿಳಿಸಿದರು.

    ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿಯಿಂದ ಶಿರೂರುವರೆಗೆ ಅಗತ್ಯವಿರುವೆಡೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಎಸ್ಪಿ ತಿಳಿಸಿದರು.

    ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ 2021-22 ನೇ ಸಾಲಿನಲ್ಲಿ 18754 ವಾಹನ ತಪಾಸಣೆ ಮಾಡಿ, 2731 ಪ್ರಕರಣ ದಾಖಲಿಸಿ, 192 ವಾಹನ ಮುಟ್ಟುಗೂಲು ಹಾಕಿ, ತೆರಿಗೆ 79,81,250 ರೂ. ಹಾಗೂ ದಂಡ, 105,77,020 ರೂ. ಸೇರಿದಂತೆ ಒಟ್ಟು 1,85,58.270 ರೂ. ಅನ್ನು ವಸೂಲು ಮಾಡಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಮಾಹಿತಿ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    17 − ten =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.