Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರಳು ದಿಬ್ಬಗಳ ತೆರವು ಹಾಗೂ ಸಾಗಾಣಿಕೆಗೆ ನಿಷೇಧ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮರಳು ದಿಬ್ಬಗಳ ತೆರವು ಹಾಗೂ ಸಾಗಾಣಿಕೆಗೆ ನಿಷೇಧ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಮೇ.23:
    ಉಡುಪಿ ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬಂಧ ಒಟ್ಟು 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿರುತ್ತದೆ. ಅವುಗಳಲ್ಲಿ ಕುಂದಾಪುರ ತಾಲ್ಲೂಕು ವ್ಯಾಪ್ತಿಯ 04 ಮರಳು ದಿಬ್ಬಗಳನ್ನು ತೆರವುಗೊಳಿಸಲು ವಿತರಿಸಲಾದ ಒಟ್ಟು 39 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬAಧಿಸಿದಂತೆ KSCZMA ಯಿಂದ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ಮೇ.29 ರಂದು ಮುಕ್ತಾಯಗೊಂಡಿದ್ದು, ಸದರಿ ಪರವಾನಿಗೆಗಳನ್ನು ಈಗಾಗಲೇ ತಡೆಹಿಡಿಯಲಾಗಿರುತ್ತದೆ ಹಾಗೂ ಸ್ಥಗಿತಗೊಳಿಸಲಾಗಿರುತ್ತದೆ.

    Click Here

    Call us

    Click Here

    ಉಡುಪಿ ಮತ್ತು ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಒಟ್ಟು 19 ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ವಿತರಿಸಲಾದ ಒಟ್ಟು 122 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬಂಧದಿಸಿದಂತೆ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ಅಗಷ್ಟ್ 22ರವರೆಗೆ ಇರುವುದಾಗ್ಯೂ ಪ್ರಸ್ತುತ ಮಾನ್ಯ ಹಸಿರು ಪೀಠ ನ್ಯಾಯಾಲಯ, ದಕ್ಷಿಣ ವಲಯ ಚೆನೈ ನ ಆದೇಶದನುಸಾರ ಉಡುಪಿ ಜಿಲ್ಲಾ 07 ಸದಸ್ಯರ ಸಮಿತಿಯು ಜಿಲ್ಲಾ ವ್ಯಾಪ್ತಿಯಲ್ಲಿ ಮಾನ್ಯ ನ್ಯಾಯಾಲಯದ ಆದೇಶದನ್ವಯ ಕ್ರಮ ಕೈಗೊಂಡಿದ್ದು, ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯಲ್ಲಿ ನೀಡಲಾದ ಚಾಲ್ತಿಯಲ್ಲಿರುವ ಒಟ್ಟು 122 ತಾತ್ಕಾಲಿಕ ಮರಳು ಪರವಾನಿಗೆಗಳನ್ನು ILMS ತಂತ್ರಾಂಶದಲ್ಲಿ ತಡೆಹಿಡಿಯಲು ಮಾನ್ಯ ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬೆಂಗಳೂರು ರವರಿಗೆ ಪತ್ರದ ಮೂಲಕ ಕೋರಲಾಗಿರುತ್ತದೆ.

    ಅದರಂತೆ ILMS ತಂತ್ರಾಂಶದಲ್ಲಿ ಒಟ್ಟು 122 ಪರವಾನಿಗೆಗಳನ್ನು ತಡೆಹಿಡಿದು, ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಹಾಗೂ ಮರಳು ಸಾಗಾಣಿಕೆಯನ್ನು ನಿರ್ಭಂದಿಸಲಾಗಿರುತ್ತದೆ ಹಾಗೂ ತಾತ್ಕಾಲಿಕ ಮರಳು ಪರವಾನಿಗೆದಾರರಿಗೆ ಮರಳು ತೆರವುಗೊಳಿಸುವುದನ್ನು ಸ್ಥಗಿತಗೊಳಿಸಿ, ಮರಳು ದಿಬ್ಬ ಪ್ರದೇಶಗಳಿಂದ ಮರಳು ತೆರವುಗೊಳಿಸಲು ಬಳಸುವ ದೋಣಿಗಳನ್ನು ಹಾಗೂ ಮರಳು ದಕ್ಕೆ ಪ್ರದೇಶದಿಂದ ಮರಳು ಸಾಗಾಣಿಕೆಗೆ ಬಳಸುವ ವಾಹನಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ.

    ಪ್ರಸ್ತುತ ಉಡುಪಿ ಜಿಲ್ಲಾ ವ್ಯಾಪ್ತಿಯ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವುದನ್ನು ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    seven + 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.