Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಜೃಂಭಣೆಯಿಂದ ಜರುಗಿದ ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ಶ್ರೀ ಶಾರದೋತ್ಸವ
    ಊರ್ಮನೆ ಸಮಾಚಾರ

    ವಿಜೃಂಭಣೆಯಿಂದ ಜರುಗಿದ ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ಶ್ರೀ ಶಾರದೋತ್ಸವ

    Updated:07/10/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ವತಿಯಿಂದ ಶ್ರೀ ಸೀತಾರಾಚಂದ್ರ ದೇವಸ್ಥಾನದಲ್ಲಿ ಆಯೋಜಿಸಲಾದ 36ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ನಾಲ್ಕು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು.

    Click Here

    Call us

    Click Here

    ಮೂರನೇ ದಿನದ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಹಿಂದು ಧರ್ಮದ ಸಂಸ್ಕೃತಿ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದ್ದು, ಸಮಾಜದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಬಹುಮುಖ್ಯ. ಸಮಾಜದ ಎಲ್ಲಾ ಸ್ತರದ ವ್ಯಕ್ತಿಗಳೂ ಒಂದುಗೂಡಿ ನಡೆಸುವ ಕಾರ್ಯಕ್ರಮ ಯಶಸ್ವಿಯಾಗುವುದಲ್ಲದೇ, ಸಂಘಟನೆಯೂ ಬಲಗೊಳ್ಳುತ್ತದೆ ಎಂದರು.

    ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್, ಕೋಟೇಶ್ವರದ ವಿಘ್ನೇಶ್ವರ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಮಾಲಕ ಮಹೇಶ್ ಬೆಟ್ಟಿನ್, ಹೊನ್ನಾವರದ ಗೋಲ್ ಕಾರ್ಪೋರೇಷನ್ ಎಂ.ಡಿ ಎ.ಆರ್. ನಾಯಕ್, ಉಡುಪಿ ಅರಣ್ಯ ವಿಚಕ್ಷಣಾದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ., ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಬಟವಾಡಿ, ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿಯಂತರರಾದ ಉದಯ ಕುಮಾರ್ ಕೆ.ಸಿ., ತಾಲೂಕು ಪಂಚಾಯತ್ ಮಾಜಿ ಸದಸ್ಯ ಸದಾಶಿವ ಡಿ., ಬೈಂದೂರು ದುರ್ಗಾ ಅರ್ಥ ಮೂವರ‍್ಸ್ ಮಾಲಕ ವೆಂಕಟರಮಣ ಬಿಜೂರು, ಉದ್ಯಮಿಗಳಾದ ಕೆ.ಟಿ. ವೆಂಕಟೇಶ್, ರಾಘವೇಂದ್ರ ಜಿ.ವಿ ಗುಡೆಮನೆ, ಮೂಲ್ಕಿ ಮೂಡುಬಿದಿರೆ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಜೇಂದ್ರ ಎಸ್. ಬೇಲೆಮನೆ, ರತ್ನಾಕರ ಡಿ., ಬೈಂದೂರು ಪ್ರಾಥಮಿಕ ಆರೋಗ್ಯಕೇಂದ್ರದ ವೈದ್ಯೆ ಡಾ. ನಿವೇದಿತಾ ರಾವ್, ಬೈಂದೂರು ರಾಮಕ್ಷತ್ರಿಯ ಮಾತೃಮಂಡಳಿ ಅಧ್ಯಕ್ಷೆ ಇಂದಿರಾ ಶ್ರೀಧರ್, ಬೈಂದೂರು ರಾಮಕ್ಷತ್ರಿಯ ಯುವಕ ಸಮಾಜದ ಗೌರವಾಧ್ಯಕ್ಷ ದಿನಕರ ಪಟವಾಲ್ ಉಪಸ್ಥಿತರಿದ್ದರು.

    ಶಾರದೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡೋತ್ಸವ, ಮಹಿಳೆಯರಿಗಾಗಿ ಆಯೋಜಿಸಲಾದ ವಿವಿಧ ಸ್ವರ್ಧೆಗಳು, ಭಗವದ್ಗೀತಾ ಪಠಣ ಸ್ವರ್ಧೆ ಹಾಗೂ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಭಜನಾ ಕುಣಿತ ಸ್ವರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    ಬೈಂದೂರು ರಾಮಕ್ಷತ್ರಿಯ ಯುವಕ ಸಮಾಜದ ಅಧ್ಯಕ್ಷ ರಾಘವೇಂದ್ರ ದಡ್ಡು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಸುರೇಂದ್ರ ಡಿ ಸ್ವಾಗತಿಸಿ, ಕಾರ್ಯದರ್ಶಿ ಗಿರೀಶ್ ಕಲ್ಲುಕಂಟ ವಂದಿಸಿದರು. ಶಿಕ್ಷಕರಾದ ಗಣಪತಿ ಹೋಬಳಿದಾರ್, ಆನಂದ ಮದ್ದೋಡಿ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ:
    ವಿವಿಧ ರಾಮಕ್ಷತ್ರಿಯ ಸಂಘಟನೆಗಳಿಗಾಗಿ ರಾಜ್ಯ ಮಟ್ಟದ ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ವರ್ಧೆಯನ್ನು ಆಯೋಜಿಸಲಾಗಿತ್ತು. ಸ್ವರ್ಧೆಯಲ್ಲಿ ಉಡುಪಿ ರಾಮಕ್ಷತ್ರಿಯ ಸಂಘ ಪ್ರಥಮ ಬಹುಮಾನ ಪಡೆದು, ಹೊಸನಗರದ ವಿದ್ಯಾವರ್ಧಕ ಮಹಿಳಾ ಮಂಡಳಿ ದ್ವಿತೀಯ ಹಾಗೂ ಗಂಗೊಳ್ಳಿ ರಾಮಕ್ಷತ್ರಿಯ ಸಂಘ ತೃತೀಯ ಬಹುಮಾನ ಪಡೆದುಕೊಂಡರು. ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಭಜನಾ ಕುಣಿತ ಸ್ವರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ರಾಮಕ್ಷತ್ರಿಯ ಮಾತೃಮಂಡಳಿ ಹಾಗೂ ಆಯ್ದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಜರುಗಿತು.

    ಭವ್ಯ ಮೆರವಣಿಗೆ:
    ರಾಮಕ್ಷತ್ರಿಯ ಯುವಕ ಸಮಾಜದ ಪ್ರತಿವರ್ಷವೂ ಮೆರವಣಿಗೆಗೆ ಬುಧವಾರ ಶ್ರೀ ಶಾರದಾಮೂರ್ತಿಯ ವಿಸರ್ಜನಾ ಮೆರವಣೆಗೆ ಸಾರ್ವಜನಿಕರ ಗಮನ ಸೆಳೆಯಿತು. ಆಕರ್ಷಕ ಸ್ಥಬ್ಧಚಿತ್ರಗಳು, ಚಂಡೆ, ನಾಸಿಕ್ ಬ್ಯಾಂಡ್, ಭಜನಾ ತಂಡಗಳು ಮೆರವಣಿಗೆಗೆ ವಿಶೇಷ ರಂಗು ನೀಡಿದ್ದವು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    15 − eleven =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.