Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಂತಾರ ನೋಡಿ ರಿಷಬ್ ಶೆಟ್ಟಿ, ಚಿತ್ರತಂಡವನ್ನು ಹಾಡಿಹೊಗಳಿದ ಸೂಪರ್ ಸ್ಟಾರ್ ರಜನಿಕಾಂತ್!
    Uncategorized

    ಕಾಂತಾರ ನೋಡಿ ರಿಷಬ್ ಶೆಟ್ಟಿ, ಚಿತ್ರತಂಡವನ್ನು ಹಾಡಿಹೊಗಳಿದ ಸೂಪರ್ ಸ್ಟಾರ್ ರಜನಿಕಾಂತ್!

    Updated:26/10/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ಕಾಂತಾರ (Kantara) ಸಿನಿಮಾದ ಗೆಲುವು ರಿಷಬ್ ಶೆಟ್ಟಿ ಅವರಿಗೆ ಅಚ್ಚರಿ ಮೇಲೆ ಅಚ್ಚರಿ ನೀಡುತ್ತಿದೆ. ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಈ ಸಿನಿಮಾ ನೋಡಿ, ಮೆಚ್ಚಿಕೊಂಡಿದ್ದಾರೆ. ಅನೇಕ ತಾರೆಯರು ಸ್ವತಃ ರಿಷಬ್ ಶೆಟ್ಟಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಅವರು ಕಾಂತಾರ ಸಿನಿಮಾ ನೋಡಿ ರಿಷಬ್ ಅವರ ಜೊತೆ ಮಾತನಾಡಿ, ಬಳಿಕ ಟ್ವಿಟ್ ಮಾಡಿ ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ.

    Click Here

    Call us

    Click Here

    ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚಿಕೊಂಡ ಸೂಪರ್ ಸ್ಟಾರ್ ರಜನಿಕಾಂತ್‘ಕಾಂತಾರ ಸಿನಿಮಾ ನೋಡುವಾಗ ರೋಮಾಂಚನ ಆಯಿತು. ರಿಷಬ್ ಶೆಟ್ಟಿ ಅವರಿಗೆ ಹ್ಯಾಟ್ಸಾಫ್. ಭಾರತೀಯ ಚಿತ್ರರಂಗದಲ್ಲಿ ಮಾಸ್ಟರ್ ಪೀಸ್ ಎನಿಸಿಕೊಂಡಿರುವ ಈ ಚಿತ್ರದ ಇಡೀ ತಂಡಕ್ಕೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ರಿಷಬ್ ಶೆಟ್ಟಿ ಅವರಿಗೂ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ.

    “The unknown is more than the known” no one could have said this better in cinema than @hombalefilms #KantaraMovie you gave me goosebumps @shetty_rishab Rishab hats off to you as a writer,director and actor.Congrats to the whole cast and crew of this masterpiece in indian cinema

    — Rajinikanth (@rajinikanth) October 26, 2022

    ಇದಕ್ಕೆ ಪ್ರತಿಕ್ರಿಯಿಸಿರುವ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ.

    ಹೊಂಬಾಳೆ ಸಂಸ್ಥೆ ನಿರ್ಮಿಸಿ, ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊದಲ ದಿನದಂದು ಈವರೆಗೂ ಹಣ ಗಳಿಕೆಯಲ್ಲಿ ಅದು ಯಾವತ್ತೂ ಹಿಂದೆ ಬಿದ್ದಿಲ್ಲ. 25ನೇ ದಿನದ ತನಕ 180 ಕೋಟಿಗೂ ಅಧಿಕ ಹಣವನ್ನು ಕಾಂತಾರ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈ ವಾರದ ಕೊನೆಯಲ್ಲಿ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುತ್ತಾರೆ ಟ್ರೇಡ್ ಅನಾಲಿಸಿಸ್.

    Click here

    Click here

    Click here

    Call us

    Call us

    ಈವರೆಗೂ ಕರ್ನಾಟಕವೊಂದರಲ್ಲೇ 100 ಕೋಟಿಗೂ ಅಧಿಕ ಹಣ ತಂದುಕೊಟ್ಟಿರುವ ಕಾಂತಾರ, ತೆಲಂಗಾಣ, ಉತ್ತರ ಭಾರತ, ಕೇರಳ, ವಿದೇಶದಿಂದ ಬಂದ ಒಟ್ಟು ಹಣ 80 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ವಾರದ ಒಳಗೆ ಸಲೀಸಾಗಿ ಕಾಂತಾರ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.

    ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ ಭರ್ತಿ ಆಗುತ್ತಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ರಿಷಬ್ ಹೇಳಿಕೊಂಡಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d