Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಳೆಹಾನಿ ಕುರಿತು ಕೆಂದ್ರ ಅಧ್ಯಯನ ತಂಡದಿಂದ ಪರಿಶೀಲನೆ, ಮರವಂತೆ, ಶಿರೂರು ಭಾಗಕ್ಕೆ ಭೇಟಿ
    ಉಡುಪಿ ಜಿಲ್ಲೆ

    ಮಳೆಹಾನಿ ಕುರಿತು ಕೆಂದ್ರ ಅಧ್ಯಯನ ತಂಡದಿಂದ ಪರಿಶೀಲನೆ, ಮರವಂತೆ, ಶಿರೂರು ಭಾಗಕ್ಕೆ ಭೇಟಿ

    Updated:08/09/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಸೆ.08:
    ಜಿಲ್ಲೆಯಲ್ಲಿ ರೈತರು ಬೆಳೆಯುವ ಪ್ರತಿಯೊಂದು ಬೆಳೆಗಳನ್ನೂ ಹಾಗೂ ಮೀನುಗಾರಿಕಾ ಬೋಟ್ ಹಾಗೂ ಪರಿಕರಗಳನ್ನು ವಿಮಾ ವ್ಯಾಪ್ತಿಗೆ ತರುವಂತೆ ಅವರುಗಳನ್ನು ಪ್ರೋತ್ಸಾಹಿಸಬೇಕು. ಇದರಿಂದ ವೈಯಕ್ತಿಕ ನಷ್ಠದ ಪ್ರಮಾಣವು ಕಡಿಮೆಯಾಗುತ್ತದೆ ಎಂದು ಕೇಂದ್ರ ಮಳೆಹಾನಿ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ಅವರು ತಿಳಿಸಿದರು.

    Click Here

    Call us

    Click Here

    ಅವರು ಜಿಲ್ಲೆಯಲ್ಲಿ ಮಳೆಹಾನಿ ಪರಿಸ್ಥಿತಿಯ ಅಧ್ಯಯನಕ್ಕೆ ಆಗಮಿಸಿ, ಉಡುಪಿ ನಗರದ ತಾಲೂಕು ಕಚೇರಿಯಲ್ಲಿ ಜಿಲ್ಲಾಡಳಿತದಿಂದ ನಷ್ಠದ ಅಂಕಿ ಅಂಶಗಳ ವಿವರಗಳನ್ನು ಪಡೆದು ಮಾತನಾಡಿದರು.

    ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಮತ್ತಿತರ ಬೆಳೆ ವಿಮೆಗೆ ಸರ್ಕಾರವು ಪ್ರೀಮಿಯಂ ಹಣವನ್ನು ಶೇ.98 ರಷ್ಟು ತುಂಬುತ್ತಿದ್ದು, ಬಾಕಿ ಉಳಿದ ಶೇ. 2 ರಷ್ಟು ಹಣವನ್ನು ರೈತರು ಪಾವತಿಸಿದ್ದಲ್ಲಿ ರೈತರು ತಮಗಾದ ಬೆಳೆ ನಷ್ಠ ಪರಿಹಾರವನ್ನು ಪಡೆಯಬಹುದು. ಈ ಬಗ್ಗೆ ರೈತರಲ್ಲಿ ಅರಿವು ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸುವಂತೆ ಸೂಚಿಸಿದರು.

    ಮೀನುಗಾರಿಕೆಗೆ ತೆರಳುವ ಬೋಟ್ಗಳು ಕಡ್ಡಾಯವಾಗಿ ವಿಮೆಯನ್ನು ಮಾಡಿಸಲು ಮುಂದಾಗಬೇಕು. ವಿಮೆ ನೋಂದಣಿಯಿಂದ ಬೋಟ್ಗಳಿಗೆ ನಷ್ಠ ಉಂಟಾದಾಗ ಹೆಚ್ಚಿನ ಪರಿಹಾರವನ್ನು ಪಡೆಯಲು ಸಾದ್ಯವಾಗುತ್ತದೆ ಎಂದರು.

    ನೆರೆ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ಸಮುದಾಯದ ಜನರೇ ಹೆಚ್ಚಾಗಿ ಭಾಗಿಯಾಗುವುದರೊಂದಿಗೆ ಹೆಚ್ಚಿನ ಅನಾಹುತಗಳನ್ನು ತಪ್ಪಿಸುತ್ತಾರೆ. ಜಿಲ್ಲಾಡಳಿತವೂ ಸಹ ಕ್ಲಿಷ್ಟಕರ ರಕ್ಷಣಾ ಕಾರ್ಯದಲ್ಲಿ ರಕ್ಷಣಾ ಸಾಮಗ್ರಿಯೊಂದಿಗೆ ತ್ವರಿತವಾಗಿ ಕಾರ್ಯ ಕೈಗೊಳ್ಳಬೇಕು ಎಂದರು.

    Click here

    Click here

    Click here

    Click Here

    Call us

    Call us

    ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಮಾತನಾಡಿ, ಜಿಲ್ಲೆಯಲ್ಲಿ ನೆರೆ ಉಂಟಾದ ಸಂದರ್ಭದಲ್ಲಿ ಆ ತಕ್ಷಣದಲ್ಲೇ ಹೋಗಿ ಸ್ಪಂದಿಸಲು ಉಡುಪಿ ಜಿಲ್ಲಾಡಳಿತವು ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯನ್ನು ರಾಜ್ಯದಲ್ಲಿಯೇ ಉತ್ತಮ ರೀತಿಯಲ್ಲಿ ರೂಪಿಸಿದೆ. 300 ಕ್ಕೂ ಹೆಚ್ಚು ಆಪದ್ ಮಿತ್ರ ಸ್ವಯಂ ಸೇವಕರಿಗೆ ಹಾಗೂ 180 ಕ್ಕೂ ಹೆಚ್ಚು ನೆಹರು ಯುವಕೇಂದ್ರದ ಸ್ವಯಂ ಸೇವಕರಿಗೆ ತರಬೇತಿ ನೀಡಲಾಗಿದೆ ಎಂದರು.

    ಬೆಳೆ ಹಾನಿ ಸಮೀಕ್ಷೆಯನ್ನು ಕೃಷಿ ಹಾಗೂ ಕಂದಾಯ ಇಲಾಖೆಯವರು ಜಂಟಿಯಾಗಿ ಮೊಬೈಲ್ ಆಪ್ ಹಾಗೂ ವೆಬ್ಸೈಟ್ ಅನ್ನು ಬಳಸಿ ಸಮೀಕ್ಷೆ ಮಾಡಿ ನಿಖರ ವರದಿಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ನೀಡಿದ್ದಾರೆ ಎಂದರು.

    ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಳೆಹಾನಿಯ ಅಂಕಿ ಅಂಶಗಳನ್ನು ಅಧ್ಯಯನ ತಂಡಕ್ಕೆ ತಿಳಿಸುತ್ತಾ ಮಾತನಾಡಿ, ಕಳೆದ ಮಾರ್ಚ್ನಿಂದ ಈವರೆಗೆ ಜಿಲ್ಲೆಯಲ್ಲಿ 2 ಜನ ಮೃತಪಟ್ಟು, 65 ಮನೆಗಳು ಪೂರ್ಣ ಪ್ರಮಾಣದಲ್ಲಿ, 424 ಭಾಗಶಃ ಹಾನಿಯಾಗಿದೆ ಹಾಗೂ 1239.73 ಹೆಕ್ಟೇರ್ ನಷ್ಟು ಬೆಳೆಹಾನಿ ಉಂಟಾಗಿದೆ ಎಂದರು.

    ಹೆಚ್ಚಿನ ಮಳೆಯಿಂದಾಗಿ 41.8 ಕಿ.ಮೀ ರಾಷ್ಟಿçÃಯ ಹೆದ್ದಾರಿ, 56.98 ಕಿ.ಮೀ ಜಿಲ್ಲಾ ರಸ್ತೆ, 194 ಕಿ.ಮೀ ನಗರ ಪ್ರದೇಶ ರಸ್ತೆ, 1379.95 ಕಿ.ಮೀ ಗ್ರಾಮೀಣ ರಸ್ತೆ ಹಾಳಾಗಿದೆ. 120 ಕ್ಕೂ ಹೆಚ್ಚು ಸೇತುವೆಗಳು, 1699 ವಿದ್ಯುತ್ ಕಂಬಗಳು ಬಿದ್ದಿವೆ. 335 ಟ್ರಾನ್ಸ್ಫಾರಂ ಹಾಳಾಗಿವೆ. 235 ಶಾಲಾ ಕಟ್ಟಡಗಳು, 78 ಮೀನುಗಾರಿಕಾ ದೋಣಿಗಳು, 90 ಕ್ಕೂ ಹೆಚ್ಚು ಮೀನು ಬಲೆಗಳು ಹಾನಿಯಾಗಿ ಅಂದಾಜು ರೂ. 263.91 ಕೋಟಿಯಷ್ಟು ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದೆ ಎಂದರು.

    ಆಗಸ್ಟ್ 5 ರಿಂದ 7 ರವರೆಗೆ 3 ದಿನಗಳ ಕಾಲ ಹೆಚ್ಚಾಗಿ ಮಳೆ ಸುರಿದು ಜಿಲ್ಲೆಯಲ್ಲಿ ಹೆಚ್ಚಿನ ಹಾನಿ ಉಂಟಾಗಿದೆ ಎಂದ ಅವರು, ಕಡಲ ಕೊರೆತ ತಡೆಗಟ್ಟಲು ಕಡಲ ಕಿನಾರೆಯಲ್ಲಿ ಮುಂಜಾಗ್ರತವಾಗಿ ಸುರಕ್ಷತಾ ಕಾಮಗಾರಿಗಳನ್ನು ಕೈಗೊಂಡಿದ್ದರೂ ಸಹ ಹೊಸ ಹೊಸ ಜಾಗದಲ್ಲಿ ಕಡಲ ಕೊರೆತ ಉಂಟಾಗಿದೆ ಎಂದರು.

    ಜಿಲ್ಲೆಯಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ನೆರೆ ಉಂಟಾದಲ್ಲಿ ಎದುರಿಸಲು ಜಿಲ್ಲಾ ವಿಪತ್ತು ನಿರ್ವಹಣಾ ತಂಡ ಸರ್ವ ಸನ್ನದ್ಧವಾಗಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚೀಂದ್ರ, ಕೇಂದ್ರ ಹಣಕಾಸು ಇಲಾಖೆಯ ಉಪ ನಿರ್ದೇಶಕ ಮಹೇಶ್ ಕುಮಾರ್, ಕೇಂದ್ರ ಇಂಧನ ಇಲಾಖೆಯ ಸಹಾಯಕ ನಿರ್ದೇಶಕಿ ಭವ್ಯಾ ಪಾಂಡೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಸಭೆಯ ನಂತರ ಕೇಂದ್ರ ತಂಡವು ಮಳೆಯಿಂದ ಹಾನಿಗೀಡಾದ ಜಿಲ್ಲೆಯ ಮರವಂತೆ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    fifteen + 7 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.