Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಜೆಟ್ಟಿ ಕುಸಿತದ ಪ್ರಕರಣ: ಖಾಸಗಿ ಸಂಸ್ಥೆಯಿಂದ ತನಿಖೆ, ಶೀಘ್ರ ಮರುನಿರ್ಮಾಣದ ಭರವಸೆ – ಸಚಿವ ಎಸ್. ಅಂಗಾರ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಜೆಟ್ಟಿ ಕುಸಿತದ ಪ್ರಕರಣ: ಖಾಸಗಿ ಸಂಸ್ಥೆಯಿಂದ ತನಿಖೆ, ಶೀಘ್ರ ಮರುನಿರ್ಮಾಣದ ಭರವಸೆ – ಸಚಿವ ಎಸ್. ಅಂಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಜೆಟ್ಟಿ ಕುಸಿತ ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಗೆ ವಹಿಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಿದೆ. ಜೆಟ್ಟಿ ಕುಸಿತದಿಂದ ಮೀನುಗಾರಿಕೆಗೆ ತೊಂದರೆಯಾಗದಂತೆ ಶೀಘ್ರ ಜೆಟ್ಟಿ ಪುನರ್ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್.ಅಂಗಾರ ಸ್ಪಷ್ಟಪಡಿಸಿದರು.

    Click Here

    Call us

    Click Here

    ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಅವರು ಜೆಟ್ಟಿ ಕುಸಿತ ಪ್ರದೇಶವನ್ನು ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿ ಜೆಟ್ಟಿ ಕುಸಿತವನ್ನು ಲೋಕಾಯುಕ್ತ ತನಿಖೆ ನಡೆಸಬೇಕೆಂಬ ಸ್ಥಳೀಯ ಮೀನುಗಾರರ ಬೇಡಿಕೆ ಇದೆ. ಈ ಬಗ್ಗೆ ಸಭೆ ನಡೆಸಿ ಆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು. ಕಾಮಗಾರಿ ಗುಣಮಟ್ಟದ ಬಗ್ಗೆ ಗುತ್ತಿಗೆದಾರರು ಗಮನಹರಿಸಬೇಕಿದ್ದು, ಕಳಪೆ ಕಾಮಗಾರಿ ನಡೆಸಿದ್ದು ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದು ಮತ್ತು ಯಾವ ಯಾವ ಹಂತದಲ್ಲಿ ಎಷ್ಟೆಷ್ಟು ಬಿಲ್ಲು ಮಾಡಲಾಗಿದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಪಡೆದುಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

    ಗಂಗೊಳ್ಳಿ ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕೆಲ ಹೊತ್ತು ಮೀನುಗಾರ ಮುಖಂಡರೊಂದಿಗೆ ಮಾತುಕತೆ ನಡೆಸಿದ ಸಚಿವ ಅಂಗಾರ ಮೀನುಗಾರರ ಸಮಸ್ಯೆಗಳನ್ನು ಆಲಿಸಿದರು. ಈ ಬಗ್ಗೆ ಮಾತನಾಡಿದ ಮೀನುಗಾರ ಮುಖಂಡರಾದ ರಮೇಶ್ ಕುಂದರ್ ಹಾಗೂ ರಾಮಪ್ಪ ಖಾರ್ವಿ, ಕಳಪೆ ಕಾಮಗಾರಿಯಿಂದಾಗಿ ಮೀನುಗಾರರು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಇಲ್ಲಿ ಅಪೂರ್ಣ, ಅಸಮರ್ಪಕ ಕಾಮಗಾರಿಯಿಂದಾಗಿ ನಾವು ಭಟ್ಕಳ, ತದಡಿ, ಮಲ್ಪೆಯಲ್ಲಿ ಬೋಟ್ ನಿಲ್ಲಿಸಿ, ಬರಬೇಕಾದ ಅನಿವಾರ್ಯತೆಯಿದೆ. ಎಂಜಿನಿಯರ್ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದಲೇ ಈ ಅವಘಢ ಉಂಟಾಗಿದ್ದು, ಇವರು ಮೀನುಗಾರರ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ. ಇಲ್ಲಿ ಆಗಿರುವುದು 370 ಮೀ. ಪೈಕಿ ಸುಮಾರು 100 ಮೀ. ಅಷ್ಟೆ. ಆದರೆ 200 ಮೀ. ಆಗಿದೆಯೆಂದು ಹೇಳುತ್ತಿದ್ದಾರೆ. ಅರ್ಧದಷ್ಟು ಸಹ ಕಾಮಗಾರಿ ಆಗದೇ, ಅದೇಗೆ 10 ಕೋ.ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರಶ್ನಿಸಿದ ಅವರು, ಡಿಸೆಂಬರ್ ಒಳಗಾಗಿ ಸಂಪೂರ್ಣ ಕಾಮಗಾರಿ ಮುಗಿಸುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು.

    ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್, ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಇಂಜಿನಿಯರ್ ಶ್ರೀನಿವಾಸ ಮೂರ್ತಿ, ಮೀನುಗಾರಿಕೆ ಇಲಾಖೆ ಅಪರ ನಿರ್ದೇಶಕ ಪಿ.ನಾಗರಾಜ್, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಾದ ಗಣೇಶ, ಉದಯಕುಮಾರ್, ಸುಮಲತಾ, ದಿವಾಕರ ಖಾರ್ವಿ, ಉಪನಿರ್ದೇಶಕ ಕುಮಾರಸ್ವಾಮಿ, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಮೀನುಗಾರ ಸಂಘಟನೆಗಳ ಮುಖಂಡರು, ಮೀನುಗಾರರು ಉಪಸ್ಥಿತರಿದ್ದರು.

    ಇದನ್ನೂ ಓದಿ:
    ► ಗಂಗೊಳ್ಳಿ ಬಂದರು ಜೆಟ್ಟಿ ಕುಸಿತ: ಕಳಪೆ ಕಾಮಗಾರಿ ಆರೋಪ – https://kundapraa.com/?p=62391 .

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    9 − 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.